Homeಮುಖಪುಟಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: 14 ಆರೋಪಿಗಳ ಗುರುತು ಪತ್ತೆ

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: 14 ಆರೋಪಿಗಳ ಗುರುತು ಪತ್ತೆ

- Advertisement -
- Advertisement -

ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೂ 14 ಜನರ ಗುರುತು ಪತ್ತೆ ಮಾಡಲಾಗಿದ್ದು, ಅವರ ಬಂಧನಕ್ಕೂ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

ಮೇ 4ರಂದು ಕಾಂಗ್‌ಪೋಕ್ಸಿ ಜಿಲ್ಲೆಯಲ್ಲಿ ನಡೆದ ಘಟನೆಯ ವಿಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆದ ಬಳಿಕ ದೇಶಾದ್ಯಂತ ಆಕ್ರೋಶ ವ್ಯಕ್ತವಾಯಿತು. ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ಒಂದೇ ಒಂದು ಹೇಳಿಕೆ ನೀಡದ ಪ್ರಧಾನಿ ಈ ಘಟನೆ ಬಳಿಕ ಮಣಿಪುರದ ಬಗ್ಗೆ ಮಾತನಾಡಿದ್ದರು. ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಾದ ಬಳಿಕ ಪ್ರಕರಣ ಸಂಬಂಧ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದಲ್ಲದೆ, ಇಬ್ಬರೂ ಮಹಿಳೆಯರನ್ನು ಬಿಡುಗಡೆ ಮಾಡುವ ಮೊದಲು ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ಒರ್ವ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಈ ಹೇಯ ಕೃತ್ಯದ 26 ಸೆಕೆಂಡುಗಳ ವಿಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಯಿತು. ಈ ವಿಡಿಯೊದಲ್ಲಿರುವ ಒಬ್ಬ ಮಹಿಳೆಯು ಪತಿ ಮಾಜಿ ಯೋಧರಾಗಿದ್ದು, ಅಸ್ಸಾಂ ರೆಜಿಮೆಂಟ್‌ನಲ್ಲಿ ಸುಬೇದಾರ್ ಆಗಿ ಸೇವೆ ಸಲ್ಲಿಸಿದ್ದರು. ಕಾರ್ಗಿಲ್ ಯುದ್ಧದಲ್ಲೂ ಹೋರಾಡಿದ್ದರು. ಪ್ರಕರಣ ಸಂಬಂಧ ಜೂನ್ 21ರಂದೇ ಸೈಕುಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಣಿಪುರದಲ್ಲಿ ಮೇ 3ರಿಂದ ಮೈತಿ ಹಾಗೂ ಕುಕಿ ಬುಡಕಟ್ಟು ಸಮುದಾಯಗಳ ನಡವೆ ಆರಂಭವಾದ ಹಿಂಸಾಚಾರದಲ್ಲಿ ಈವರೆಗೆ 160ಕ್ಕೂ ಅಧಿಕ ಜನರು ಜೀವ ಕಳೆದುಕೊಂಡಿದ್ದು, ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಆರೋಪ| ತಾನು ನಿರ್ದೋಷಿ ಎಂದ ಬ್ರಿಜ್ ಭೂಷಣ್ ಸಿಂಗ್: ವಿಚಾರಣಾ ಹಂತ...

0
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ತಾನು ನಿರ್ದೋಷಿ ಎಂದು ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್‌ಐ)ದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಂಗಳವಾರ...