Homeಮುಖಪುಟಮಣಿಪುರ ಹಿಂಸಾಚಾರ: ಸಿಎಂ ಸಿಂಗ್‌ರನ್ನು ಪದಚ್ಯುತಗೊಳಿಸಲು ಸರ್ವಪಕ್ಷ ಸಭೆಯಲ್ಲಿ ಒತ್ತಾಯ

ಮಣಿಪುರ ಹಿಂಸಾಚಾರ: ಸಿಎಂ ಸಿಂಗ್‌ರನ್ನು ಪದಚ್ಯುತಗೊಳಿಸಲು ಸರ್ವಪಕ್ಷ ಸಭೆಯಲ್ಲಿ ಒತ್ತಾಯ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಪದಚ್ಯುತಗೊಳಿಸಬೇಕು. ಏಕೆಂದರೆ ರಾಜ್ಯದ ಜನರು ಅವರ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ಎಂದು ಪ್ರತಿಪಕ್ಷ ನಾಯಕರು ಶನಿವಾರ ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯ ನಂತರ ಮಾತನಾಡಿದ ಆರ್‌ಜೆಡಿ ಸಂಸದ ಮನೋಜ್ ಝಾ ಅವರು. ”ಮಣಿಪುರದಲ್ಲಿ ಆಡಳಿತದ ನೇತೃತ್ವ ವಹಿಸುವ ವ್ಯಕ್ತಿಯ ಮೇಲೆ ನಂಬಿಕೆ ಇಲ್ಲ ಎಂದು ಹೇಳುವ ಮಟ್ಟಕ್ಕೆ ಇಡೀ ಪ್ರತಿಪಕ್ಷಗಳು ಬಂದಿವೆ. ಆ ವ್ಯಕ್ತಿ ಉಸ್ತುವಾರಿಯಾಗುವವರೆಗೂ ನೀವು ಶಾಂತಿಯನ್ನು ಹೊಂದಲು ಸಾಧ್ಯವಿಲ್ಲ” ಎಂದು ಹೇಳಿದರು.

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಕುರಿತು ಚರ್ಚಿಸಲು ಜೂನ್ 22 ರಂದು ಗೃಹ ಸಚಿವ ಅಮಿತ್ ಶಾ ಅವರು ಸರ್ವಪಕ್ಷ ಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಕಾಂಗ್ರೆಸ್, ಭಾರತೀಯ ಜನತಾ ಪಕ್ಷ, ಆರ್‌ಜೆಡಿ, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಆಮ್ ಆದ್ಮಿ ಪಕ್ಷ, ದ್ರಾವಿಡ ಮುನ್ನೇತ್ರ ಕಳಗಂ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ, ಸಮಾಜವಾದಿ ಪಕ್ಷ, ನ್ಯಾಷನಲ್ ಪೀಪಲ್ಸ್ ಪಾರ್ಟಿ ಮತ್ತು ಬಿಜು ಜನತಾ ದಳ ಇತರ ಮುಖಂಡರು ಭಾಗವಹಿಸಿದ್ದರು.

ಮಣಿಪುರದಲ್ಲಿ ಮೇ 3ರಿಂದ ಮೈತಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳು ನಡೆಯುತ್ತಲೇ ಇವೆ. ಈ ಹಿಂಸಾಚಾರದಲ್ಲಿ 100ಕ್ಕೂ ಹೆಚ್ಚು ಜನರ ಸಾವಿಗೀಡಾಗಿದ್ದಾರೆ, 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು ಸಾವಿರಾರು ಮಂದಿ ಸ್ಥಳಾಂತರಗೊಂಡಿದ್ದಾರೆ. ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಬೇಕೆಂಬ ಬಹುಸಂಖ್ಯಾತ ಮೈತಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಸಾವಿರಾರು ಜನರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ನಂತರ ಹಿಂಸಾಚಾರ ಾರಂಭವಾಯಿತು.

ಮಣಿಪುರದಲ್ಲಿ ಹಿಂಸಾಚಾರವನ್ನು ಕೊನೆಗೊಳಿಸಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳು ಬೇಕಿರುವಷ್ಟು ಪ್ರಯತ್ನಗಳನ್ನು ಮಾಡಿಲ್ಲ ಎಂದು ಹಲವಾರು ವಿರೋಧ ಪಕ್ಷಗಳು ಟೀಕಿಸಿವೆ.

