Homeಮುಖಪುಟಮಣಿಪುರ ಹಿಂಸಾಚಾರದ ಕುರಿತು ಸಂಸತ್ತಿನಲ್ಲಿ ಸಮಗ್ರ ವಿವರ ನೀಡಬೇಕು: ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ

ಮಣಿಪುರ ಹಿಂಸಾಚಾರದ ಕುರಿತು ಸಂಸತ್ತಿನಲ್ಲಿ ಸಮಗ್ರ ವಿವರ ನೀಡಬೇಕು: ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರ ಹಿಂಸಾಚಾರದ ಕುರಿತು ಸಂಸತ್ತಿನಲ್ಲಿ ವಿವರವಾದ ಹೇಳಿಕೆ ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಶುಕ್ರವಾರ ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ”ಪ್ರಧಾನಿ ನರೇಂದ್ರ ಮೋದಿ ಅವರೇ, ನೀವು ನಿನ್ನೆ ಸಂಸತ್ತಿನ ಒಳಗೆ ಹೇಳಿಕೆ ನೀಡಿಲ್ಲ. ನೀವು ಕೋಪಗೊಂಡಿದ್ದಲ್ಲಿ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳೊಂದಿಗೆ ಹೋಲಿಕೆ ಮಾಡುವ ಬದಲು, ಮಣಿಪುರದ ಮುಖ್ಯಮಂತ್ರಿಯನ್ನು ಮೊದಲು ಮಾಡಬಹುದಿತ್ತು” ಎಂದು ಸವಾಲು ಹಾಕಿದ್ದಾರೆ.

”ಇಂದು ನೀವು ಸಂಸತ್ತಿನಲ್ಲಿ ಕೇವಲ ಈ ಒಂದು ದಿನದ ಘಟನೆ ಕುರಿತು ಮಾತ್ರ ಮಾತನಾಡುವುದಲ್ಲ, 80 ದಿನಗಳ ಕಾಲ ಹಿಂಸಾಚಾರ ನಡೆದ ಬಗ್ಗೆ ಸಮಗ್ರ ವಿವರವನ್ನು ನೀಡಬೇಕು. ಏಕೆಂದರೆ ಕೇಂದ್ರ ಮತ್ತು ಮಣಿಪುರ ರಾಜ್ಯದಲ್ಲಿ ನಿಮ್ಮದೇ ಸರ್ಕಾರ ಅಧಿಕಾರದಲ್ಲಿದ ಹಾಗಾಗಿ ಭಾರತ ಸಮಗ್ರ ವಿವರವಣೆಯನ್ನು ನಿಮ್ಮಿಂದ ಬಯಸುತ್ತಿದೆ” ಎಂದು ಹೇಳಿದ್ದಾರೆ.

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಸಾಮೂಹಿಕ ಅತ್ಯಾಚಾರ ನಡೆಸಿದ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತಾಗಿ ವಿಪಕ್ಷಗಳು ಸದನದಲ್ಲಿ ಗದ್ದಲ ಎಬ್ಬಿಸಿವೆ.

ಎಸ್‌ಟಿ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಮಣಿಪುರದಲ್ಲಿ ಎರಡು ಜನಾಂಗಗಳ ನಡುವೆ ಹಿಂಸಾಚಾರ ಆರಂಭವಾದಾಗಿನಿಂದ ಪ್ರಧಾನಿ ಮೋದಿಯವರು ಈ ಕುರಿತು ಮಾತನಾಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಎಷ್ಟೇ ಟೀಕೆಗಳು ಬಂದರೂ ಮೌನಹಿಸಿದ್ದ ಪ್ರಧಾನಿ ಮೋದಿಯವರು 79 ದಿನಗಳ ನಂತರ ಗುರುವಾರ ಮೌನ ಮುರಿದು, ”ಈ ಘಟನೆಗಳಿಂದ ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: 79 ದಿನಗಳ ನಂತರ ಮಣಿಪುರದ ಹಿಂಸಾಚಾರದ ಕುರಿತು ಮೌನ ಮುರಿದ ಪ್ರಧಾನಿ ಮೋದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...