Homeಮುಖಪುಟಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಓರ್ವ ಮೃತ್ಯು

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಓರ್ವ ಮೃತ್ಯು

- Advertisement -
- Advertisement -

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇದಲ್ಲದೆ ಮಣಿಪುರ  ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದಾರೆ.

ಗುಂಡೇಟಿಗೆ ಬಲಿಯಾದ ವ್ಯಕ್ತಿಯನ್ನು ಇಂಫಾಲ್ ಪಶ್ಚಿಮದ ನಿವಾಸಿ ನಿಂಗೋಮ್ಬಾಮ್ ಜೇಮ್ಸ್ (32) ಎಂದು ಗುರುತಿಸಲಾಗಿದೆ. ಘರ್ಷಣೆ ವೇಳೆ ಗಾಯಗೊಂಡಿದ್ದ ನಿಂಗೋಂಬಮ್ ಜೇಮ್ಸ್‌ನ್ನು ಇಂಫಾಲ್‌ನ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.

ಡಿ.4ರಂದು ತೆಂಗೊಪಾಲ್ ಜಿಲ್ಲೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ 13 ಮಂದಿ ಹತ್ಯೆಯಾದ 26 ದಿನಗಳ ಬಳಿಕ ಈ ಘಟನೆ ವರದಿಯಾಗಿದೆ. ಮಣಿಪುರದ ಲೀತು ಗ್ರಾಮದಲ್ಲಿ ಡಿ.4ರಂದು ಗುಂಡಿನ ಚಕಮಕಿ ನಡೆದಿದ್ದು, 13 ಜನರು ಮೃತಪಟ್ಟಿದ್ದರು.

ಶನಿವಾರ ಬೆಳಗಿನ ಜಾವ 3:30ರ ಸುಮಾರಿಗೆ ಕುಕಿ ಮತ್ತು ಮೈತೈ ಸಮುದಾಯದ ಜನರ ಗುಂಪಿನ ನಡುವೆ ಕಾಂಗ್‌ಚುಪ್ ಪೊಲೀಸ್ ಠಾಣೆ ವ್ಯಾಪ್ತಿಯ ನಖುಜಾಂಗ್ ಮತ್ತು ಸಿಂಗ್ಡಾ ಕುಕಿ ಗ್ರಾಮಗಳಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್‌ ಅಧಿಕಾರಿಯೋರ್ವರು ಹೇಳಿದ್ದಾರೆ.

ಕಾಂಗ್‌ಪೋಪಿಯಲ್ಲಿ ಸಕ್ರಿಯವಾಗಿರುವ COTU ಸಂಘಟನೆ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಕುಕಿ ಗ್ರಾಮದ ಸಮೀಪವಿರುವ ಕಾಡಿನಲ್ಲಿ ಮೈತೈ ಸಮುದಾಯದ ಯುವಕರು ಮರಗಳನ್ನು ಕಡಿದ ನಂತರ ಅರಣ್ಯ ಪ್ರದೇಶದ ರಕ್ಷಣೆಗಾಗಿ ಘರ್ಷಣೆ ಪ್ರಾರಂಭವಾಯಿತು. ಕುಕಿ ಜನರು ಈ ಪ್ರದೇಶದಲ್ಲಿ ತಿರುಗಲು ಹೋದಾಗ ಇಂಫಾಲ್ ಕಣಿವೆಯ ಬಳಿ ಕುಕಿ ಮತ್ತು ಮೈತೈ ಸಮುದಾಯದ ಜನರ ನಡುವೆ ಒಂದು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದೆ ಎಂದು ಹೇಳಿದ್ದಾರೆ.

ಇದಲ್ಲದೆ ಮಧ್ಯಾಹ್ನ 3ರ ಸುಮಾರಿಗೆ ಮಣಿಪುರ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿಗಳ ನಡುವೆ ಮೊರೆಹ್ ಪಟ್ಟಣದಲ್ಲಿ ಗುಂಡಿನ ಚಕಮಕಿ ನಡೆದಿದೆ. ಎಂ ಚಹ್ನೌ ಗ್ರಾಮ ವ್ಯಾಪ್ತಿಯಲ್ಲಿನ ಇಂಫಾಲ್‌ನ ಮೋರೆ ರಸ್ತೆಯಲ್ಲಿ ವಾಹನಗಳು ಚಲಿಸುತ್ತಿದ್ದಾಗ ಅಪರಿಚಿತ ಬಂದೂಕುಧಾರಿಗಳು ನಡೆಸಿದ ದಾಳಿಗೆ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದು, ಅಸ್ಸಾಂ ರೈಫಲ್ಸ್‌ನ ಶಿಬಿರದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದಲ್ಲದೆ  ಮೋರೆ ಪಟ್ಟಣದಲ್ಲಿ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ.

ಮೇ ತಿಂಗಳ ಆರಂಭದಿಂದ ಮಣಿಪುರದಲ್ಲಿ ಜನಾಂಗೀಯ ಕಲಹ ನಡೆಯುತ್ತಿದ್ದು, ರಾಜ್ಯದಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಮೈತೈ ಹಾಗೂ ಕುಕಿಗಳ ನಡುವೆ ಸಂಘರ್ಷ ನಡೆಯುತ್ತಿದೆ. ಇದುವರೆಗೆ ಹಿಂಸಾಚಾರಕ್ಕೆ 197 ಮಂದಿ ಬಲಿಯಾಗಿದ್ದು, ಎರಡೂ ಸಮುದಾಯಗಳಿಗೆ ಸೇರಿದ  60 ಸಾವಿರಕ್ಕೂ ಹೆಚ್ಚು ನಾಗರಿಕರು ನೆಲೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

ಇದನ್ನು ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡಿನ ಚಕಮಕಿಯಲ್ಲಿ 13 ಮಂದಿ ಸಾವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...