Homeಮುಖಪುಟಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್...

ಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ANI: ತೀವ್ರ ಖಂಡನೆ

- Advertisement -
- Advertisement -

ಮಣಿಪುರದ ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರದ ವಿಡಿಯೋವೊಂದು ಗುರುವಾರ ವೈರಲ್ ಆಗಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಲ್ಲಿಯವರೆಗೂ ಮೌನವಾಗಿದ್ದ ಪ್ರಧಾನಿ ಮೋದಿ ಮಣಿಪುರದ ಬಗ್ಗೆ ತುಟಿ ಬಿಚ್ಚಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಆ ಹೀನ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುದ್ದಿ ಸಂಸ್ಥೆ ANI ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ಘಟನೆ ನಡೆದಿದ್ದು, ಅದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಗುರುವಾರ ರಾತ್ರಿ 9.27ರ ಸಮಯದಲ್ಲಿ, “ಮಣಿಪುರ ವೈರಲ್ ವಿಡಿಯೋ ಪ್ರಕರಣ| ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಂಗ್ಲೀಪಾಕ್ (PREPAK) ಪರ ಕಾರ್ಯಕರ್ತನಾದ ಇಂಫಾಲ್ ಪೂರ್ವದ ಎಂ.ಡಿ ಇಬುಂಗೋ ಅಲಿಯಾಸ್ ಅಬ್ದುಲ್ ಹಿಲಿಮ್ (38) ನನ್ನು ಇಂಫಾಲ್ ಪೂರ್ವ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪಿಎಸ್ ಅಡಿಯಲ್ಲಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರದ ಘೋರ ಅಪರಾಧದ ಒಟ್ಟು ಮೂವರು ಪ್ರಮುಖ ಆರೋಪಿಗಳನ್ನು ಇಂದು ಬಂಧಿಸಲಾಗಿದೆ: ಮಣಿಪುರ ಪೊಲೀಸರು” ಎಂದು ANI ಟ್ವೀಟ್ ಮಾಡಿತ್ತು.

ಇದನ್ನೇ ಆಧರಿಸಿ NDTV ಸೇರಿದಂತೆ ಹಲವು ಮುಖ್ಯವಾಹಿನಿ ಮಾಧ್ಯಮಗಳು ಟ್ವೀಟ್ ಮತ್ತು ಸುದ್ದಿ ವರದಿ ಮಾಡಿದ್ದವು. ಅದರ ಬೆನ್ನಲೇ ಬಲಪಂಥೀಯರು ಮತ್ತು ಬಿಜೆಪಿ ಐಟಿ ಸೆಲ್ ಸಾಮೂಹಿಕ ಅತ್ಯಾಚಾರದ ಆರೋಪಿ ಮುಸ್ಲಿಂ ಎಂದು ಷರಾ ಬರೆದಿದ್ದರು. ತಾಜಿಂದರ್ ಪಾಲ್ ಬಗ್ಗಾ ಮತ್ತು ರಿಷಿ ಬಾಗೀ ಎಂಬ ಬಿಜೆಪಿ ಮುಖಂಡರು ಅಬ್ದುಲ್ ಖಾನ್ ಆರೋಪಿ ಎಂದು ಟ್ವೀಟ್ ಮಾಡಿದರು. ಆ ಮೂಲಕ ಸುಳ್ಳು ಸುದ್ದಿಯನ್ನು ವೈರಲ್ ಮಾಡಿದರು. ಆದರೆ ಸ್ವಲ್ಪ ಹೊತ್ತಿನಲ್ಲೇ ANI ತನ್ನ ಟ್ವೀಟ್ ಅನ್ನು ಡಿಲೀಟ್ ಮಾಡಿತು.

ವಾಸ್ತವವೇನು?

ಮಣಿಪುರ ಪೊಲೀಸರ ಪ್ರಕಾರ ಬೆತ್ತಲೆ ಮೆರವಣಿಗೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತೌಬಲ್ ಜಿಲ್ಲೆಯ 4 ಆರೋಪಿಗಳನ್ನು ಬಂಧಿಸಲಾಗಿದೆ. ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ PREPAK ಪರ ಕಾರ್ಯಕರ್ತನಾದ ಅಬ್ದುಲ್ ಹಿಲಿಮ್ ಎಂಬುವವರನ್ನು ಬಂಧಿಸಿದ್ದಾರೆ. ಆದರೆ ಸಂಬಂಧವಿಲ್ಲದ ಆ ಪ್ರಕರಣದ ಆರೋಪಿಯನ್ನು ಬೆತ್ತಲೆ ಮೆರವಣಿಗೆ ವಿಡಿಯೋಗೆ ತಳುಕು ಹಾಕಿ ANI ಟ್ವೀಟ್ ಮಾಡಿತ್ತು. ನಂತರ ತಪ್ಪಿನ ಅರಿವಾಗಿ ಡಿಲೀಟ್ ಮಾಡಿದೆ. ಆದರೆ ಅಷ್ಟರಲ್ಲಿ ಹಲವು ಸುದ್ದಿಸಂಸ್ಥೆಗಳು ಅದನ್ನೇ ನಿಜವೆಂದು ನಂಬಿ ಪ್ರಸಾರ ಮಾಡಿವೆ. ಬಿಜೆಪಿ ಐಡಿ ಸೆಲ್ ಕಾರ್ಯಕರ್ತರು ಮುಸ್ಲಿಂ ದ್ವೇಷ ಕಾರಿಕೊಂಡಿದ್ದಾರೆ.

