Homeಮುಖಪುಟಶಾಲಾ ಕಟ್ಟಡ ನಿರ್ಮಾಣದಲ್ಲಿ ಅವ್ಯವಹಾರ ಆರೋಪ | ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್‌ಗೆ ಸಮನ್ಸ್

ಶಾಲಾ ಕಟ್ಟಡ ನಿರ್ಮಾಣದಲ್ಲಿ ಅವ್ಯವಹಾರ ಆರೋಪ | ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್‌ಗೆ ಸಮನ್ಸ್

- Advertisement -
- Advertisement -

ಸರ್ಕಾರಿ ಶಾಲೆಗಳ ತರಗತಿ ಕೊಠಡಿಗಳ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಮೇಲೆ ದೆಹಲಿ ಸರ್ಕಾರದ ಭ್ರಷ್ಟಾಚಾರ ನಿಗ್ರಹ ದಳ (ACB) ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದರ್ ಜೈನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಶಾಲಾ ಕಟ್ಟಡ ನಿರ್ಮಾಣದಲ್ಲಿ

ಜೂನ್ 6 ರಂದು ಎಸಿಬಿ ಮುಂದೆ ಹಾಜರಾಗಲು ಸತ್ಯೇಂದರ್‌ ಜೈನ್ ಅವರನ್ನು ಕೇಳಲಾಗಿದ್ದು, ಜೂನ್ 9 ರಂದು ಸಿಸೋಡಿಯಾ ಅವರನ್ನು ವಿಚಾರಣೆಗೆ ಸಮನ್ಸ್ ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ದೆಹಲಿ ಸರ್ಕಾರಿ ಶಾಲೆಗಳಲ್ಲಿ 12,000 ಕ್ಕೂ ಹೆಚ್ಚು ತರಗತಿ ಕೊಠಡಿಗಳು ಅಥವಾ ಅರೆ-ಶಾಶ್ವತ ಕಟ್ಟಡಗಳ ನಿರ್ಮಾಣದಲ್ಲಿ 2,000 ಕೋಟಿ ರೂ.ಗಳಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಆರ್ಥಿಕ ಅಕ್ರಮಗಳ ಆರೋಪದ ಆಧಾರದ ಮೇಲೆ ಏಪ್ರಿಲ್ 30 ರಂದು ಎಸಿಬಿ ಎಫ್‌ಐಆರ್ ದಾಖಲಿಸಿತ್ತು. ಅದರ ನಂತರ ಈ ಸಮನ್ಸ್ ಜಾರಿಯಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಹಿಂದಿನ ಎಎಪಿ ಸರ್ಕಾರದ ಹಣಕಾಸು ಮತ್ತು ಶಿಕ್ಷಣ ಖಾತೆಗಳನ್ನು ಹೊಂದಿದ್ದ ಸಿಸೋಡಿಯಾ ಮತ್ತು ಆಗ ಲೋಕೋಪಯೋಗಿ ಇಲಾಖೆ ಮತ್ತು ಇತರ ಸಚಿವಾಲಯಗಳ ಉಸ್ತುವಾರಿ ವಹಿಸಿದ್ದ ಸತ್ಯೇಂದರ್ ಜೈನ್ ಅವರನ್ನು ಕೇಂದ್ರ ವಿಜಿಲೆನ್ಸ್ ಆಯೋಗ (CVC) ಗುರುತಿಸಿರುವ ದೋಷಗಳಿಗೆ ಸಂಬಂಧಿಸಿದಂತೆ ಪ್ರಶ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಸಿವಿಸಿಯ ಮುಖ್ಯ ತಾಂತ್ರಿಕ ಪರೀಕ್ಷಕರ ವರದಿಯು ಯೋಜನೆಯಲ್ಲಿನ ಹಲವು ಅವ್ಯವಹಾರಗಳನ್ನು ಎತ್ತಿ ತೋರಿಸಿದೆ. ಸುಮಾರು ಮೂರು ವರ್ಷಗಳ ಕಾಲ ವರದಿಯ ಮೇಲೆ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಲಾಗಿದೆ” ಎಂದು ಜಂಟಿ ಪೊಲೀಸ್ ಆಯುಕ್ತ (ಎಸಿಬಿ) ಮಧುರ್ ವರ್ಮಾ ಹೇಳಿದ್ದಾರೆ. ಸಕ್ಷಮ ಪ್ರಾಧಿಕಾರದಿಂದ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17-ಎ ಅಡಿಯಲ್ಲಿ ಅನುಮೋದನೆ ಪಡೆದ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

2019 ರಲ್ಲಿ, ಬಿಜೆಪಿ ನಾಯಕರಾದ ಕಪಿಲ್ ಮಿಶ್ರಾ, ಹರೀಶ್ ಖುರಾನಾ ಮತ್ತು ನೀಲಕಾಂತ್ ಬಕ್ಷಿ ಅವರು ದೆಹಲಿಯ ಮೂರು ವಲಯಗಳಲ್ಲಿ ತರಗತಿ ಕೊಠಡಿಗಳ ನಿರ್ಮಾಣದಲ್ಲಿ ಗಂಭೀರ ಆರ್ಥಿಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಎಸಿಬಿಗೆ ದೂರು ನೀಡಿದ್ದರು.

ದೂರಿನ ಪ್ರಕಾರ, ಪ್ರತಿ ತರಗತಿಗೆ ಸರಾಸರಿ ವೆಚ್ಚ 24. 86 ಲಕ್ಷ ರೂ. ಎಂದು ನಿಗದಿಪಡಿಸಲಾಗಿದೆ. ಆದರೆ ಇದೇ ರೀತಿಯ ಕಟ್ಟಡಗಳಿಗೆ ಅಂದಾಜು 5 ಲಕ್ಷ ರೂ. ವೆಚ್ಚವಾಗುತ್ತದೆ, ಆದ್ದರಿಮದ ಇದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಅದು ಹೇಳಿದೆ. ಪ್ರಸ್ತುತ ತನಿಖೆ ನಡೆಯುತ್ತಿದ್ದು, ನಡೆಯುತ್ತಿರುವ ವಿಚಾರಣೆಯಿಂದ ಕಂಡುಕೊಂಡ ಮಾಹಿತಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲಾ ಕಟ್ಟಡ ನಿರ್ಮಾಣದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  #AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

#AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...