ಮಣಿಪುರ ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಸಾವನ್ನಪ್ಪಿದವರ ಸ್ಮರಣಾರ್ಥ ಜನರ ಗುಂಪೊಂದು ‘ಗನ್ ಸೆಲ್ಯೂಟ್’ ನೀಡಿರುವ ಘಟನೆ ರಾಜ್ಯದ ಕಾಂಗ್ಪೋಕ್ಪಿ ಜಿಲ್ಲೆಯ ಸೈಕುಲ್ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮಣಿಪುರ ಹಿಂಸಾಚಾರ
ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಸಾವನ್ನಪ್ಪಿದವರ ಸ್ಮರಣಾರ್ಥ ಜನರ ಗುಂಪೊಂದು ಗನ್ ಸೆಲ್ಯೂಟ್ ನೀಡಿದೆ ಎಂದು ಹೇಳಲಾಗಿದೆ ಎಂದು TNIE ವರದಿ ಮಾಡಿದೆ. ಈ ನಡುವೆ ಮೈತೇಯಿ ಮತ್ತು ಕುಕಿ-ಝೋ ಬುಡಕಟ್ಟು ಸಮುದಾಯದವರು ಶನಿವಾರ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಂಘರ್ಷದ ಎರಡನೇ ವಾರ್ಷಿಕೋತ್ಸವವನ್ನು ಆಚರಿಸಿದ್ದಾರೆ ಎಂದು ವರದಿಯಾಗಿದೆ.
ಗನ್ ಸೆಲ್ಯೂಟ್ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ನಾಯಕರು ಮತ್ತು ಹಿರಿಯರನ್ನು ಪೊಲೀಸ್ ಠಾಣೆಗೆ ಕರೆಸಲಾಗಿದ್ದು, ದುಷ್ಕರ್ಮಿಗಳನ್ನು ಬಂಧಿಸಲು ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಕಾರ್ಯಕ್ರಮದ ಆಯೋಜಕರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ಹೇಳಿಕೆ ತಿಳಿಸದೆ.
ಐದು ಸಿಂಗಲ್ ಬ್ಯಾರೆಲ್ ಗನ್‌ಗಳು ಮತ್ತು ಸಮವಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದು, ಆರೋಪಿಗಳನ್ನು ಬಂಧಿಸಲು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ದಾಳಿ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.
ಈ ಮಧ್ಯೆ, ಮೈಯೇಯಿ ಮತ್ತು ಥಡೌ ಸಮುದಾಯಗಳನ್ನು ಪ್ರತಿನಿಧಿಸುವ ಐದು ಸಂಘಟನೆಗಳು ರಾಜ್ಯದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಅನುಷ್ಠಾನಕ್ಕಾಗಿ ಸಾಮೂಹಿಕವಾಗಿ ಧ್ವನಿ ಎತ್ತಿವೆ.
ಮಣಿಪುರ ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಸಾವನ್ನಪ್ಪಿದವರ ಸ್ಮರಣಾರ್ಥ ಜನರ ಗುಂಪೊಂದು ‘ಗನ್ ಸೆಲ್ಯೂಟ್’ ನೀಡಿರುವ ಘಟನೆ ರಾಜ್ಯದ ಕಾಂಗ್ಪೋಕ್ಪಿ ಜಿಲ್ಲೆಯ ಸೈಕುಲ್ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. #Manipur #Kuki #GunSalute pic.twitter.com/AY5VaQJw0T
— Naanu Gauri (@naanugauri) May 5, 2025
ಮೈತೆಯ್ ಹೆರಿಟೇಜ್ ಸೊಸೈಟಿ, ದೆಹಲಿ ಮಣಿಪುರಿ ಸೊಸೈಟಿ, ಮತ್ತು ನಿಂಗೋಲ್ ಯುನೈಟೆಡ್ ಪ್ರೋಗ್ರೆಸ್ಸಿವ್ ಇನಿಶಿಯೇಟಿವ್ (ಮೈತೆಯ್‌ಗಳನ್ನು ಪ್ರತಿನಿಧಿಸುತ್ತದೆ) ಮತ್ತು ಥಡೌ ಇನ್ಪಿ ಮಣಿಪುರ ಮತ್ತು ಥಡೌ ವಿದ್ಯಾರ್ಥಿ ಸಂಘ – ಇತ್ತೀಚೆಗೆ ಸಭೆ ಸೇರಿ ಮಣಿಪುರದಲ್ಲಿ ಎನ್‌ಆರ್‌ಸಿ ಅನುಷ್ಠಾನವನ್ನು ತ್ವರಿತಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಿದವು.
ಅಕ್ರಮ ವಲಸಿಗರ ಒಳಹರಿವಿನ ಸಮಸ್ಯೆಯನ್ನು ಸರ್ಕಾರ ತುರ್ತಾಗಿ ಪರಿಹರಿಸಬೇಕೆಂದು ಈ ಗುಂಪುಗಳು ಒತ್ತಾಯಿಸಿವೆ. ಅವರ ಉಪಸ್ಥಿತಿಯು ಸ್ಥಳೀಯ ಸಮುದಾಯಗಳು ಮತ್ತು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡುತ್ತದೆ ಎಂದು ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
“ಜನಸಂಖ್ಯಾ ಸಮಗ್ರತೆಯನ್ನು ಕಾಪಾಡಲು ಮತ್ತು ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಸಂಪೂರ್ಣ ಎನ್‌ಆರ್‌ಸಿ ಪ್ರಕ್ರಿಯೆಯು ಮೂಲಭೂತವಾಗಿ ಬೇಕಾಗಿದೆ” ಎಂದು ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಣಿಪುರ ಹಿಂಸಾಚಾರ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ
ಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ

