Homeಮುಖಪುಟ6 ಗಂಟೆಗಳ ಅಲ್ಪಾವಧಿಗೆ ತಿಹಾರ್ ಜೈಲಿನಿಂದ ಹೊರಬಂದ ಸಿಸೋಡಿಯಾ

6 ಗಂಟೆಗಳ ಅಲ್ಪಾವಧಿಗೆ ತಿಹಾರ್ ಜೈಲಿನಿಂದ ಹೊರಬಂದ ಸಿಸೋಡಿಯಾ

- Advertisement -
- Advertisement -

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಪತ್ನಿ ಅಸ್ವಸ್ಥರಾಗಿರುವುದರಿಂದ ಅವರನ್ನು ಭೇಟಿ ಮಾಡಲು ಆರು ಗಂಟೆಗಳ ಅಲ್ಪಾವಧಿಗೆ ತಿಹಾರ್ ಜೈಲಿನಿಂದ ಹೊರಬಂದಿದ್ದಾರೆ.

ಆಪಾದಿತ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಮಾರ್ಚ್ 9 ರಿಂದ ಜೈಲಿನಲ್ಲಿದ್ದಾರೆ. ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಆರು ಗಂಟೆಗಳ ಕಾಲ ಪತ್ನಿಯನ್ನು ಭೇಟಿಯಾಗಲು ಸಿಸೋಡಿಯಾಗೆ ನ್ಯಾಯಾಲಯ ಅನುಮತಿ ನೀಡಿದೆ.

ಸಿಸೋಡಿಯಾ ಅವರು ಪೊಲೀಸ್ ಸಿಬ್ಬಂದಿಯೊಂದಿಗೆ ಬೆಳಿಗ್ಗೆ 10 ಗಂಟೆಗೆ ಜೈಲು ವ್ಯಾನ್‌ನಲ್ಲಿ ಮಥುರಾ ರಸ್ತೆಯಲ್ಲಿರುವ ತಮ್ಮ ಮನೆಗೆ ತಲುಪಿದರು.

ತಮ್ಮ ಪತ್ನಿಯನ್ನು ಭೇಟಿಯಾಗಲು ನ್ಯಾಯಾಲಯದಿಂದ ಅನುಮತಿ ಪಡೆದ ನಂತರ ಸಿಸೋಡಿಯಾ ಅವರನ್ನು ಭೇಟಿಯಾಗಲು ರೋಸ್ ಅವೆನ್ಯೂ ನ್ಯಾಯಾಲಯ ಶುಕ್ರವಾರ ಅನುಮತಿ ನೀಡಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯವು ನವೆಂಬರ್ 22ರವರೆಗೆ ವಿಸ್ತರಿಸಿದೆ.

ಜೂನ್‌ನಲ್ಲಿ ಮಲ್ಟಿಪಲ್ ಸ್ಕ್ಲೆರೋಸಿಸ್‌ನಿಂದ ಬಳಲುತ್ತಿರುವ ಮನೀಶ್ ಅವರ ಪತ್ನಿ ಸೀಮಾ ಅವರನ್ನು ಭೇಟಿಯಾಗಲು ದೆಹಲಿ ಹೈಕೋರ್ಟ್ ಅನುಮತಿ ನೀಡಿತ್ತು. ಆದರೆ, ಆಕೆಯ ಆರೋಗ್ಯ ಸ್ಥಿತಿ ತೀರಾಹದಗೆಟ್ಟ ನಂತರ ಆಸ್ಪತ್ರೆಗೆ ದಾಖಲಾಗಿದ್ದರಿಂದ ಆಕೆಯನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ.

ಸಿಸೋಡಿಯಾ ಅವರ ಪತ್ನಿಯನ್ನು ಭೇಟಿಯಾಗಲು ಅನುಮತಿ ನೀಡಿದ ನ್ಯಾಯಾಲಯ, ಮಾಧ್ಯಮಗಳೊಂದಿಗೆ ಮಾತನಾಡದಂತೆ ಅಥವಾ ಯಾವುದೇ ರಾಜಕೀಯ ಚಟುವಟಿಕೆಯಲ್ಲಿ ತೊಡಗದಂತೆ ಆದೇಶಿಸಿದೆ.

ಸಿಸೋಡಿಯಾ ಅವರು ಫೆಬ್ರವರಿಯಲ್ಲಿ ಸಿಬಿಐನಿಂದ ಬಂಧಿಸುವ ಮೊದಲು ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಅಬಕಾರಿ ಇಲಾಖೆ ಸೇರಿದಂತೆ ವಿವಿಧ ಖಾತೆಗಳನ್ನು ನಿಭಾಯಿಸಿದ್ದಾರೆ. ದೆಹಲಿ ಉಪ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು.

ಬಂಧನಕ್ಕೊಳಗಾದ ನಂತರ ಅವರು ಉಪ ಮುಖ್ಯಮಂತ್ರಿ ಮತ್ತು ವಿವಿಧ ಇಲಾಖೆಗಳ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು ಆದರೆ ಅವರ ಕುಟುಂಬವು ಮಥುರಾ ರಸ್ತೆಯಲ್ಲಿರುವ ಅವರ ಅಂದಿನ ಅಧಿಕೃತ ನಿವಾಸದಲ್ಲಿ ಶಿಕ್ಷಣ ಸಚಿವ ಅತಿಶಿ ಅವರೊಂದಿಗೆ ಇದ್ದಾರೆ.

ಇತ್ತೀಚೆಗೆ ಈ ಪ್ರಕರಣದಲ್ಲಿ ಸಿಸೋಡಿಯಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಅವರ ಹಿಂದಿನ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು.

ಇದನ್ನೂ ಓದಿ: CBI ಅನ್ನು ನಾವು ನಿಯಂತ್ರಿಸುವುದಿಲ್ಲ, ಅದು ಸ್ವತಂತ್ರ ಸಂಸ್ಥೆ: ಸುಪ್ರೀಂಗೆ ಕೇಂದ್ರದ ಹೇಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...