Homeಮುಖಪುಟ'ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು': ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಎಸ್‌ಐಟಿ...

‘ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು’: ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ತಂಡದ ನೇತೃತ್ವ ವಹಿಸಿದ್ದ ಅಧಿಕಾರಿ ಸ್ಪೋಟಕ ಹೇಳಿಕೆ

- Advertisement -
- Advertisement -

ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವ ವಹಿಸಲು ಸುಪ್ರೀಂ ನಿರ್ದೇಶನದ ಕೆಲವೇ ದಿನಗಳಲ್ಲಿ ಅಸ್ಸಾಂ-ಮೇಘಾಲಯ ಕೇಡರ್‌ನ ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಬಿಹಾರದಿಂದ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭರವಸೆ ನೀಡಿದ್ದರು, ಆ ಕಾರಣಕ್ಕೆ ನಾನು ರಾಜೀನಾಮೆ ನೀಡಿದ್ದೆ, ಆದರೆ ಆ ಬಳಿಕ ನನಗೆ ವಂಚಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಬಿಹಾರದ ಬಕ್ಸರ್ ಮೂಲದ ಆನಂದ್ ಮಿಶ್ರಾ ಮೇ 7ರಂದು ಸ್ವತಂತ್ರ ಅಭ್ಯರ್ಥಿಯಾಗಿ ಬಕ್ಸರ್‌ನಿಂದ ಸಂಸತ್ತಿಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ತಂಡದ ನೇತೃತ್ವವನ್ನು ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಆನಂದ್ ಮಿಶ್ರಾ ಅವರಿಗೆ ವಹಿಸಿಕೊಡಲಾಗಿತ್ತು.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ಮಣಿಪುರದ ಹೊರಗಿನ ಅಧಿಕಾರಿಗಳೊಂದಿಗೆ ಎಸ್‌ಐಟಿ ತಂಡವನ್ನು ರಚಿಸುವಂತೆ ತಿಳಿಸಲಾಗಿತ್ತು ಮತ್ತು ತನಿಖೆ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ. ಮೇ 3, 2023 ರಿಂದ, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆದಿತ್ತು. ಈ ವೇಳೆ 220ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಸುಮಾರು 60,000 ಜನರು ಸ್ಥಳಾಂತರಗೊಂಡು ಈಗಲೂ ನಿರಾಶ್ರಿತರ ಶಿಬಿರಗಳಲ್ಲಿ ದಿನ ದೂಡುತ್ತಿದ್ದಾರೆ. ಮೈತೈ ಮತ್ತು ಕುಕಿ ಸಮುದಾಯಗಳ ನಡುವೆ ಭುಗಿಲೆದ್ದ ಈ ಹಿಂಸಾಚಾರ ದೇಶದ ಕಣ್ತೆರೆಯುವಂತೆ ಮಾಡಿತ್ತು. ಜನಸಮೂಹವು ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ನಡೆಸಿ ಲೈಂಗಿಕ ದೌರ್ಜನ್ಯ ನಡೆಸಿದ ವಿಡಿಯೋ ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಬಿಜೆಪಿ ಆಡಳಿತದ ಮಣಿಪುರದಲ್ಲಿನ ಕಲಹದ ಬಗ್ಗೆ ಮೌನ ಮುರಿಯಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಲಾಗಿತ್ತು. ಹಿಂಸಾಚಾರ, ಕಾನೂನು ಮತ್ತು ಸುವ್ಯವಸ್ಥೆ ಕುಸಿತದ ನಡುವೆಯೂ ಮೋದಿ ಆಡಳಿತವು ಎನ್. ಬಿರೇನ್ ಸಿಂಗ್ ಸರ್ಕಾರವನ್ನು ಸಮರ್ಥಿಸುತ್ತಲೇ ಬಂದಿತ್ತು.

