Homeಮುಖಪುಟಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: CBIನಿಂದ FIR ದಾಖಲು

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: CBIನಿಂದ FIR ದಾಖಲು

- Advertisement -
- Advertisement -

ಮೇ 4ರಂದು ಮಣಿಪುರದಲ್ಲಿ ಮೂವರು ಕುಕಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ, ಅವರಲ್ಲಿ ಓರ್ವ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (CBI) ಶುಕ್ರವಾರ ವಹಿಸಿಕೊಂಡಿದೆ.

ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಸಿಬಿಐ, ಮಣಿಪುರ ಪೊಲೀಸರು ದಾಖಲಿಸಿದ FIRಅನ್ನು ಮರು ನೋಂದಾಯಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಈ ಪೈಶಾಚಿಕ ಕೃತ್ಯದ ಸುದ್ದಿ ಮೂರು ತಿಂಗಳ ನಂತರ ಬೆಳಕಿಗೆ ಬಂದಿದ್ದು, ಜುಲೈ 19ರಂದು ಹೇಯ ಕೃತ್ಯದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದರಿಂದ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಆ ಬಳಿಕವಷ್ಟೇ ಸರ್ಕಾರ ಹಾಗೂ ಅಲ್ಲಿಯ ಪೊಲೀಸರು ಎಚ್ಚೆತ್ತುಕೊಂಡು ಮೊದಲ ಆರೋಪಿಯ ಬಂಧನ ಮಾಡಿದರು, ಸಧ್ಯ ಏಳು ಆರೋಪಿಗಳನ್ನು ಬಂಧನ ಮಾಡಲಾಗಿದೆ.

ಮೇ 4ರಂದು ಮಣಿಪುರದ ತೌಬಲ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಮತ್ತು ಆ ಸಂತ್ರಸ್ತೆಯ ಕುಟುಂಬದ ಇಬ್ಬರು ಪುರುಷರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸಧ್ಯ ಕೇಂದ್ರ ಗೃಹ ಸಚಿವಾಲಯದ ಉಲ್ಲೇಖದ ಮೇರೆಗೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ. ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ. ವಿಚಾರಣೆಯು ಕಾಲಮಿತಿಯಾಗಿರಬೇಕು ಮತ್ತು ಮಣಿಪುರದ ಹೊರಗೆ ನಡೆಯಬೇಕು ಎಂದು ಕೇಂದ್ರವು ಗುರುವಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಲೈಂಗಿಕ ದೌರ್ಜನ್ಯದ ವಿಡಿಯೊ ವೈರಲ್ ಆದ ನಂತರ, ಇಬ್ಬರು ಮಹಿಳೆಯರ ಮೇಲಿನ ಹಲ್ಲೆಗಳ ಬಗ್ಗೆ ಪ್ರಧಾನಿ ಮೋದಿ ಅವರು ಸಂಸತ್ತಿನಲ್ಲಿ ಮಾತನಾಡಬೇಕು ಆ ಬಳಿಕ ಈ ಹಿಂಸಾಚಾರದ ಬಗ್ಗೆ ಉಭಯ ಸದನಗಳಲ್ಲಿ ಚರ್ಚೆ ಆಗಬೇಕು ಎಂದು ಕಾಂಗ್ರೆಸ್ ನೇತೃತ್ವದ ವಿಪಕ್ಷ ಗುಂಪುಗಳು ಒತ್ತಾಯಿಸುತ್ತಿವೆ. ಆದರೆ ಪ್ರಧಾನಿ ಮಾತ್ರ ದಿವ್ಯ ಮೌನಕ್ಕೆ ಶರಣಾಗಿದ್ದಾರೆ.

ಈ ಪ್ರಕರಣದಲ್ಲಿ ಮಣಿಪುರ ಪೊಲೀಸರು ಇದುವರೆಗೆ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ವೈರಲ್ ವೀಡಿಯೊದಲ್ಲಿ ಕಂಡುಬರುವ ಕೆಲವರು ಸೇರಿದಂತೆ ಇತರರ ಹುಡುಕಾಟ ನಡೆಯುತ್ತಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಣಿಪುರ ಪೊಲೀಸರು ಬಂಧಿಸಿರುವ ಆರೋಪಿಗಳನ್ನು ಸಿಬಿಐ ವಶಕ್ಕೆ ಪಡೆದು ವಿಚಾರಣೆ ನಡೆಸುವುದಲ್ಲದೆ, ಸಂತ್ರಸ್ತರು, ಅವರ ಕುಟುಂಬಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುತ್ತದೆ ಎಂದು ಸಿಬಿಐ ತನಿಖೆಯ ಪರಿಚಯವಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐನ ವಿಶೇಷ ತನಿಖಾ ತಂಡ (ಎಸ್‌ಐಟಿ) ಈಗಾಗಲೇ ಮಣಿಪುರದಲ್ಲಿ ಹಿಂಸಾಚಾರ ಮತ್ತು ರಾಜ್ಯದ ಶಸ್ತ್ರಾಗಾರಗಳಿಂದ ಶಸ್ತ್ರಾಸ್ತ್ರಗಳನ್ನು ಲೂಟಿಗೆ ಸಂಬಂಧಿಸಿದ ಇತರ ಆರು ಪ್ರಕರಣಗಳನ್ನು ತನಿಖೆ ನಡೆಸುತ್ತಿದೆ ಎಂದು ಬೆಳವಣಿಗೆಯ ಬಗ್ಗೆ ತಿಳಿದಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಇಂದು INDIAದ ನಿಯೋಗ ಭೇಟಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...