ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರಿಗೆ ವಾರಕ್ಕೆ ಎರಡು ಬಾರಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ(ಇಡಿ)ದ ತನಿಖಾ ಅಧಿಕಾರಿಗಳ ಮುಂದೆ ಹಾಜರಾಗಬೇಕು ಎಂಬ ಜಾಮೀನು ಷರತ್ತುಗಳನ್ನು ಸುಪ್ರೀಂ ಕೋರ್ಟ್ ಬುಧವಾರ ಸಡಿಲಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಅವರಿಗೆ ಈ ಹಿಂದೆ ಜಾಮೀನು ನೀಡುವಾಗ ನ್ಯಾಯಾಲಯವು ನಿಯಮಿತವಾಗಿ ವಿಚಾರಣೆಗೆ ಹಾಜರಾಗುವ ಅಗತ್ಯವಿದೆ ಎಂದು ಸ್ಪಷ್ಟಪಡಿಸಿತ್ತು.
ದೆಹಲಿಯ ಮಾಜಿ ಉಪಮುಖ್ಯಮಂತ್ರಿಯು ಆಗಿರುವ ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿ 2023 ರಲ್ಲಿ ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರದ ಆರೋಪದ ಮೇಲೆ ಸಿಬಿಐ ಬಂಧಿಸಿತ್ತು. ಅದಾಗಿ ಒಂದು ತಿಂಗಳ ನಂತರ, ಅದೇ ಪ್ರಕರಣದಲ್ಲಿ ಇಡಿ ಕೂಡಾ ಅವರನ್ನು ಬಂಧಿಸಿತ್ತು. ಸುಮಾರು 17 ತಿಂಗಳ ನಂತರ ಈ ವರ್ಷದ ಆಗಸ್ಟ್‌ನಲ್ಲಿ ಅವರಿಗೆ ಜಾಮೀನು ನೀಡಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ದೆಹಲಿ ಸರ್ಕಾರವು ಜಾರಿಗೆ ತಂದಿದ್ದ ಮದ್ಯ ನೀತಿಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಬಿಐ ಎಫ್‌ಐಆರ್ ದಾಖಲಿಸಿದ ನಂತರ ಇಡಿ ಅವರ ವಿರುದ್ಧ ತನಿಖೆ ಕೈಗೆತ್ತಿಕೊಂಡಿತ್ತು. ಅಕ್ರಮ ಆರೋಪಗಳು ಕೇಳಿ ಬಂದ ನಂತರ ಸರ್ಕಾರವು ಮದ್ಯ ನೀತಿಯನ್ನು ರದ್ದು ಮಾಡಿತ್ತು.
ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವು ಸಗಟು ವ್ಯಾಪಾರಿಗಳಿಗೆ 12% ಲಾಭಾಂಶವನ್ನು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಸುಮಾರು 185% ಲಾಭಾಂಶವನ್ನು ಖಚಿತಪಡಿಸಿಕೊಳ್ಳಲು ನೀತಿಯನ್ನು ಮಾರ್ಪಡಿಸಿತ್ತು ಎಂದು ಸಿಬಿಐ ಮತ್ತು ಇಡಿ ಆರೋಪಿಸಿವೆ. ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಜಂಗ್‌ಪುರ ಕ್ಷೇತ್ರದಿಂದ ಸಿಸೋಡಿಯಾ ಅವರಿಗೆ ಆಮ್ ಆದ್ಮಿ ಪಕ್ಷವು ಟಿಕೆಟ್ ನೀಡಿದೆ. ಅವರು 2013 ರಿಂದ ಪತ್ಪರ್ಗಂಜ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಇದನ್ನೂ ಓದಿ: ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ; 88 ಪ್ರಕರಣ ದಾಖಲು, 70 ಬಂಧನ – ಬಾಂಗ್ಲಾದೇಶ
ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ; 88 ಪ್ರಕರಣ ದಾಖಲು, 70 ಬಂಧನ – ಬಾಂಗ್ಲಾದೇಶ