ಶನಿವಾರ, ಗೃಹ ಸಚಿವರು ಆಯೋಜಿಸಿದ ಸರ್ವಪಕ್ಷ ಸಭೆಯು “ಕೇವಲ ಕಣ್ಣು ಒರೆಸುವ” ಮತ್ತು ಔಪಚಾರಿಕವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿನಿಧಿ, ಮಣಿಪುರದ ಮಾಜಿ ಮುಖ್ಯಮಂತ್ರಿ ಒಕ್ರಾಮ್ ಇಬೋಬಿ ಸಿಂಗ್ ಅವರಿಗೆ ಹೆಚ್ಚಿಗೆ ಮಾತನಾಡಲು ಅವಕಾಶ ನೀಡಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾ ಗಾಂಧಿ

”ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮಣಿಪುರದ ಏಕೈಕ ನಾಯಕ ಹಾಗೂ ಮಣಿಪುರದ ಪ್ರತಿನಿಧಿಯಾಗಿರುವ ಮಾಜಿ ಸಿಎಂ ಒಕ್ರಾಮ್ ಇಬೋಬಿ ಸಿಂಗ್ ಅವರಿಗೆ ಸಂಪೂರ್ಣವಾಗಿ ವಿಚಾರವನ್ನು ಹೇಳಲು ಅವಕಾಶ ನೀಡದಿರುವುದು ಅವರಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ಮಣಿಪುರದ ಜನತೆಗೆ ಮಾಡಿದ ಅವಮಾನವಾಗಿದೆ” ಅವರು ಹೇಳಿದರು.

”ನಾನು ಮಣಿಪುರ ವಿವಿಧ ಸಮುದಾಯಗಳ ಗುಂಪುಗಳನ್ನು ಭೇಟಿ ಮಾಡಿದ್ದೇನೆ ಮತ್ತು ಅವರೆಲ್ಲರೂ ಮಣಿಪುರದ ಮುಖ್ಯಮಂತ್ರಿಯ ಮೇಲೆ ವಿಶ್ವಾಸವಿಲ್ಲ ಎನ್ನುವ ಮಾತುಗಳನ್ನೇ ಹೇಳಿದ್ದಾರೆ” ಎಂದು ಸಭೆಯ ನಂತರ ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕಿ ಪ್ರಿಯಾಂಕಾ ಚತುರ್ವೇದಿ ಹೇಳಿದ್ದಾರೆ.

ಮುಂದಿನ ವಾರ ಮಣಿಪುರಕ್ಕೆ ಸರ್ವಪಕ್ಷಗಳ ನಿಯೋಗವನ್ನು ಕಳುಹಿಸಬೇಕೆಂದು ತೃಣಮೂಲ ಕಾಂಗ್ರೆಸ್ ಒತ್ತಾಯಿಸಿದೆ.

”ಮಣಿಪುರದ ಜನರ ವಿಶ್ವಾಸವನ್ನು ಹೆಚ್ಚಿಸಲು ಮತ್ತು ಅಲ್ಲಿ ಶಾಂತಿ ಸ್ಥಾಪಿಸಲುಯ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಮುಂದಿನ ವಾರದಲ್ಲಿ ರಾಜ್ಯಕ್ಕೆ ಸರ್ವಪಕ್ಷಗಳ ನಿಯೋಗವನ್ನು ಕಳುಹಿಸಬೇಕೆಂದು ಒತ್ತಾಯಿಸುತ್ತದೆ” ಎಂದು ಪಕ್ಷವು ಹೇಳಿದೆ.

”ಕೇಂದ್ರ ಸರ್ಕಾರವು ಮಣಿಪುರ ಬಿಕ್ಕಟ್ಟನ್ನು ನಿರ್ಲಕ್ಷಿಸುತ್ತಿದೆ ಎಂಬ ಸಂದೇಶ ಹೊರಬಿದ್ದಿದೆ. ಅದನ್ನು ಸರಿಪಡಿಸಲು, ಅಲ್ಲಿಯ ಜನಸಮುದಾಯವನ್ನು ಕಾಳಜಿ ಮಾಡಲು, ಶಾಂತಿ ಮತ್ತು ಸಾಮರಸ್ಯವನ್ನು ಪುನಃಸ್ಥಾಪಿಸುವ ಕೆಲಸವಾಗಬೇಕಿದೆ” ಎಂದು ಟಿಎಂಸಿ ಹೇಳಿದೆ.

