Homeಮುಖಪುಟಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಪ್ರಕರಣ: ಆರು ಜನರ ಬಂಧನ

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಪ್ರಕರಣ: ಆರು ಜನರ ಬಂಧನ

- Advertisement -
- Advertisement -

ಮೇ 4 ರಂದು ಕಾಂಗ್‌ಪೋಪಿ ಜಿಲ್ಲೆಯಲ್ಲಿ ನಡೆದ ಮೂವರು ಕುಕಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು ಆರನೇ ವ್ಯಕ್ತಿಯನ್ನು ಶನಿವಾರ ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬರು ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 19ರಂದು, ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇಬ್ಬರು ಕುಕಿ ಮಹಿಳೆಯರನ್ನು ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಮೈತಿ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆಗಳು ಭುಗಿಲೆದ್ದ ಒಂದು ದಿನದ ನಂತರ, ಮೇ 4 ರಂದು ಕಾಂಗ್‌ಪೊಕ್ಪಿಯ ಬಿ ಫೈನೋಮ್ ಗ್ರಾಮದಲ್ಲಿ ವೀಡಿಯೊದಲ್ಲಿ ಕಂಡುಬರುವ ಇಬ್ಬರು ಸೇರಿದಂತೆ ಮೂವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಯಿತು. ಪೊಲೀಸ್ ದೂರಿನ ಪ್ರಕಾರ ಮಹಿಳೆಯರಲ್ಲಿ ಒಬ್ಬರನ್ನು “ಕ್ರೂರವಾಗಿ ಸಾಮೂಹಿಕ ಅತ್ಯಾಚಾರ” ಮಾಡಲಾಗಿದೆ.

ಮೇ 18ರಂದು ಎಫ್‌ಐಆರ್ ದಾಖಲಾಗಿತ್ತು. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಶೇರ್ ಆದ ನಂತರವೇ ಬಂಧನಗಳು ನಡೆದಿವೆ.

ಬಂಧಿತ ಆರು ಜನರಲ್ಲಿ ನಾಲ್ವರನ್ನು ಶುಕ್ರವಾರ 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಈ ಪ್ರಕರಣದ ಬೆನ್ನಲ್ಲೇ ಇದೀಗ ಅನೇಕ ಲೈಂಗಿಕ ದೌರ್ಜನ್ಯದ ಇತರ ಪ್ರಕರಣಗಳು ಬಹಿರಂಗವಾಗುತ್ತಿವೆ. ಮೇ 16 ರಂದು, ಈ ಪ್ರಕರಣ ದಾಖಲಾಗುವ ಎರಡು ದಿನಗಳ ಮೊದಲು, ಇಬ್ಬರು ಕುಕಿ ಮಹಿಳೆಯರ ಅಪಹರಣ, ಅತ್ಯಾಚಾರ ಮತ್ತು ಹತ್ಯೆಯ ಕುರಿತು ಮತ್ತೊಂದು ಎಫ್‌ಐಆರ್ ಕಾಂಗ್‌ಪೋಪಿಯ ಸೈಕುಲ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಮೇ 5 ರಂದು ಬಾಡಿಗೆ ಮನೆಯಲ್ಲಿದ್ದ 21 ವರ್ಷದ ಮಹಿಳೆಯ ತಾಯಿ ತನ್ನ ಮಗಳು ಮತ್ತು 24 ವರ್ಷದ ಇನ್ನೊಬ್ಬ ಮಹಿಳೆಯನ್ನು ”ಅತ್ಯಾಚಾರ ಮತ್ತು ಕೆಲವು ಅಪರಿಚಿತ ವ್ಯಕ್ತಿಗಳಿಂದ ಚಿತ್ರಹಿಂಸೆ ನೀಡಿದ ನಂತರ ಕ್ರೂರವಾಗಿ ಕೊಲೆ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಮೇ 15 ರಂದು ಮಣಿಪುರದ ಇಂಫಾಲ್ ಪೂರ್ವದಲ್ಲಿ ತನ್ನನ್ನು ಅಪಹರಿಸಿ, ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 18 ವರ್ಷದ ಮತ್ತೊಬ್ಬ ಮಹಿಳೆ ಶುಕ್ರವಾರ ಕಾಂಗ್‌ಪೋಕ್ಪಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಘಟನೆಯ ನಂತರ, ಮಹಿಳೆಯನ್ನು ನೆರೆಯ ರಾಜ್ಯ ನಾಗಾಲ್ಯಾಂಡ್‌ನ ಆಸ್ಪತ್ರೆಗೆ ದಾಖಲಿಸಲಾಯಿತು.

ಇದನ್ನೂ ಓದಿ: ಮಣಿಪುರದಲ್ಲಿ ಮತ್ತೊಂದು ಕ್ರೌರ್ಯ: ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...