Homeಮುಖಪುಟಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಏಳನೇ ಆರೋಪಿ ಬಂಧನ

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಏಳನೇ ಆರೋಪಿ ಬಂಧನ

- Advertisement -
- Advertisement -

ಮಣಿಪುರದಲ್ಲಿ ನಡೆದ ಪೈಶಾಚಿಕ ಕೃತ್ಯದ ವಿರುದ್ಧ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಬುಡಕಟ್ಟು ಜನಾಂಗದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿದ ಪ್ರಕರಣದಲ್ಲಿ ಇದೀಗ 7ನೇ ಆರೋಪಿಯನ್ನು ಬಂಧಿಸಲಾಗಿದೆ.

ಮೇ 3 ರಂದು ರಾಜ್ಯ ರಾಜಧಾನಿ ಇಂಫಾಲದಿಂದ ಕೇವಲ 35 ಕಿ.ಮೀ. ದೂರದ ಕಾಂಗ್‌ಪೋಕ್ಪಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಹಿಂಸಾತ್ಮಕ ಗುಂಪುಗಳಿಂದ ಕುಕಿ ಬುಡಕಟ್ಟು ಜನಾಂಗದ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಲಾಯಿತು. ದಾರಿಯುದ್ದಕ್ಕೂ ಅವರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದರು.

ಆ ಬಳಿಕ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಈ ವಿಷಯ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಿದಾಡುತ್ತಿದೆ.

ವಿಡಿಯೋದಲ್ಲಿ ಕಂಡುಬಂದ ಮಹಿಳೆಯರಲ್ಲಿ ಒಬ್ಬರು ಮಾಜಿ ಸೈನಿಕನ ಪತ್ನಿಯಾಗಿದ್ದು, ಅವರು ಅಸ್ಸಾಂ ರೆಜಿಮೆಂಟ್‌ನಲ್ಲಿ ಸುಬೇದಾರ್ ಆಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಕಾರ್ಗಿಲ್ ಯುದ್ಧದಲ್ಲಿ ಸಹ ಹೋರಾಡಿದ್ದಾರೆ.

ಈ ಹೀನ ಘಟನೆ ಕಳೆದ ಮೇ 4ರಂದು ನಡೆದು ಈ ಬಗ್ಗೆ ಮೇ 18ರಂದು ಎಫ್‌ಐಆರ್ ಆಗಿದೆ. ಓರ್ವ ಮುಖ್ಯಮಂತ್ರಿಯಾಗಿ ನಿಮಗೆ ಮಾಹಿತಿ ಇಲ್ಲವೇ? ಎಂದು ವರದಿಗಾರರು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್‌ಗೆ ಕೇಳಿದ ಪ್ರಶ್ನೆಗೆ ಕೋಪೋದ್ರಿಕ್ತರಾದ ಅವರು, ”ಇಲ್ಲಿ ಪ್ರತಿದಿನವೂ ಸಂಘರ್ಷ ನಡೆಯುತ್ತಿದೆ. ತುಂಬಾ ಮಂದಿ ಬಲಿಯಾಗಿದ್ದಾರೆ. ಇದೇ ರೀತಿಯ ಹಲವು ಎಫ್‌ಐಆರ್ ದಾಖಲಾದ ಬಗ್ಗೆ ಸಂದೇಶ ಬರುತ್ತಿದೆ. ಇಂತಹ ನೂರಾರು ಘಟನೆಗಳು ಮಣಿಪುರದಲ್ಲಿ ಎರಡು ತಿಂಗಳಲ್ಲಿ ನಡೆದಿದೆ. ಈ ವಿಡಿಯೋ ನಿನ್ನೆಯಷ್ಟೇ ಹೊರಗೆ ಬಂದಿದೆ. ಇಲ್ಲಿನ ‘ಗ್ರೌಂಡ್ ರಿಯಾಲಿಟಿ’ ನೋಡಿದ ಬಳಿಕ ನೀವು ಮಾತನಾಡಿ. ನಿಮ್ಮ ಆರೋಪಗಳನ್ನೆಲ್ಲ ಕೇಳಲು ನಾವು ತಯಾರಿಲ್ಲ. ಇದೇ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಅದಕ್ಕಾಗಿಯೇ ನಾವು ಇಂಟರ್ನೆಟ್‌ ಸೇವೆಯನ್ನು ಇಲ್ಲಿ ಬಂದ್ ಮಾಡಿದ್ದೇವೆ” ಎಂದು ಉತ್ತರಿಸಿದರು.

ಮೇ 3 ರಂದು ರಾಜ್ಯದಲ್ಲಿ ಆರಂಭವಾದ ಜನಾಂಗೀಯ ಹಿಂಸಾಚಾರದಲ್ಲಿ ಈವರೆಗೂ 160 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: 14 ಆರೋಪಿಗಳ ಗುರುತು ಪತ್ತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಪ್ರಕರಣ: ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣಗೆ ಮಧ್ಯಂತರ ಜಾಮೀನು

0
ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 47ರ ಹರೆಯದ ಮನೆ ಕೆಲಸದಾಕೆಗೆ ಲೈಂಗಿಕ...