Homeಮುಖಪುಟಮಣಿಪುರ ಹಿಂಸಾಚಾರ: ಸಿಆರ್‌ಪಿಎಫ್‌ ಯೋಧನಿಗೆ ಗುಂಡಿಕ್ಕಿ ಹತ್ಯೆ

ಮಣಿಪುರ ಹಿಂಸಾಚಾರ: ಸಿಆರ್‌ಪಿಎಫ್‌ ಯೋಧನಿಗೆ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಮಣಿಪುರದ ಚುರಾಚಂದ್‌ಪುರ ಜಿಲ್ಲೆಯ ತನ್ನ ಮನೆಗೆ ರಜೆಯ ಮೇಲೆ ತೆರಳಿದ್ದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ಕೋಬ್ರಾ ಘಟಕದ ಕಮಾಂಡೋ ಒಬ್ಬರನ್ನು ಶುಕ್ರವಾರ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

204ನೇ ಕೋಬ್ರಾ ಬೆಟಾಲಿಯನ್‌ನ ಡೆಲ್ಟಾ ಕಂಪನಿಯ ಕಾನ್‌ಸ್ಟೆಬಲ್ ಚೋನ್‌ಖೋಲೆನ್ ಹಾಕಿಪ್ ಅವರನ್ನು ಶುಕ್ರವಾರ ಮಧ್ಯಾಹ್ನ 2 ರಿಂದ 3 ಗಂಟೆಯ ನಡುವೆ ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಂಟ್ರಲ್ ರಿಸರ್ವ್ ಪೋಲೀಸ್ ಫೋರ್ಸ್‌ನ ಕೋಬ್ರಾ ಬೆಟಾಲಿಯನ್‌ನ ಕಂಟ್ರೋಲ್ ರೂಮ್‌ಗೆ ಸಂಜೆ 5.50 ವೇಳೆಗೆ ಹಾಕಿಪ್ ಸಾವಿನ ಬಗ್ಗೆ ಅವರ ಸಹೋದರನಿಂದ ಮಾಹಿತಿ ಸಿಕ್ಕಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಹಿಂಸಾಚಾರ ತಾರಕಕ್ಕೇರಿದೆ. ಬುಧವಾರದಿಂದ ಇಲ್ಲಿಯವರಿಗೆ ಕನಿಷ್ಠ 13 ಜೀವಗಳನ್ನು ಬಲಿ ತೆಗೆದುಕೊಂಡಿದೆ ಎಂದು ಇಂಫಾಲ್‌ನ ಪ್ರಾದೇಶಿಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಹಿರಿಯ ಅಧಿಕಾರಿ ಶುಕ್ರವಾರ ಮಧ್ಯಾಹ್ನ ‘ಸ್ಕ್ರಾಲ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ದಾಖಲೆ ರಹಿತ ವಲಸಿಗರ ಪತ್ತೆಗೆ ಮನೆಮನೆ ಸರ್ವೇ: ಮಣಿಪುರ ಸರ್ಕಾರ

ಮಣಿಪುರದ 16 ಜಿಲ್ಲೆಗಳ ಪೈಕಿ ಒಂಬತ್ತು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಸುಮಾರು 20,000 ಜನರು ನಿರಾಶ್ರಿತರಾಗಿದ್ದಾರೆ ಮತ್ತು ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಬೇಕೆಂಬ ಬಹುಸಂಖ್ಯಾತ ಮೈತೇಯಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ ನಂತರ ಬುಧವಾರ ಹಿಂಸಾಚಾರ ಭುಗಿಲೆದ್ದಿತು.

ಕಳೆದ ತಿಂಗಳು ವಿಚಾರಣೆಯನ್ನು ನಡೆಸಿದ ಮಣಿಪುರ ಉಚ್ಚ ನ್ಯಾಯಾಲಯವು, ಮೈತೇಯಿ ಸಮುದಾಯದ ಬೇಡಿಕೆಯ ಅರ್ಜಿಗಳನ್ನು ಪರಿಗಣಿಸಲು ಮತ್ತು ಅದನ್ನು “ತ್ವರಿತವಾಗಿ” ವಿಲೇವಾರಿ ಮಾಡಲು ಬಿಜೆಪಿ ಸರ್ಕಾರಕ್ಕೆ ಸೂಚಿಸಿತ್ತು.