ಅಸ್ಸಾಂ ಮುಖ್ಯಮಂತ್ರಿ ಶರ್ಮಾ ಬಿಜೆಪಿ ಟಿಕೆಟ್ ನೀಡುವ ಭರವಸೆ ನೀಡಿದ ಕಾರಣ ಮಣಿಪುರ ಹಿಂಸಾಚಾರದ ಎಸ್‌ಐಟಿಯ ನೇತೃತ್ವ ವಹಿಸಲು ಸೂಚಿಸಿದ ಕೆಲವೇ ದಿನಗಳಲ್ಲಿ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದೆ ಎಂದು ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ ಹೇಳಿಕೊಂಡಿದ್ದಾರೆ. ಡಿ.28ರಂದು ಪ್ರಕಟವಾದ ವರದಿಗಳ ಪ್ರಕಾರ, ಮಿಶ್ರಾ ಅವರು ಡಿ.18ರಂದು ತಮ್ಮ ರಾಜೀನಾಮೆಯನ್ನು ಡಿಜಿಪಿ ಮೂಲಕ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಅವರನ್ನು ಮಣಿಪುರ ಹಿಂಸಾಚಾರ ಪ್ರಕರಣದ ಎಸ್‌ಐಟಿ ತನಿಖೆಯ ತಂಡದ ನೇತೃತ್ವವನ್ನು ನೀಡಿದ ಬೆನ್ನಲ್ಲಿ ನಡೆದಿತ್ತು.

ಏಪ್ರಿಲ್ 2ರಂದು ಫೇಸ್‌ಬುಕ್‌ನಲ್ಲಿ ವೀಡಿಯೊ ಹೇಳಿಕೆಯಲ್ಲಿ ಮಿಶ್ರಾ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು. ದೇಶದ ಹಿತಕ್ಕಾಗಿ ನನ್ನ ಅಭಿಪ್ರಾಯಗಳನ್ನು ಉತ್ತಮವಾಗಿ ಕಾರ್ಯಗತಗೊಳಿಸಲು ನಾನು ದೇಶದ ರಾಜಕೀಯ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಯತ್ನಿಸುತ್ತಿದ್ದೆ. ನನಗೆ ಟಿಕೆಟ್ ಸಿಗದ ಕಾರಣ ಮತ್ತು ಆ ಮಾರ್ಗವು ಕಾರ್ಯರೂಪಕ್ಕೆ ಬರದ ಕಾರಣ, ನಾನು ಇದನ್ನು ಸ್ವತಂತ್ರವಾಗಿ ಮಾಡುತ್ತೇನೆ ಏಕೆಂದರೆ ದೇಶ ಮತ್ತು ಜನರಿಗಾಗಿ ಕೆಲಸ ಮಾಡುವ ಇಚ್ಛೆ ಇನ್ನೂ ಇದೆ ಎಂದು ಹೇಳಿಕೊಂಡಿದ್ದರು.

2001ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಮಿಶ್ರಾ ಮೇಘಾಲಯದಲ್ಲಿ ನಿಯೋಜಿತರಾಗಿದ್ದಾಗ ಈಶಾನ್ಯದಲ್ಲಿ ಉಗ್ರಗಾಮಿಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಗಮನ ಸೆಳೆದಿದ್ದರು ಮತ್ತು ಪೊಲೀಸ್‌ ಇಲಾಖೆಯಲ್ಲಿ ತಮ್ಮದೇ ಆದ ವರ್ಚಸ್ಸನ್ನು ಹೊಂದಿದ್ದರು.

ಮೇ 18ರಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಬಿಹಾರದಲ್ಲಿ ಬಿಜೆಪಿಯ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ, ಆನಂದ್‌ ಮಿಶ್ರಾ ಬಿಜೆಪಿಯ ಮತಗಳನ್ನು ವಿಭಜಿಸಲು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಆರ್‌ಜೆಡಿ ಬೆಂಬಲದಿಂದ ಬಕ್ಸರ್‌ನಿಂದ ಕಣಕ್ಕಿಳಿದಿದ್ದಾರೆ ಎಂದು ಆರೋಪಿಸಿದ್ದರು. ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಿಶ್ರಾ, ಹಿಮಂತ ಬಿಸ್ವಾ ಶರ್ಮಾ ಮತ್ತು ಬಿಜೆಪಿ ನನ್ನನ್ನು ಬಿಜೆಪಿಗೆ ಪರಿಚಯಿಸುವುದಾಗಿ ಮತ್ತು ಬಿಜೆಪಿ ಸೇರಿಸಿಕೊಂಡು ಲೋಕಸಭೆ ಚುನಾವಣೆಗೆ ಟಿಕೆಟ್‌ ಕೊಡುವುದಾಗಿ ಭರವಸೆ ನೀಡಿ ನನ್ನನ್ನು ಐಪಿಎಸ್‌ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೇಳಿದರು. ಆದರೆ ಅಂತಿಮವಾಗಿ ಅವರು ದ್ರೋಹ ಮಾಡಿದ್ದಾರೆ, ನನ್ನನ್ನು ಅವರು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿಲ್ಲ, ನನಗೆ ಬಿಜೆಪಿ ಟಿಕೆಟ್‌ ನೀಡಿಲ್ಲ ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...