ಈ ವೇಳೆ ಅಮಿತ್ ಶಾ ಮಾತನಾಡಿ, ಪ್ರಧಾನಿಯವರ ಸೂಚನೆಯ ಮೇರೆಗೆ ಬಿಜೆಪಿಯ ಮಣಿಪುರ ಉಸ್ತುವಾರಿ ಸಂಬಿತ್ ಪಾತ್ರಾ ಅವರು ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಪ್ರತಿಪಕ್ಷಗಳಿಗೆ ತಿಳಿಸಿದರು.

”ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಸಲಹೆಗಳನ್ನು ನೀಡಿವೆ. ಕೇಂದ್ರ ಸರ್ಕಾರವು ಅವುಗಳನ್ನು ಮುಕ್ತ ಮನಸ್ಸಿನಿಂದ ಪರಿಗಣಿಸುತ್ತದೆ” ಎಂದು ಹೇಳಿದ್ದಾರೆ.

”ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಸೂಕ್ಷ್ಮವಾಗಿ ಮತ್ತು ರಾಜಕೀಯವನ್ನು ಬದಿಗಿಟ್ಟು ತಮ್ಮ ಸಲಹೆಗಳನ್ನು ನೀಡಿವೆ. ಭಾರತ ಸರ್ಕಾರ ಈ ಸಲಹೆಗಳನ್ನು ಮುಕ್ತ ಮನಸ್ಸಿನಿಂದ ಪರಿಗಣಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಮೊದಲ ದಿನದಿಂದ ಮಣಿಪುರದ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ನಮಗೆ ಮಾರ್ಗದರ್ಶನ ನೀಡುತ್ತಿದ್ದಾರೆ” ಎಂದು ಶಾ ಹೇಳಿದ್ದಾರೆ.

”ಎಲ್ಲರನ್ನೂ ಒಗ್ಗೂಡಿಸಿ ಮಣಿಪುರ ಸಮಸ್ಯೆಯನ್ನು ಪರಿಹರಿಸಲು ಮೋದಿ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಹಿಂಸಾಚಾರದಿಂದ ಇನ್ನು ಮುಂದೆ ಯಾವುದೇ ಜೀವಗಳು ಬಲಿಯಾಗಬಾರದು ಎಂಬುದು ಮೋದಿ ಸರ್ಕಾರದ ಆದ್ಯತೆಯಾಗಿದೆ” ಎಂದು ಹೇಳಿದರು.

”ಮಣಿಪುರದಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಜೂನ್ 13 ರ ತಡರಾತ್ರಿಯಿಂದ ರಾಜ್ಯದಲ್ಲಿ ಹಿಂಸಾಚಾರದಲ್ಲಿ ಒಬ್ಬರೂ ಸಾವನ್ನಪ್ಪಿಲ್ಲ. ರಾಜ್ಯದಲ್ಲಿ 36,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ, 40 ಐಪಿಎಸ್ ಅಧಿಕಾರಿಗಳನ್ನು ಮಣಿಪುರಕ್ಕೆ ಕಳುಹಿಸಲಾಗಿದೆ, 20 ವೈದ್ಯಕೀಯ ತಂಡಗಳನ್ನು ಕಳುಹಿಸಲಾಗಿದ. ಔಷಧಿಗಳು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಪೂರೈಕೆಯನ್ನು ಖಾತ್ರಿಪಡಿಸಲಾಗುತ್ತಿದೆ” ಎಂದು ಶಾ ಹೇಳಿದ್ದಾರೆ.

ಚುರಚಂದಪುರದಲ್ಲಿ ಮೌನ ರ್ಯಾಲಿ ನಡೆಯಿತು

ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಶನಿವಾರ ಜಂಟಿ ವಿದ್ಯಾರ್ಥಿ ಸಂಘಟನೆಯು ರಾಜ್ಯದಲ್ಲಿ ನಡೆದ ಹಿಂಸಾಚಾರದಲ್ಲಿ ಹುತಾತ್ಮರಾದ ಆದಿವಾಸಿಗಳನ್ನು ಸ್ಮರಿಸಲು ಮೌನ ರ್ಯಾಲಿಯನ್ನು ಆಯೋಜಿಸಿತ್ತು. ಕಪ್ಪು ಬಟ್ಟೆಗಳನ್ನು ಧರಿಸಿ, ಭಾಗವಹಿಸುವವರು ಜನಾಂಗೀಯ ಸಂಘರ್ಷದಲ್ಲಿ ಸತ್ತವರನ್ನು ಪ್ರತಿನಿಧಿಸಲು 100 ಡಮ್ಮಿ ಶವಪೆಟ್ಟಿಗೆಯನ್ನು ಹೊತ್ತುಕೊಂಡು ಮೌನವಾಗಿ ಭಾಗವಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...