Homeಮುಖಪುಟಮಣಿಪುರ ಹಿಂಸಾಚಾರ: ಎಫ್‌ಐಆರ್‌ ರದ್ದುಗೊಳಿಸುವಂತೆ ಸಾಮಾಜಿಕ ಕಾರ್ಯರ್ತೆ ಸಲ್ಲಿಸಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ

ಮಣಿಪುರ ಹಿಂಸಾಚಾರ: ಎಫ್‌ಐಆರ್‌ ರದ್ದುಗೊಳಿಸುವಂತೆ ಸಾಮಾಜಿಕ ಕಾರ್ಯರ್ತೆ ಸಲ್ಲಿಸಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ

- Advertisement -
- Advertisement -

ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳನ್ನು ವಿರೋಧಿಸಿ ಆಮರಣಾಂತ ಉಪವಾಸ ನಡೆಸಿದ್ದಕ್ಕಾಗಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಟ್ರಾನ್ಸ್‌ಜೆಂಡರ್ ಕಾರ್ಯಕರ್ತೆಯೊಬ್ಬರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು, ಹೋರಾಟಗಾರ್ತಿ ಮಾಲೆಮ್ ತೊಂಗಮ್ ಅವರಿಗೆ ತನ್ನ ಕುಂದುಕೊರತೆಗಳ ಪರಿಹಾರಕ್ಕಾಗಿ ಮಣಿಪುರ ಹೈಕೋರ್ಟ್ ಅನ್ನು ಸಂಪರ್ಕಿಸಲು ಸ್ವಾತಂತ್ರ್ಯವನ್ನು ನೀಡಿದೆ.

“ಅರ್ಜಿದಾರರು 1973ರ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 482 ರ ಅಡಿಯಲ್ಲಿ ಮಣಿಪುರದ ಹೈಕೋರ್ಟಿಗೆ ತನ್ನ ಅಧಿಕಾರ ವ್ಯಾಪ್ತಿಯನ್ನು ಚಲಾಯಿಸಲು ಸ್ವಾತಂತ್ರ್ಯ ಹೊಂದಿರುತ್ತಾರೆ. ಆದ್ದರಿಂದ, ನಾವು ಭಾರತದ ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಅರ್ಜಿಯನ್ನು ಪರಿಗಣಿಸಲು ಒಲವು ತೋರುವುದಿಲ್ಲ” ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಹೇಳಿದೆ.

ಫೆಬ್ರವರಿ 22 ರಂದು ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಥೋಂಗಮ್ ತನ್ನ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು. ಅವರು ಫೆಬ್ರವರಿ 27 ರಂದು ದೆಹಲಿಯಿಂದ ಮಣಿಪುರಕ್ಕೆ ತೆರಳಿದರು, ಅಲ್ಲಿ ಅವರು ಇಂಫಾಲ್‌ನ ಕಾಂಗ್ಲಾ ಪಶ್ಚಿಮ ಗೇಟ್‌ನಲ್ಲಿ ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸಿದರು.

ಮಣಿಪುರ ಪೊಲೀಸರು ಮಾರ್ಚ್ 2 ರಂದು ಥೋಂಗಮ್ ಅವರನ್ನು ಆತ್ಮಹತ್ಯೆಯ ಮೂಲಕ ಸಾಯಲು ಪ್ರಯತ್ನಿಸಿರುವ ಮತ್ತು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದರು ಎಂಬ ಆರೋಪದ ಮೇಲೆ ಬಂಧಿಸಿದರು, ಆದರೆ, ಮಾರ್ಚ್ 5 ರಂದು ಆಕೆಯನ್ನು ಬಿಡುಗಡೆ ಮಾಡಿದರು. ಒಂದು ದಿನದ ನಂತರ, ಸಾರ್ವಜನಿಕವಾಗಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಆಕೆಯನ್ನು ಮತ್ತೆ ಬಂಧಿಸಲಾಯಿತು.

ಪರಿಶಿಷ್ಟ ಪಂಗಡಗಳ (ಎಸ್‌ಟಿ) ಪಟ್ಟಿಗೆ ಬುಡಕಟ್ಟು ಅಲ್ಲದ ಮೈತೇಯಿ ಸಮುದಾಯವನ್ನು ಸೇರಿಸಲು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ಹೈಕೋರ್ಟ್ ಆದೇಶದ ಮೇಲೆ ಮಣಿಪುರದ ಗುಂಪುಗಳು ಕಳೆದ ವರ್ಷ ಮೇ ತಿಂಗಳಲ್ಲಿ ಹಿಂಸಾಚಾರಕ್ಕೆ ಇಳಿದಿವೆ.

ಈ ಆದೇಶವು ಈಶಾನ್ಯ ರಾಜ್ಯದಲ್ಲಿ ವ್ಯಾಪಕವಾದ ಜನಾಂಗೀಯ ಘರ್ಷಣೆಗೆ ಕಾರಣವಾಯಿತು. ಕಳೆದ ವರ್ಷ ಮೇ 3 ರಂದು ಹಿಂಸಾಚಾರ ಭುಗಿಲೆದ್ದ ನಂತರ 170 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದು, ಎಸ್‌ಟಿ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮೈತೇಯ್ ಸಮುದಾಯದ ಬೇಡಿಕೆಯನ್ನು ವಿರೋಧಿಸಲು ಕಣಿವೆ ಜಿಲ್ಲೆಗಳಲ್ಲಿ “ಬುಡಕಟ್ಟು ಐಕಮತ್ಯ ಮೆರವಣಿಗೆ” ಆಯೋಜಿಸಲಾಗಿತ್ತು.

ಇದನ್ನೂ ಓದಿ; ಚುನಾವಣೆ ನಿಯಮ ಉಲ್ಲಂಘನೆ ಆರೋಪ; ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read