ಕ್ಷಮೆಯಾಚಿಸಿದ ANI

ಸ್ಟೋರಿ ಹಿಂತೆಗೆದುಕೊಳ್ಳುವಿಕೆ ಮತ್ತು ಕ್ಷಮೆಯಾಚನೆಯ ಕುರಿತು ಟಿಪ್ಪಣಿ: ನಿನ್ನೆ ಸಂಜೆ, ಮಣಿಪುರ ಪೊಲೀಸರು ಕೈಗೊಂಡ ಬಂಧನಗಳ ಬಗ್ಗೆ ANI ಯಿಂದ ಟ್ವೀಟ್ ಅನ್ನು ಪೋಸ್ಟ್ ಮಾಡಲಾಗಿದೆ. ಇದು ವೈರಲ್ ವೀಡಿಯೊದಲ್ಲಿ ತೋರಿಸಿರುವ ಘಟನೆಗಳಿಗೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು ಮಾಡಿದ ಇತರ ಬಂಧನಗಳಿಗೆ ಸಂಬಂಧಿಸಿದಂತೆ ಹಿಂದಿನ ಟ್ವೀಟ್‌ನೊಂದಿಗೆ ಗೊಂದಲಕ್ಕೊಳಗಾದ ಕಾರಣ ಪೋಸ್ಟ್ ಮಾಡಿದ ಟ್ವೀಟ್‌ಗಳ ತಪ್ಪಾದ ಓದುವಿಕೆಯನ್ನು ಆಧರಿಸಿದೆ. ಸ್ವಲ್ಪ ಸಮಯದ ನಂತರ, ಕೆಲವೇ ನಿಮಿಷಗಳಲ್ಲಿ, ದೋಷವನ್ನು ಅರಿತುಕೊಂಡ ತಕ್ಷಣ ಟ್ವೀಟ್ ಅನ್ನು ತಕ್ಷಣವೇ ಅಳಿಸಲಾಗಿದೆ ಮತ್ತು ಸರಿಪಡಿಸಿದ ಆವೃತ್ತಿಯನ್ನು ತಕ್ಷಣವೇ ಪ್ರಕಟಿಸಲಾಗಿದೆ. ಈ ತಪ್ಪಿಗೆ ವಿಷಾದಿಸುತ್ತೇವೆ ಎಂದು ANI ಶುಕ್ರವಾರ ಬೆಳಿಗ್ಗೆ 10.29 ರ ಸಮಯದಲ್ಲಿ ಮತ್ತೊಂದು ಟ್ವೀಟ್ ಮಾಡಿದೆ.

ಈ ಕುರಿತು ಸರಣಿ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿರುವ ಆಲ್ಟ್‌ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್, “ದಕ್ಷಿಣ ಏಷ್ಯಾದ ಅತಿ ದೊಡ್ಡ ಮಾಧ್ಯಮ ಸಂಸ್ಥೆ ಎಂದು ಹೇಳಿಕೊಳ್ಳುವ ANI ತಪ್ಪಾಗಿ ಟ್ವೀಟ್ ಮಾಡಿದೆ. ಬಿಜೆಪಿ ಐಟಿ ಸೆಲ್ ಟ್ರೋಲ್‌ಗಳು ಈ ಪ್ರಕರಣಕ್ಕೆ ಮುಸ್ಲಿಂ ಕೋಮುವಾದಿ ಆಯಾಮ ನೀಡಿದವು. NDTV, PuthiyathalaimuraiTV ಥರಹದ ದೊಡ್ಡ ಫಾಲೋವಿಂಗ್ ಇರುವ ಮಾಧ್ಯಮಗಳು ಅದನ್ನೆ ಪ್ರಸಾರ ಮಾಡಿದವು. ಕೊನೆಯದಾಗಿ ANI 12 ಗಂಟೆಗಳ ನಂತರ ಸ್ಪಷ್ಟೀಕರಣ ನೀಡಿದೆ. ಅವರು ತಮ್ಮ ತಪ್ಪಿನ ಅರಿವಾದ ತಕ್ಷಣವೇ ಸ್ಪಷ್ಟೀಕರಣ ನೀಡಿದ್ದರೆ ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಬಹುದಿತ್ತು” ಎಂದಿದ್ದಾರೆ.

ಪತ್ರಕರ್ತೆ ಸ್ವಾತಿ ಚತುರ್ವೇದಿ ಪ್ರತಿಕ್ರಿಯಿಸಿ, “ANI ಪದೇ ಪದೇ ಫೇಕ್ ನ್ಯೂಸ್ ಹರಡುವ ಮೂಲಕ ಜಾಗತಿಕ ಮಟ್ಟದಲ್ಲಿ ಕುಖ್ಯಾತಿಗೊಳಗಾಗುತ್ತಿದೆ. Reuters ನಂತರ ಪ್ರತಿಷ್ಠತಿ ಸುದ್ದಿ ಸಂಸ್ಥೆಗಳು ANI ಜೊತೆ ಸಹಭಾಗಿಗಳಾಗುವುದಕ್ಕೆ ನಾಚಿಕೆಯಾಗುವುದಿಲ್ಲವೇ?” ಎಂದುಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಮಣಿಪುರದ ಬೆಂಕಿ ಆರುವುದೆಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....