ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಮತ್ತು ಸ್ಮಾರಕದ ಕುರಿತು ಎನ್‌ಡಿಎ ಸರ್ಕಾರ ಅನಗತ್ಯ ವಿವಾದವನ್ನು ಸೃಷ್ಟಿಸುತ್ತಿದೆ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶನಿವಾರ ಆರೋಪಿಸಿದ್ದಾರೆ. ಸಾರ್ವಜನಿಕ ಒತ್ತಡದ ಮೇರೆಗೆ ಬಿಜೆಪಿ ಸರ್ಕಾರವು ಮನಮೋಹನ್ ಸಿಂಗ್ ಅವರ ಸ್ಮಾರಕವನ್ನು ಭವಿಷ್ಯದ ದಿನಗಳಲ್ಲಿ ನಿರ್ಮಿಸುವ ಯೋಜನೆಯನ್ನು ಘೋಷಿಸಿದೆ ಎಂದು ಗೆಹ್ಲೋಟ್ ಹೇಳಿದ್ದಾರೆ. ಮನಮೋಹನ್ ಸಿಂಗ್ ಅಂತ್ಯಕ್ರಿಯೆಗೆ
ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಎಂದು ಪರಿಗಣಿಸಲ್ಪಟ್ಟಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯಲ್ಲಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಡಾ. ಮನಮೋಹನ್ ಸಿಂಗ್ ಅವರಂತಹ ಮಹಾನ್ ವ್ಯಕ್ತಿಯ ಅಂತ್ಯಕ್ರಿಯೆ ಮತ್ತು ಸ್ಮಾರಕದ ಬಗ್ಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರವು ಅನಗತ್ಯ ವಿವಾದವನ್ನು ಸೃಷ್ಟಿಸಿದೆ” ಎಂದು ಗೆಹ್ಲೋಟ್ ಎಕ್ಸ್‌ನಲ್ಲಿ ಹೇಳಿದ್ದಾರೆ. ಸರ್ಕಾರದ ಈ ಕ್ರಮದ ಬಗ್ಗೆ ದೇಶದ ಜನರು ಅಸಮಾಧಾನ ವ್ಯಕ್ತಪಡಿಸಿದ ನಂತರ, ಜನರ ಒತ್ತಡದ ಹಿನ್ನಲೆ ಬಿಜೆಪಿ ಸರ್ಕಾರವು ಭವಿಷ್ಯದ ದಿನಗಳಲ್ಲಿ ಸ್ಮಾರಕವನ್ನು ನಿರ್ಮಿಸಲು ಘೋಷಿಸಿತು ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅವರು ಹೇಳಿದ್ದಾರೆ.
“ಭಾರತ ಸರ್ಕಾರವು ಯಾವುದೇ ವಿಶೇಷ ಸ್ಥಳದ ಬದಲು ನಿಗಮ ಬೋಧ ಘಾಟ್‌ನಲ್ಲಿ ಗೌರವಾನ್ವಿತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸುತ್ತಿದೆ. 2010 ರಲ್ಲಿ ಮಾಜಿ ಉಪರಾಷ್ಟ್ರಪತಿ ಭೈರೋನ್ ಸಿಂಗ್ ಶೇಖಾವತ್ ಅವರ ನಿಧನದ ನಂತರ ಬಿಜೆಪಿಯಿಂದ ಯಾವುದೇ ಬೇಡಿಕೆಯಿಲ್ಲದೆ, ಕಾಂಗ್ರೆಸ್ ಸರ್ಕಾರವು ಅವರ ಕುಟುಂಬದ ಜೊತೆ ಮಾತನಾಡಿತ್ತು. ಮತ್ತು ತಕ್ಷಣವೇ ಜೈಪುರದಲ್ಲಿ ಅವರ ಅಂತಿಮ ವಿಧಿಗಳಿಗೆ ವಿಶೇಷ ಸ್ಥಳವನ್ನು ಮಂಜೂರು ಮಾಡಿದರು ಮತ್ತು ಅಲ್ಲಿ ಸ್ಮಾರಕವನ್ನು ನಿರ್ಮಿಸಲಾಯಿತು,” ಗೆಹ್ಲೋಟ್ ಹೇಳಿದ್ದಾರೆ. ಮನಮೋಹನ್ ಸಿಂಗ್ ಅಂತ್ಯಕ್ರಿಯೆಗೆ
2012 ರಲ್ಲಿ ಮಹಾರಾಷ್ಟ್ರದಲ್ಲಿ ಬಾಳ್ ಠಾಕ್ರೆ ನಿಧನದ ನಂತರ, ಕಾಂಗ್ರೆಸ್ ಸರ್ಕಾರವು ಅವರ ಅಂತ್ಯಕ್ರಿಯೆಗಾಗಿ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ವಿಶೇಷ ಸ್ಥಳವನ್ನು ನೀಡಿತು ಎಂದು ಅವರು ನೆನಪಿಸಿದ್ದಾರೆ. ಕಾಂಗ್ರೆಸ್ ಯಾವಾಗಲೂ ಎಲ್ಲಾ ಪಕ್ಷಗಳ ನಾಯಕರಿಗೆ ಗೌರವಯುತ ವಿದಾಯವನ್ನು ನೀಡುತ್ತಿದೆ, ಆದರೆ ಮನಮೋಹನ್ ಸಿಂಗ್ ಅವರ ಬಗ್ಗೆ ಬಿಜೆಪಿಯ ಇಂತಹ ವರ್ತನೆ “ದುರದೃಷ್ಟಕರ” ಎಂದು ಮಾಜಿ ಸಿಎಂ ಗೆಹ್ಲೋಟ್ ಹೇಳಿದ್ದಾರೆ.
ಇದನ್ನೂ ಓದಿ: ‘ದೆಹಲಿಯಲ್ಲಿ ಬಿಜೆಪಿ ಹಣ ಹಂಚುತ್ತಿದೆ’ ಎಂದು ಆರೋಪಿಸಿದ ಎಎಪಿ; ಜಾರಿ ನಿರ್ದೇಶನಾಲಯಕ್ಕೆ ದೂರು
‘ದೆಹಲಿಯಲ್ಲಿ ಬಿಜೆಪಿ ಹಣ ಹಂಚುತ್ತಿದೆ’ ಎಂದು ಆರೋಪಿಸಿದ ಎಎಪಿ; ಜಾರಿ ನಿರ್ದೇಶನಾಲಯಕ್ಕೆ ದೂರು


