Homeಕರ್ನಾಟಕಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೃತ್ಯ ಕೇಂದ್ರದ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿ: ದಿನೇಶ್ ಗುಂಡೂರಾವ್

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೃತ್ಯ ಕೇಂದ್ರದ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿ: ದಿನೇಶ್ ಗುಂಡೂರಾವ್

- Advertisement -
- Advertisement -

ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರಿಬ್ಬರನ್ನು ನಗ್ನಗೊಳಿಸಿ ಮೆರವಣಿಗೆಯ ಹೇಯ ಕೃತ್ಯ ನಡೆಯಲು ಅಲ್ಲಿನ ರಾಜ್ಯ ಸರ್ಕಾರದ ಎಷ್ಟು ಪಾಲಿದೆಯೋ ಕೇಂದ್ರದ ಪಾಲೂ ಅಷ್ಟೇ ಇದೆ ಎಂದು ಕೇಂದ್ರದ ವಿರುದ್ಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು, ”ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿರುವ ಕೃತ್ಯಕ್ಕೆ ಸುಪ್ರೀಂ ಕೋರ್ಟ್ ಹಾಕಿರುವ ಛಿಮಾರಿ, ಕೇಂದ್ರದ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿ. ಈ ಹೇಯ ಕೃತ್ಯ ನಡೆಯಲು ಅಲ್ಲಿನ ರಾಜ್ಯ ಸರ್ಕಾರದ ಎಷ್ಟು ಪಾಲಿದೆಯೋ ಕೇಂದ್ರದ ಪಾಲೂ ಅಷ್ಟೇ ಇದೆ. ಮಣಿಪುರದ ಗಲಭೆಯನ್ನು ಆರಂಭದಲ್ಲೇ ನಿಯಂತ್ರಿಸಿದ್ದರೆ ಈ ಘಟನೆ ನಡೆಯುತಿತ್ತೆ?” ಎಂದು ಕೇಳಿದ್ದಾರೆ.

”ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿದ್ದು ಮೇ 4 ರಂದು. ಆಗ ನಮ್ಮ ಘನವೆತ್ತ ಪ್ರಧಾನಿ ಮೋದಿ ರೋಡ್ ಶೋ ಮಾಡಲು ಕರ್ನಾಟಕದಲ್ಲಿದ್ದರು. ಇದಕ್ಕೂ ಮೊದಲೇ ಮಣಿಪುರದಲ್ಲಿ ಗಲಭೆ ಪ್ರಾರಂಭವಾಗಿತ್ತು. ಮೋದಿಯವರಿಗೆ ಚುನಾವಣಾ ಪ್ರಚಾರದಲ್ಲಿ ಇದ್ದ ಆಸಕ್ತಿ ಮಣಿಪುರದ ಗಲಭೆ ಬಗ್ಗೆ ಇದ್ದಿದ್ದರೆ ಇಂತಹ ಹೇಯ ಕೃತ್ಯ ತಡೆಯಬಹುದಿತ್ತಲ್ಲವೆ.?” ಎಂದು ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

”ಮಣಿಪುರದ ಘಟನೆ ವಿಶ್ವದ ಮುಂದೆ ನಾವು ತಲೆತಗ್ಗಿಸುವಂತೆ ಮಾಡಿದೆ. ಇಂತಹ ಅಮಾನವೀಯ ಕೃತ್ಯಕ್ಕೆ ಈ ದೇಶ ಸಾಕ್ಷಿಯಾಗಿದ್ದು ಈ ನೆಲದ ದುರಂತ. BJPಯ ಫ್ಯಾಸಿಸ್ಟ್ ಮನಸ್ಸುಗಳು ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತಿದರ ಫಲವಿದು. ಮೋದಿಯವರೇ, ಈಗಲಾದರೂ ನೀವು ನಿಮ್ಮ ಪರಿವಾರದವರು ಮನಸ್ಸು ಬದಲಾಯಿಸಿಕೊಳ್ಳಿ. ಪ್ರೀತಿ ಹಂಚಲು ಪ್ರಯತ್ನಿಸಿ” ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...