Homeಮುಖಪುಟಸೋಲಿನ ಹೊಣೆಹೊತ್ತು ರಾಜೀನಾಮೆಗೆ ಮುಂದಾದ ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್‌ ತಿವಾರಿ

ಸೋಲಿನ ಹೊಣೆಹೊತ್ತು ರಾಜೀನಾಮೆಗೆ ಮುಂದಾದ ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್‌ ತಿವಾರಿ

- Advertisement -
- Advertisement -

ಮತ ಎಣಿಕೆ ಶುರುವಾದ ನಂತರವೂ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದ್ದ ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್‌ ತಿವಾರಿ, ಹೀನಾಯ ಸೋಲಿನ ಹೊಣೆಹೊತ್ತು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಐಎಎನ್‌ಎಸ್‌ ವರದಿ ಮಾಡಿದೆ.

ಹೊಸದಾಗಿ ಚುನಾಯಿತರಾದ ೦೮ ಬಿಜೆಪಿ ಶಾಸಕರನ್ನು ದೆಹಲಿಯಲ್ಲಿ ಭೇಟಿಯಾದ ನಂತರ, ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಮನೋಜ್ ತಿವಾರಿ, ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭಾ ಸದಸ್ಯರೂ ಆಗಿರುವ ಅವರು ದೆಹಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಗುರುತಿಸಲ್ಪಟ್ಟಿದ್ದರು. ಮನೋಜ್‌ ತಿವಾರಿಯವರಂತು ಬಿಜೆಪಿ 46 ಸ್ಥಾನಗಳನ್ನು ಬಿಜೆಪಿ ಪಡೆದು ಸರ್ಕಾರ ರಚಿಸುತ್ತದೆ ಎಂದು ಪದೇ ಪದೇ ಹೇಳಿದ್ದರು. ಆದರೆ ದೆಹಲಿ ಮತದಾರರು ಅದಕ್ಕೆ ಅವಕಾಶ ನೀಡಿಲ್ಲ.

ಇದೇ ಸಂದರ್ಭದಲ್ಲಿ ಹೊಸದಾಗಿ ಆಯ್ಕೆಯಾದ ಎಎಪಿ ಶಾಸಕರು ಬುಧವಾರ ಸಿಎಂ ನಿವಾಸದಲ್ಲಿ ನಡೆದ ಸಭೆಯ ನಂತರ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ್ದಾರೆ.

ಫೆಬ್ರವರಿ 16 ರ ಭಾನುವಾರ ರಾಮಲೀಲಾ ಮೈದಾನದಲ್ಲಿ ಕೇಜ್ರಿವಾಲ್ ದೆಹಲಿಯ ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

0
'ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ' ಮತ್ತು 'ನನ್ನ ಅಜ್ಜಿ ಆಡಳಿತದಲ್ಲಿ ದೇಶದ ಯುದ್ಧಕ್ಕಾಗಿ ತಮ್ಮ ಚಿನ್ನವನ್ನು ದಾನ ಮಾಡಿದ್ದಾರೆ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದು, ಪ್ರಧಾನಿ...