ಗುರುವಾರ ರಾತ್ರಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ಕೇಂದ್ರ ಸರ್ಕಾರವು ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಶುಕ್ರವಾರ ಘೋಷಿಸಿದೆ. ಈ ಸಂದರ್ಭದಲ್ಲಿ ಭಾರತದಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಜೊತೆಗೆ ದೇಶದಾದ್ಯಂತ ಹಲವು ರಾಜ್ಯ ಸರ್ಕಾರಗಳು ಶುಕ್ರವಾರ ಸರ್ಕಾರಿ ರಜೆ ಘೋಷಿಸಿವೆ. ಮನಮೋಹನ್ ಸಿಂಗ್ ನಿಧನ
ಶುಕ್ರವಾರ ನಿಗದಿಯಾಗಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಪಕ್ಷದ ಹಿರಿಯ ನಾಯಕನ ನಿಧನಕ್ಕೆ ಗೌರವ ಸೂಚಕವಾಗಿ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳನ್ನು ಮುಂದಿನ ಏಳು ದಿನಗಳ ಕಾಲ ರದ್ದುಗೊಳಿಸಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಎನ್ನಲಾಗುವ ಮತ್ತು ಎರಡು ಬಾರಿ ಪ್ರಧಾನಿಯಾಗಿದ್ದ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯಲ್ಲಿ 92 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಮನೆಯಲ್ಲಿ ಮೂರ್ಛೆ ಹೋದ ನಂತರ ಅವರನ್ನು ಏಮ್ಸ್‌ಗೆ ದಾಖಲಿಸಲಾಯಿತು. ಏಮ್ಸ್ ನೀಡಿದ್ದ ಬುಲೆಟಿನ್‌ನಲ್ಲಿ “ಅವರ ವಯೋಸಹಜ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಡಿಸೆಂಬರ್ 26 ರಂದು ಮನೆಯಲ್ಲಿ ಹಠಾತ್ ಪ್ರಜ್ಞೆ ಕಳೆದುಕೊಂಡರು” ಎಂದು ಹೇಳಿತ್ತು.
“ಮನೆಯಲ್ಲಿ ತಕ್ಷಣವೇ ಅವರಿಗೆ ಚಿಕಿತ್ಸೆ ನೀಡುವ ಕ್ರಮಗಳನ್ನು ಕೈಗೊಳ್ಳಲಾಯಿತು. ನಂತರ ಅವರನ್ನು ರಾತ್ರಿ 8.06 ಕ್ಕೆ ದೆಹಲಿಯ ಏಮ್ಸ್‌ಗೆ ವೈದ್ಯಕೀಯ ತುರ್ತುಸ್ಥಿತಿ ವಿಭಾಗಕ್ಕೆ ತರಲಾಯಿತು. ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ರಾತ್ರಿ 9.51 ಕ್ಕೆ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು” ಎಂದು ದೆಹಲಿ ಏಮ್ಸ್ ಬುಲೆಟಿನ್ ಹೇಳಿದೆ. ಮನಮೋಹನ್ ಸಿಂಗ್ ನಿಧನ
ಆಗಿನ ಪ್ರಧಾನಿ ಪಿವಿ ನರಸಿಂಹರಾವ್ ಅವರ ಅಡಿಯಲ್ಲಿ ಹಣಕಾಸು ಸಚಿವರಾಗಿದ್ದ ಮನಮೋಹನ್ ಸಿಂಗ್ ವರು, 1991 ರಲ್ಲಿ ಭಾರತವನ್ನು ದಿವಾಳಿತನದ ಅಂಚಿನಿಂದ ಹೊರತಂದು ಆರ್ಥಿಕ ಉದಾರೀಕರಣದ ಯುಗಕ್ಕೆ ನಾಂದಿ ಹಾಡಿದ್ದರು. ಈ ಸುಧಾರಣೆಗಳು ಭಾರತದ ಆರ್ಥಿಕ ಪಥದ ಹಾದಿಯನ್ನು ಬದಲಿಸಿವೆ ಎಂದು ವ್ಯಾಪಕವಾಗಿ ನಂಬಲಾಗಿದೆ. ಜೊತೆಗೆ ಗಂಭೀರ ಟೀಕೆಗಳೂ ವ್ಯಕ್ತವಾಗಿದೆ.
ಕರ್ನಾಟಕದ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯನ್ನು ಮುಕ್ತಾಯಗೊಳಿಸುತ್ತಿದ್ದಂತೆ ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಅಲ್ಲಿ ಪಕ್ಷದ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿದ್ದರು. ಅವರ ಸಾವು ಖಚಿತವಾಗುತ್ತಿದ್ದಂತೆಯೇ ನಾಯಕರನ್ನು ದೆಹಲಿಗೆ ದೌಡಾಯಿಸಿದರು.
ಇದನ್ನೂ ಓದಿ: ಇಂಡಿಯಾ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಪ್ರಯತ್ನಿಸುತ್ತೇವೆ ಎಂದ ಎಎಪಿ!
ಇಂಡಿಯಾ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಪ್ರಯತ್ನಿಸುತ್ತೇವೆ ಎಂದ ಎಎಪಿ!


