Homeಮುಖಪುಟಮಣಿಪುರ | ನಿಲ್ಲದ ಹಿಂಸಾಚಾರ : ಮೈತೇಯಿ ಗುಂಪಿನಿಂದ ಹಿಂಸಾತ್ಮಕ ಪ್ರತಿಭಟನೆ

ಮಣಿಪುರ | ನಿಲ್ಲದ ಹಿಂಸಾಚಾರ : ಮೈತೇಯಿ ಗುಂಪಿನಿಂದ ಹಿಂಸಾತ್ಮಕ ಪ್ರತಿಭಟನೆ

- Advertisement -
- Advertisement -

ಒಂದೆಡೆ ಆಪಾದಿತ ಕುಕಿ ಬಂಡುಕೋರರ ಬೆದರಿಕೆ ಮತ್ತೊಂದೆಡೆ ಮೈತೇಯಿ ಗುಂಪಿನ ಹಿಂಸಾತ್ಮಕ ಪ್ರತಿಭಟನೆಯಿಂದ ಕಣಿವೆ ರಾಜ್ಯ ಮಣಿಪುರದಲ್ಲಿ ಪರಿಸ್ಥಿತಿ ಇನ್ನೂ ಗಂಭೀರವಾಗಿದೆ.

ನವೆಂಬರ್ 11 ರಂದು ಕುಕಿ ಬಂಡುಕೋರರಿಂದ ಅಪಹರಣಕ್ಕೆ ಒಳಗಾಗಿದ್ದಾರೆ ಎನ್ನಲಾದ ಮೈತೇಯಿ ಗುಂಪಿನ ಆರು ಮಂದಿಯ ಮೃತದೇಹಗಳು ಕಳೆದ ಶುಕ್ರವಾರದಿಂದ-ಭಾನುವಾರದ ನಡುವೆ ಪತ್ತೆಯಾಗಿವೆ. ಇದರಿಂದ ರೊಚ್ಚಿಗೆದ್ದಿರುವ ಮೈತೇಯಿ ಗುಂಪು ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದೆ.

ಕರ್ಫ್ಯೂ ಆದೇಶ ಉಲ್ಲಂಘಿಸಿ ಸೋಮವಾರ (ನ.18) ಇಂಫಾಲ ಜಿಲ್ಲೆಯಲ್ಲಿ ಬೀದಿಗಿಳಿದಿದ್ದ ಮೈತೇಯಿ ಗುಂಪು, ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿದೆ. ಹಿಂಸಾಚಾರದ ಕೇಂದ್ರ ಬಿಂದುವಾದ ಜಿರಿಬಾಮ್ ಜಿಲ್ಲೆಯಲ್ಲಿ ಉದ್ರಿಕ್ತರು ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡಿದ್ದಾರೆ. ಇದನ್ನು ತಡೆಯುವವ ವೇಳೆ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಸಂಘರ್ಷ ನಡೆದಿದೆ.

ಭಾನುವಾರ (ನ.17) ರಾತ್ರಿ ಪೊಲೀಸರೊಂದಿಗಿನ ಘರ್ಷಣೆ ವೇಳೆ ಜಿರಿಬಾಮ್ ಜಿಲ್ಲೆಯಲ್ಲಿ ಮೈತೇಯಿ ಗುಂಪಿನ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಭದ್ರತಾ ಪಡೆಗಳ ಗುಂಡಿಗೆ ಅವರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಶಾಲೆ, ಚರ್ಚ್, ಮನೆಗಳಿಗೆ ಬೆಂಕಿ

ಕುಕಿ ಬಂಡುಕೋರರು ತಮ್ಮ ಸಮುದಾಯದವರನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿರುವ ಮೈತೇಯಿ ಸಮುದಾಯ, ಕುಕಿಗಳ ಶಾಲೆ, ಚರ್ಚ್‌ ಮತ್ತು ಮನೆಗಳಿಗೆ ಬೆಂಕಿ ಹಚ್ಚಿದೆ ಎಂದು ವರದಿಗಳು ಹೇಳಿವೆ.

ಐದು ಚರ್ಚ್‌, ಶಾಲೆ, ಪೆಟ್ರೋಲ್ ಬಂಕ್ ಮತ್ತು 14 ಮನೆಗಳಿಗೆ ಮೈತೇಯಿ ಗುಂಪು ಬೆಂಕಿ ಹಚ್ಚಿದೆ ಎಂದು ಕುಕಿ ಝೋ ಬುಡಕಟ್ಟು ಸಂಘಟನೆ ಇಂಡೀಜನಸ್ ಟ್ರೈಬಲ್ ಲೀಡರ್ಸ್‌ ಫೋರಂ (ಐಟಿಎಲ್‌ಎಫ್‌) ಆರೋಪಿಸಿದೆ.

ಕಳೆದ ವಾರ ಭದ್ರತಾ ಪಡೆಗಳ ಗುಂಡಿಗೆ ಬಲಿಯಾದವರು ಭಯೋತ್ಪಾದಕರಲ್ಲ. ಭದ್ರತಾ ಪಡೆಗಳನ್ನು ಕುಕಿಗಳನ್ನು ಗುರಿಯಾಗಿಸಿದೆ ಎಂದು ಕುಕಿ ಸಂಘಟನೆಗಳು ಹೇಳಿವೆ.

ಮೂರು ಪ್ರಕರಣಗಳ ಎನ್‌ಐಎ ತನಿಖೆ

ಮಣಿಪುರದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನವೆಂಬರ್ 13 ರಂದು ಮೂರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದೆ ಎಂದು ತಿಳಿದು ಬಂದಿದೆ.

ಹೆಚ್ಚುವರಿ ಪಡೆಗಳ ರವಾನೆ

ಮಣಿಪುರದಲ್ಲಿ ಇತ್ತೀಚೆಗೆ ಮತ್ತೆ ಹಿಂಸಾಚಾರ ಭುಗಿಲೆದ್ದ ಬಳಿಕ ಕೇಂದ್ರ ಗೃಹ ಸಚಿವಾಲಯ 20 ಸಿಎಪಿಎಫ್‌ ಕಂಪನಿಗಳನ್ನು (ಸಿಆರ್‌ಪಿಎಫ್‌ನ 15 ಮತ್ತು ಬಿಎಸ್‌ಎಫ್‌ನ 5) ರವಾನಿಸಿತ್ತು. ಈಗ ಹೆಚ್ಚುವರಿಯಾಗಿ 50 ಕಂಪನಿಗಳನ್ನು ಈ ವಾರಾಂತ್ಯದೊಳಗೆ ಮಣಿಪುರ ತಲುಪಲಿವೆ. 35 ಸಿಆರ್‌ಪಿಎಫ್‌ ಮತ್ತು ಇನ್ನುಳಿದ ಕಂಪನಿಗಳನ್ನು ಬಿಎಸ್‌ಎಫ್‌ನಿಂದ ರವಾನಿಸಲಾಗುತ್ತದೆ.

ಇದನ್ನೂ ಓದಿ : ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ | ಚುನಾವಣೆ ಆಯೋಗದ ಆದೇಶ ಎತ್ತಿಹಿಡಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...