ಹಾಕಿಪ್‌ನ ಹತ್ಯೆಯ ಹಿನ್ನೆಲೆಯಲ್ಲಿ, ಕೇಂದ್ರೀಯ ಮೀಸಲು ಪೊಲೀಸ್ ಪಡೆ ಶುಕ್ರವಾರ ಮಣಿಪುರದ ತನ್ನ ಎಲ್ಲಾ ಸಿಬ್ಬಂದಿಗೆ ಸಂದೇಶವನ್ನು ರವಾನಿಸಿದೆ. ರಜೆಯಲ್ಲಿ ಇರುವ ಎಲ್ಲಾ ಸಿಬ್ಬಂದಿ ತಮ್ಮ ಕುಟುಂಬ ಸದಸ್ಯರೊಂದಿಗೆ ಹತ್ತಿರದ ಭದ್ರತಾ ನೆಲೆಗೆ ಬಂದು ತಕ್ಷಣ ವರದಿ ಮಾಡಬೇಕೆಂದು ಸೂಚಿಸಲಾಗಿದೆ. ಅಂತಹ ಸಿಬ್ಬಂದಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಸಿಆರ್‌ಪಿಎಫ್‌ನ ನಾಗಾಲ್ಯಾಂಡ್ ಸೆಕ್ಟರ್ ಆಫೀಸ್‌ಗೆ ತಿಳಿಸಲಾಗಿದೆ.

ಶುಕ್ರವಾರ ಮುಂಜಾನೆ, ಉಗ್ರಗಾಮಿ ಗುಂಪುಗಳು ಮತ್ತು ಭದ್ರತಾ ಪಡೆಗಳ ನಡುವೆ ಮಧ್ಯಂತರ ಗುಂಡಿನ ಚಕಮಕಿಗಳು ನಡೆದಿವೆ. ಚುರಾಚಂದ್‌ಪುರ ಜಿಲ್ಲೆಯ ಕಾಂಗ್‌ವೈ, ಪಕ್ಕದ ಬಿಷ್ಣುಪುರ ಜಿಲ್ಲೆಯ ಫೌಗಕ್‌ಚಾವೊದ ಪಶ್ಚಿಮ ಗುಡ್ಡಗಾಡು, ಇಂಫಾಲ್ ಪೂರ್ವ ಜಿಲ್ಲೆಯ ದೋಲೈತಾಬಿ ಮತ್ತು ಪುಖಾವೊದಲ್ಲಿ ಗುಂಡಿನ ಘರ್ಷಣೆಗಳು ವರದಿಯಾಗಿವೆ.

ಇದನ್ನೂ ಓದಿರಿ: ಮಣಿಪುರ ಹಿಂಸಾಚಾರ: ರೈಲು ಸಂಚಾರ, ಇಂಟರ್ನೆಟ್ ಸ್ಥಗಿತ

ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ 6,000 ಕ್ಕೂ ಹೆಚ್ಚು ಸೈನಿಕರನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ. ರಾಜ್ಯದ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಕೇಂದ್ರದ ಕ್ಷಿಪ್ರ ಕಾರ್ಯಪಡೆಯ ತಂಡಗಳು ಧಾವಿಸಿವೆ.

ಮಣಿಪುರದ ಜನಸಂಖ್ಯೆಯ 60% ರಷ್ಟಿರುವ ಮೈತೇಯಿ ಸಮುದಾಯದ ಸದಸ್ಯರು ಹೆಚ್ಚಾಗಿ ಇಂಫಾಲ್ ಕಣಿವೆಯಲ್ಲಿ ಇದ್ದಾರೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳಿಂದ ದೊಡ್ಡ ಪ್ರಮಾಣದ ಅಕ್ರಮ ವಲಸೆಯಿಂದಾಗಿ ತೊಂದರೆಗಳನ್ನು ಎದುರಿಸುತ್ತಿರುವುದಾಗಿ ಸಮುದಾಯವು ಹೇಳಿಕೊಂಡಿದೆ. ಅಸ್ತಿತ್ವದಲ್ಲಿರುವ ಕಾನೂನುಗಳ ಪ್ರಕಾರ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ನೆಲೆಸಲು ವಲಸಿಗರಿಗೆ ಅವಕಾಶವಿಲ್ಲ.

ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ನೀಡಿದರೆ ಮೈತೇಯಿ ತಮ್ಮ ಭೂ ಸಂಪನ್ಮೂಲಗಳನ್ನು ಸ್ವಾಧೀನ ಮಾಡಿಕೊಳ್ಳಬಹುದು ಎಂದು ಕುಕಿ ಸಮುದಾಯ ಆತಂಕಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...