ಮಣಿಪುರದಲ್ಲಿ ಕಳೆದ ವರ್ಷ ಮೇ ತಿಂಗಳಲ್ಲಿ ಪ್ರಾರಂಭವಾದ ಜನಾಂಗೀಯ ಗಲಭೆಯ ಪರಿಣಾಮ ನೂರಾರು ಮಂದಿಯನ್ನು ಬಲಿ ಪಡೆದಿದ್ದು, ಕೋಟ್ಯಾಂತರ ರೂಪಾಯಿಗಳ ಆಸ್ತಿ-ಪಾಸ್ತಿ ನಷ್ಟ ಮಾಡಿದೆ. ಅದಾಗ್ಯೂ, ಅಕ್ಟೋಬರ್ 2ರಂದು ವೇಳೆ ಮಣಿಪುರದ ಉಖ್ರುಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯ ವೇಳೆ ಗುಂಪೊಂದು ಪೊಲೀಸ್ ಠಾಣೆಯಿಂದ ಲೂಟಿ ಮಾಡಿದ್ದ ಹದಿನಾರು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಣಿಪುರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಇನ್ಸ್‌ಪೆಕ್ಟರ್ ಜನರಲ್ (ಕಾರ್ಯಾಚರಣೆ) ಐಕೆ ಮುಯಿವಾಹ್, ಅಕ್ಟೋಬರ್ 2 ರಂದು ಎರಡು ಗ್ರಾಮಗಳ ನಡುವಿನ ಘರ್ಷಣೆಯ ಸಂದರ್ಭದಲ್ಲಿ ಉದ್ರೇಕಗೊಂಡ ಗುಂಪು ಪೊಲೀಸ್ ಠಾಣೆಗೆ ನುಗ್ಗಿ 20 ಬಂದೂಕುಗಳನ್ನು ಲೂಟಿ ಮಾಡಿದೆ ಎಂದು ಹೇಳಿದ್ದಾರೆ.
ಭದ್ರತಾ ಪಡೆಗಳು, ಸಿವಿಲ್ ಸೊಸೈಟಿ ಸಂಘಟನೆಗಳು ಮತ್ತು ಸಮುದಾಯದ ಮುಖಂಡರ ಸಹಕಾರದೊಂದಿಗೆ ಈಗ 80%ದಷ್ಟು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದು, ಉಳಿದ ಆಯುಧಗಳನ್ನು ವಾಪಾಸು ಪಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ 9 ಎಂಎಂ ಪಿಸ್ತೂಲ್‌ಗಳು, ಐಎನ್‌ಎಸ್‌ಎಎಸ್ ರೈಫಲ್ಸ್ ಮತ್ತು ಎಕೆ -47 ರೈಫಲ್‌ಗಳು ಸೇರಿವೆ ಎಂದು ಅವರು ಹೇಳಿದ್ದಾರೆ.
ಇದನ್ನೂಓದಿ: ಚುನಾವಣೋತ್ತರ ಸಮೀಕ್ಷೆ | ಹರಿಯಾಣ-ಕಾಶ್ಮೀರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಸಾಧ್ಯತೆ
ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಮಣಿಪುರ ರೈಫಲ್ಸ್, ಅಸ್ಸಾಂ ರೈಫಲ್ಸ್ ಮತ್ತು ಬಿಎಸ್ಎಫ್ ಸೇರಿದಂತೆ ಭದ್ರತಾ ಪಡೆಗಳು ಎರಡು ಗ್ರಾಮಗಳ ಮುಖಂಡರ ಸಹಕಾರದೊಂದಿಗೆ ತೀವ್ರ ನಿಗಾ ಇರಿಸಿದ್ದಾರೆ ಎಂದು ಮುಯಿವಾಹ್ ಹೇಳಿದ್ದಾರೆ. “ಇಂತಹ ಅಭೂತಪೂರ್ವ, ಗಮನಾರ್ಹ ಮತ್ತು ಸಹಜತೆಯನ್ನು ಪುನಃಸ್ಥಾಪಿಸುವಲ್ಲಿ ಅತ್ಯಂತ ಸಕಾರಾತ್ಮಕ ಪಾತ್ರವನ್ನು ವಹಿಸಿದ ಎಲ್ಲರಿಗೂ ಪ್ರಶಂಸೆಗೆ ಅರ್ಹವಾಗಿದೆ” ಎಂದು ಅವರು ಹೇಳಿದ್ದಾರೆ.
ಅಸ್ಸಾಂ ರೈಫಲ್ಸ್‌ನ ಅಧಿಕಾರಿ ಸಂಜೀವ್ ಸಿಂಗ್ ಮಾತನಾಡಿ, “ಸೇನೆಯನ್ನು ಕನಿಷ್ಠ ಬಳಕೆ ಮಾಡಿ ಅಥವಾ ಸೇನೆಯನ್ನು ಬಳಸದೆ” ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.
‘ಸ್ವಚ್ಛತಾ ಅಭಿಯಾನ’ದ ಅಂಗವಾಗಿ ಪಟ್ಟಣದ ವಿವಾದಿತ ಭೂಮಿಯನ್ನು ಸ್ವಚ್ಛಗೊಳಿಸುವ ವಿಚಾರವಾಗಿ ಅಕ್ಟೋಬರ್ 2 ರಂದು ನಾಗಾ ಸಮುದಾಯಕ್ಕೆ ಸೇರಿದ ಆದರೆ ಎರಡು ವಿಭಿನ್ನ ಗ್ರಾಮಗಳಿಗೆ ಸೇರಿದ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.
ಘರ್ಷಣೆಯ ನಂತರ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು


