Homeಮುಖಪುಟಮಣಿಪುರದಲ್ಲಿ ಮತ್ತೆ ಉದ್ವಿಗ್ನ: ಪೊಲೀಸ್ ಪ್ರಧಾನ ಕಚೇರಿ ಮೇಲೆ ದಾಳಿ, ಮನೆಗಳ ಧ್ವಂಸ

ಮಣಿಪುರದಲ್ಲಿ ಮತ್ತೆ ಉದ್ವಿಗ್ನ: ಪೊಲೀಸ್ ಪ್ರಧಾನ ಕಚೇರಿ ಮೇಲೆ ದಾಳಿ, ಮನೆಗಳ ಧ್ವಂಸ

- Advertisement -
- Advertisement -

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇಂದು ಮುಂಜಾನೆ ತೌಬಲ್ ಜಿಲ್ಲೆಯ ಪೊಲೀಸ್ ಪ್ರಧಾನ ಕಚೇರಿಯ ಮೇಲೆ ಗುಂಪೊಂದು ದಾಳಿ ಮಾಡಿದ್ದು, ಮೂವರು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿಗೆ ಬುಲೆಟ್ ಗಾಯಗಳಾಗಿವೆ. ಕಳೆದ ಮೇ.ತಿಂಗಳಿನಿಂದ ಹಿಂಸಾಚಾರಕ್ಕೆ ಸುದ್ದಿಯಾಗುತ್ತಿರುವ ಮಣಿಪುರ ಪದೇ ಪದೇ  ಹಿಂಸಾಚಾರವನ್ನು ನೋಡುತ್ತಿದ್ದು, ಆಡಳಿತರೂಢ ಬಿಜೆಪಿ ಸರಕಾರ ಮಣಿಪುರದಲ್ಲಿ ಶಾಂತಿಯನ್ನು ಸ್ಥಾಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎನ್ನುವುದನ್ನು ಗಮನಿಸಬಹುದು.

ನಿನ್ನೆ ಮೊರೆಹ್‌ನಲ್ಲಿ ನಡೆದ ಗುಂಡಿನ ದಾಳಿಗೆ ಇಬ್ಬರು ಪೊಲೀಸ್‌ ಕಮಾಂಡೋಗಳು ಮೃತಪಟ್ಟಿದ್ದರು, ಮೂವರು ಗಾಯಗೊಂಡಿದ್ದರು. ರಾಕೆಟ್ ಚಾಲಿತ ಗ್ರೆನೇಡ್ ದಾಳಿಯನ್ನು ನಡೆಸಲಾಗಿದ್ದು, ತೆಂಗೋಪಾಲ್ ಜಿಲ್ಲೆಯ ಸಂಘರ್ಷಪೀಡಿತ ಪಟ್ಟಣದಲ್ಲಿ ಹಲವು ಮನೆಗಳನ್ನು ಮತ್ತು ಶಾಲೆಗಳನ್ನು ಧ್ವಂಸಮಾಡಲಾಗಿದೆ.

 

 

ಪೊಲೀಸರ ಪ್ರಕಾರ, ಇಂದು ತೌಬಲ್‌ನ ಖಂಗಾಬೊಕ್ ಪ್ರದೇಶದಲ್ಲಿ 3ನೇ ರಿಸರ್ವ್ ಬೆಟಾಲಿಯನ್‌ನ ಕಾಂಪ್ಲೆಕ್ಸ್ನ್ ಗುರಿಯಾಗಿಸಿ ಗುಂಪು ದಾಳಿ ನಡೆಸಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಅಗತ್ಯ ಬಲ ಬಳಸಿ ಗುಂಪನ್ನು ಚದುರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ವು ತೌಬಲ್ ಪೊಲೀಸ್ ಪ್ರಧಾನ ಕಛೇರಿಯನ್ನು ಗುರಿಯಾಗಿಸಿ ಗುಂಡಿನ ದಾಳಿ ಮಾಡಲಾಗಿದೆ. ಇದರ ಪರಿಣಾಮವಾಗಿ ಬಿಎಸ್‌ಎಫ್‌ನ ಮೂವರು ಸಿಬ್ಬಂದಿಗೆ ಬುಲೆಟ್ ಗಾಯಗಳಾಗಿವೆ ಎಂದು ಮಣಿಪುರ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಗೃಹ ಇಲಾಖೆ ಆಯುಕ್ತರಾದ ಟಿ ರಂಜಿತ್ ಸಿಂಗ್ ಅವರು ನಿನ್ನೆ ಗೃಹ ಸಚಿವಾಲಯಕ್ಕೆ ಪತ್ರ ಬರೆದು ತುರ್ತು ಅಗತ್ಯತೆಗಳನ್ನು ಉಲ್ಲೇಖಿಸಿ ಕನಿಷ್ಠ 7 ದಿನಗಳ ಕಾಲ ಇಂಫಾಲ್‌ನಲ್ಲಿ ಹೆಲಿಕಾಪ್ಟರ್‌ಗಳನ್ನು ಇರಿಸಲು ವಿನಂತಿಸಿದ್ದಾರೆ. ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯು ಗಂಭೀರ ಕಾಳಜಿಯ ವಿಷಯವಾಗಿದೆ ಏಕೆಂದರೆ ನಿರಂತರ ಬಾಂಬ್‌ ದಾಳಿಗಳು ನಡೆಯುತ್ತಿವೆ. ಇದು ಇಂದು ಬೆಳಿಗ್ಗೆ ಒಬ್ಬ ಐಆರ್‌ಬಿ ಸಿಬ್ಬಂದಿಯ ಸಾವಿಗೆ ಕಾರಣವಾಗಿದೆ. ಪ್ರಚಲಿತ ಪರಿಸ್ಥಿತಿಯ ದೃಷ್ಟಿಯಿಂದ, ಮೊರೆಯಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು. ಯಾವುದೇ ಸಮಯದಲ್ಲಿ ವೈದ್ಯಕೀಯ ತುರ್ತುಸ್ಥಿತಿ ಉಂಟಾಗಬಹುದು. ಮೊರೆಹ್‌ ಪಟ್ಟಣಕ್ಕೆ ಭದ್ರತಾ ಸಿಬ್ಬಂದಿ, ಮದ್ದುಗುಂಡುಗಳು ಇತ್ಯಾದಿಗಳನ್ನು ಏರ್‌ಲಿಫ್ಟಿಂಗ್ ಮಾಡುವ ಅವಶ್ಯಕತೆಯಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

ಪೊಲೀಸ್ ಸಿಬ್ಬಂದಿಯ ಹತ್ಯೆಯ ಸುದ್ದಿ ನಗರಕ್ಕೆ ತಲುಪುತ್ತಿದ್ದಂತೆ ರಾಜಧಾನಿ ಇಂಫಾಲ್ ಕೂಡ ಉದ್ವಿಗ್ನವಾಗಿತ್ತು. ಹೆಚ್ಚಿನ ಸಂಖ್ಯೆಯ ಮಹಿಳೆಯರು ಬುಧವಾರ ಬೀದಿಗಿಳಿದು ಮೊರೆಹ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡುವಂತೆ ಆಗ್ರಹಿಸಿದ್ದಾರೆ. ಮೊರೆಹ್‌ನಲ್ಲಿ ಪೊಲೀಸರ ವಿರುದ್ಧದ ದಾಳಿಯಲ್ಲಿ ಮ್ಯಾನ್ಮಾರ್ ಪ್ರಜೆಗಳು ಭಾಗಿಯಾಗಿದ್ದಾರೆ ಎಂದು ಮೈತೈ ನಾಗರಿಕ ಸಮಾಜದ ಗುಂಪುಗಳು ಆರೋಪಿಸಿದೆ. ಪಟ್ಟಣದಲ್ಲಿ ಪದೇ ಪದೇ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸುತ್ತಿರುವುದನ್ನು ತಡೆಯುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಕೆಲ ಪ್ರತಿಭಟನಾಕಾರರು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಮತ್ತು ರಾಜ್ಯಪಾಲರಾದ ಅನುಸೂಯಾ ಉಕ್ಲಿ ಅವರ ನಿವಾಸಕ್ಕೆ ನುಗ್ಗಲು ಪ್ರಯತ್ನಿಸಿದ್ದಾರೆ.

2023ರ ಮೇ ತಿಂಗಳ ಆರಂಭದಿಂದ ಮಣಿಪುರದಲ್ಲಿ ಜನಾಂಗೀಯ ಕಲಹ ನಡೆಯುತ್ತಿದ್ದು, ರಾಜ್ಯದಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಮೈತೈ ಹಾಗೂ ಕುಕಿಗಳ ನಡುವೆ ಸಂಘರ್ಷ ನಡೆಯುತ್ತಿದೆ. ಇದುವರೆಗೆ ಹಿಂಸಾಚಾರಕ್ಕೆ  200ಕ್ಕೂ ಅಧಿಕ ಮಂದಿ ಬಲಿಯಾಗಿದ್ದು, ಎರಡೂ ಸಮುದಾಯಗಳಿಗೆ ಸೇರಿದ  60 ಸಾವಿರಕ್ಕೂ ಹೆಚ್ಚು ನಾಗರಿಕರು ನೆಲೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದ. ಇದಲ್ಲದೆ ಮಣಿಪುರ  ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದರು. ಡಿ.4ರಂದು ತೆಂಗೊಪಾಲ್ ಜಿಲ್ಲೆಯ ಲೀತು ಗ್ರಾಮದಲ್ಲಿ ನಡೆದ ಗುಂಡಿನ ಕಾಳಗದಲ್ಲಿ 13 ಮಂದಿಯನ್ನು ಹತ್ಯೆ ಮಾಡಲಾಗಿತ್ತು. ಇದೀಗ ಮತ್ತೆ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದೆ.

ಇದನ್ನು ಓದಿ: ರಂಜನ್ ಗೊಗೊಯ್‌ಗೆ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’: ‘ರಾಮ ಮಂದಿರ’ ಸ್ಥಾಪನೆಯಾಗಿದ್ದರೆ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...