Homeಕರ್ನಾಟಕಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ : ಸಿಎಂ ಸಿದ್ದರಾಮಯ್ಯ

ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಮನಮೋಹನ್ ಸಿಂಗ್ ಅವರು, 2013-18 ನಡುವೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿತ್ತು ಎಂಬುವುದಾಗಿ ಶ್ಲಾಘಿಸಿದ್ದರು ಎಂದು ಸ್ಮರಿಸಿದರು.

ಬೆಳಗಾವಿಯಲ್ಲಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿದ ಸಿಎಂ, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ಅವರು, ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ ನರಸಿಂಹರಾವ್ ಅವರ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು.

ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶಕ್ಕಾಗಿ ಸಿದ್ದಪಡಿಸಿದ್ದ ಬೃಹತ್ ವೇದಿಕೆಯಲ್ಲಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ದಾಂಜಲಿ ಸಭೆ ನಡೆಯಿತು. ಸಿಂಗ್ ನಿಧನ ಹಿನ್ನೆಲೆ ಸಮಾವೇಶ ರದ್ದಾಗಿದೆ

‘ದೇಶದ ಆರ್ಥಿಕತೆಯಲ್ಲಿ ಮನಮೋಹನ್ ಸಿಂಗ್‌ರ ಹೆಜ್ಜೆ ಗುರುತು’

2004ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡಲಾಗುತ್ತದೆ. ಹತ್ತು ವರ್ಷಗಳ ಕಾಲ ಪ್ರಧಾನಿ ಮಂತ್ರಿಯಾಗಿ ದೇಶದ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಮನಮೋಹನ್ ಸಿಂಗ್ ಅವರು, ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು. ದೇಶ ಕಂಡ ಪ್ರಾಮಾಣಿಕ ಪ್ರಧಾನ ಮಂತ್ರಿಗಳಲ್ಲಿ ಮನಮೋಹನ್ ಸಿಂಗ್ ಒಬ್ಬರು. ರಾಜಕಾರಣದಲ್ಲಿ ಪ್ರಾಮಾಣಿಕತೆ ಕಾಣಸಿಗುವುದು ವಿರಳ. ಆದರೆ ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆಗುರುತನ್ನು ಬಿಟ್ಟು ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಕೊಂಡಾಡಿದರು.

‘ಮನಮೋಹನ್ ಸಿಂಗ್ ನಿಧನದಿಂದ ದೇಶಕ್ಕೆ ನಷ್ಟ’

ದೀರ್ಘಾವಧಿಯವರೆಗೆ ಅಧಿಕಾರದಲ್ಲಿದ್ದರೂ ಅತ್ಯಂತ ಸರಳ, ವಿನಯವಂತರಾಗಿದ್ದ ಮನಮೋಹನ್ ಸಿಂಗ್ ಅವರು ದೇಶದ ಗೌರವಯುತ ವ್ಯಕ್ತಿಯಾಗಿದ್ದರು. ಅವರ ಅಗಲಿಕೆ ಭಾರತಕ್ಕೆ ಆದ ದೊಡ್ಡ ನಷ್ಟ. ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ತಿಳಿಸಿದರು.

‘ಆಹಾರ ಭದ್ರತೆ ಕಾಯ್ದೆಯಡಿ ಅನ್ನಭಾಗ್ಯ ಯೋಜನೆ’

ಮನಮೋಹನ್ ಸಿಂಗ್ ದೇಶದಲ್ಲಿ ಮೊದಲ ಬಾರಿಗೆ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದವರು. ದೇಶದಲ್ಲಿ ಬಡತನ ಇದ್ದಿದ್ದರಿಂದ ಕಡಿಮೆ ದರದಲ್ಲಿ ಆಹಾರ ಲಭಿಸುವಂತಾಗಬೇಕೆಂಬ ಸದುದ್ದೇಶದಿಂದ ಈ ಕಾನೂನನ್ನು ಜಾರಿಗೆ ತರಲಾಯಿತು. ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಒಂದು ರೂ. ದರದಲ್ಲಿ ಒಂದು ಕೆಜಿ ಅಕ್ಕಿ ನೀಡುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಯಿತು. ನಂತರದ ದಿನಗಳಲ್ಲಿ ಅದನ್ನು ಐದು ಕೆಜಿಯಿಂದ ಏಳು ಕೆಜಿಯವರೆಗೆ ಹೆಚ್ಚಿಸಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಇಂದು ನರೇಂದ್ರ ಮೋದಿಯವರು ನೀಡುತ್ತಿರುವ ಐದು ಕೆಜಿ ಆಹಾರಧಾನ್ಯ ಹಂಚಿಕೆಯ ಯೋಜನೆ ಪ್ರಾರಂಭವಾದದ್ದು ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಿಂದ. ದೇಶದ ಬಡವರು, ನಿರುದ್ಯೋಗಿಗಳ ಕಷ್ಟ ನಿವಾರಣೆಗೆ ಪೂರಕ ಯೋಜನೆಗಳನ್ನು ಮನಮೋಹನ್ ಸಿಂಗ್ ಜಾರಿಗೊಳಿಸಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

‘ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಪ್ರಶಂಸೆ’

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಭೇಟಿಯಾಗಿದ್ದೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಅವರು, ರಾಜ್ಯದ ಆರ್ಥಿಕತೆ ಸ್ಥಿತಿ ಉತ್ತಮವಾಗಿದೆ ಎಂದು ಶ್ಲಾಘಿಸಿದ್ದರು. ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

ಇದನ್ನೂ ಓದಿ : ಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ಶ್ರದ್ಧಾಂಜಲಿ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...