Homeಮುಖಪುಟಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಮನೀಶ್ ತಿವಾರಿ ಸಿದ್ಧತೆ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಮನೀಶ್ ತಿವಾರಿ ಸಿದ್ಧತೆ

ಕಾಂಗ್ರೆಸ್ ನಾಯಕತ್ವದ ತೀವ್ರ ಟೀಕಾಕಾರರಲ್ಲಿ ಮನೀಶ್‌ ತಿವಾರಿ ಕೂಡಾ ಒಬ್ಬರು

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್‌‌‌ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಒಕ್ಕೂಟ ಸರ್ಕಾರದ ಮಾಜಿ ಸಚಿವ ಮನೀಶ್ ತಿವಾರಿ ಕೂಡ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ವರದಿಯಾಗಿದ್ದು, ಚುನಾವಣೆಯಲ್ಲಿ ಮತದಾರರಾಗಿರುವ ಪಕ್ಷದ ರಾಜ್ಯ ಪ್ರತಿನಿಧಿಗಳನ್ನು ಭೇಟಿ ಮಾಡಲು ಅವರು ತಮ್ಮ ಕ್ಷೇತ್ರಕ್ಕೆ ಬಂದಿದ್ದಾರೆ ಎಂದು ಅವರ ನಿಕಟ ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರತಿ ಅಭ್ಯರ್ಥಿಯು ತನ್ನ ಹೆಸರನ್ನು ಉಮೇದುವಾರಿಕೆಗೆ ಪ್ರಸ್ತಾಪಿಸಲು 10 ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳ ಅಗತ್ಯವಿದೆ. ಮನೀಶ್‌ ತಿವಾರಿ ಅವರು ಕಾಂಗ್ರೆಸ್ ನಾಯಕತ್ವದ ತೀವ್ರ ಟೀಕಾಕಾರರಲ್ಲಿ ಒಬ್ಬರಾಗಿದ್ದು, ಪಕ್ಷದಲ್ಲಿ ಸುಧಾರಣೆ ಮಾಡಬೇಕು ಎಂದು ಒತ್ತಾಯಿಸುತ್ತಲೆ ಬಂದಿದ್ದಾರೆ. ಒಂದು ವೇಳೆ ಮನೀಶ್‌ ತಿವಾರಿ ಸ್ಪರ್ಧಿಸುವುದು ಖಚಿತವಾದರೆ ಪಕ್ಷದೊಳಗೆ ಬಹುಕೋನಗಳ ಸ್ಪರ್ಧೆ ಏರ್ಪಡುವ ಸಾಧ್ಯತೆಗಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆಯ ಪ್ರಕಾರ, ಗುರುವಾರದಿಂದ ನಾಮಪತ್ರಗಳು ಲಭ್ಯವಿದ್ದು, ನಾಮಪತ್ರಗಳ ಸಲ್ಲಿಕೆ ಸೆಪ್ಟೆಂಬರ್ 24 ಮತ್ತು 30 ರ ನಡುವೆ ನಡೆಯಲಿದೆ.

ಇದನ್ನೂ ಓದಿ: ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ನಾಯಕತ್ವ ಸೇರಿದಂತೆ ಯಾರ ಒಪ್ಪಿಗೆಯ ಅಗತ್ಯವಿಲ್ಲ: ಕಾಂಗ್ರೆಸ್

ಅಕ್ಟೋಬರ್ 1 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅದೇ ದಿನ ಮಾನ್ಯ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. ಅಕ್ಟೋಬರ್ 8ರ ವರೆಗೆ ಹಿಂಪಡೆಯಲು ಕೊನೆಯ ದಿನಾಂಕವಾಗಿದ್ದು, ಇದರ ನಂತರ ಅಂತಿಮ ಪಟ್ಟಿಯನ್ನು ಹೊರತರಲಾಗುವುದು. ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ.

ತೀವ್ರ ರಾಜಕೀಯ ಲಾಬಿಯ ನಡುವೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕೇರಳ ಶಶಿ ತರೂರ್‌ ನಡುವೆ ಸ್ಪರ್ಧೆಯ ಸಾಧ್ಯತೆಯಿದೆ. ಈ ನಡುವೆ ಹಿರಿಯ ನಾಯಕ ಸುರೇಶ್ ಪಚೌರಿ ಬುಧವಾರ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ.

ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಎರಡು ಗಂಟೆಗಳ ಕಾಲ ಸಭೆ ನಡೆಸಿದ್ದಾರೆ. ಇದರ ನಂತರ ಅವರು ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ ಯಾತ್ರೆ’ಗೆ ಸೇರಲು ಕೇರಳಕ್ಕೆ ತೆರಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

ಚುನಾವಣೆ ನ್ಯಾಯಯುತವಾಗಿ ನಡೆಯಲಿದ್ದು, ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ ಎಂದು ಸೋನಿಯಾ ಗಾಂಧಿ ಪ್ರತಿಪಾದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೇಲ್ನೋಟಕ್ಕೆ, ರಾಜಸ್ಥಾನದ ವಿಷಯವೂ ಸಭೆಯಲ್ಲಿ ಚರ್ಚೆಯಾಗಿದ್ದು, ಆದರೆ ಅದರ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಗೆಹ್ಲೋಟ್ ಮುಂದಿನ ವಾರ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆಯಾದರೂ, ರಾಜ್ಯದ ಮುಖ್ಯಮಂತ್ರಿ ಕುರ್ಚಿ ಬಿಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಷ್ಟ್ರಪತಿಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ತಪ್ಪು ಮಾಹಿತಿ: BJP ಶಾಸಕರ ಯಡವಟ್ಟು | Naanu Gauri

ರಾಷ್ಟ್ರಪತಿಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ತಪ್ಪು ಮಾಹಿತಿ: BJP ಶಾಸಕರ ಯಡವಟ್ಟು

1
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆ, ಅವರಿಗೆ ಸ್ವಾಗತ ಕೋರಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಹಾಕಿರುವ ಬ್ಯಾನರ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಬ್ಯಾನರ್‌ನಲ್ಲಿ ಮುರ್ಮು ಅವರನ್ನು ‘ದೇಶದ...