Homeಕರ್ನಾಟಕ'ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು' - ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

- Advertisement -
- Advertisement -

6 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿನ ‘ಹೊಸ ಧರ್ಮಗಳ ಉದಯ’ ಪಾಠವನ್ನು ಬೋಧಿಸದಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. “ರಾಜ್ಯದ ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಿಂದ ಬೌದ್ಧ, ಜೈನ ಧರ್ಮಗಳ ಪರಿಚಯ ಪಾಠಗಳನ್ನು ಕೈ ಬಿಟ್ಟಿಲ್ಲ” ಎಂದು ಹೇಳಿದ್ದಾರೆ.

ತಮ್ಮ ಈ ಕ್ರಮವನ್ನು ಸಮರ್ಥಿಸಿಕೊಳ್ಳಲು ಸುರೇಶ್‌ ಕುಮಾರ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ವೀಡಿಯೋದಲ್ಲಿ ಪ್ರಮುಖವಾಗಿ 3 ಕಾರಣಗಳನ್ನು ನೀಡಿದ್ದಾರೆ. ಮೊದಲನೆಯದಾಗಿ, “6ನೇ ತರಗತಿಯ ಸಮಾಜವಿಜ್ಞಾನ ಭಾಗ–1ರ ಪಾಠದ ಪೀಠಿಕೆಯಲ್ಲಿ ಅನಗತ್ಯ ಮತ್ತು ‘6ನೇ ತಗರತಿಯ ಮಕ್ಕಳ ವಯೋಮಾನಕ್ಕೆ ಮೀರಿದ ಪಠ್ಯಾಂಶ ಇದೆ’ ಎಂಬ ಅನೇಕರ ಅಭಿಪ್ರಾಯಗಳಿಗೆ ಪೂರಕವಾಗಿ, ಅದನ್ನು ಕೈಬಿಡಲು ನಿರ್ಧರಿಸಿ ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಭೌದ್ಧ, ಜೈನ ಧರ್ಮಗಳ ಪರಿಚಯ ಪಾಠಗಳಿಗೆ ಕೊಕ್‌ ನೀಡಿಲ್ಲ. ಆ ಪಾಠಗಳು ಪೂರ್ಣವಾಗಿ ಇವೆ, ಇರುತ್ತವೆ. ಬೌಧ ಧರ್ಮ ಮತ್ತು ಜೈನ ಧರ್ಮದ ಕುರಿತ ಪಾಠವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ದಿಶಾ ರವಿ ಕೇಸ್: ಟೂಲ್‌ಕಿಟ್ ಎಂದರೇನು..? ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

“ಸುಮಾರು 2 ತಿಂಗಳ ಹಿಂದೆ ನನಗೆ ಮಂತ್ರಾಲಯದ ಸ್ವಾಮಿಗಳು ಫೋನ್ ಮಾಡಿ ಖೇದ ವ್ಯಕ್ತಪಡಿಸಿದ್ದರು. 6 ನೇ ತರಗತಿ ಮಕ್ಕಳಿಗೆ ಈ ಪದಗಳು ಏನು ಅರ್ಥವಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು. ಅಲ್ಲಿಯವರೆಗೂ ಆ ಪಾಠದಲ್ಲಿ ಏನಿದೆ ಎಂದು ನನಗೂ ಗೊತ್ತಿರಲಿಲ್ಲ. ಇದಾದ ನಂತರ ನಾನು ಇದನ್ನು ಓದಿದೆ. ಇದು ಈ ವಯೋಮಾನದ ಮಕ್ಕಳಿಗೆ ಇದು ಸರಿಯಾದ ಪಠ್ಯವಲ್ಲ ಎಂದು ತಿಳಿಯಿತು” ಎಂದು ಹೇಳಿದರು.

ಎರಡನೆಯದಾಗಿ, “2016–17ನೇ ಸಾಲಿನಲ್ಲಿ ಪಠ್ಯಪುಸ್ತಕ ಪರಿಷ್ಕರಣೆಗೊಂಡಂದಿನಿಂದ ಈ ಪಠ್ಯಗಳು ಜಾರಿಯಲ್ಲಿವೆ. ಯಾವುದೇ ಸಮುದಾಯದ ಭಾವನೆಗಳಿಗೆ ಧಕ್ಕೆ ತರಬಾರದು. ವಿಶೇಷವಾಗಿ ಒಂದು ಜಾತಿಯ ಬಗ್ಗೆ, ಒಂದು ಸಮುದಾಯದ ಬಗ್ಗೆ ನಮ್ಮ ಮಕ್ಕಳಲ್ಲಿ ಅನಗತ್ಯ ದ್ವೇಷದ ಭಾವನೆ ಬಿತ್ತಬಾರದು ಎನ್ನುವ ಉದ್ದೇಶದಿಂದ ಈ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಭೌದ್ಧ ಧರ್ಮ ಹಾಗೂ ಜೈನ ಧರ್ಮ ಅಥವಾ ಇನ್ಯಾವುದೇ ಧರ್ಮದ ಅವಹೇಳನವನ್ನು ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ” ಎಂದು ಅವರು ಹೇಳಿದ್ದಾರೆ.

ಮೂರನೆಯದಾಗಿ, “ಈ ಪಾಠಕ್ಕಿಂತ ಮೊದಲು ಇರುವ ‘ಕ್ರೈಸ್ತ ಧರ್ಮ ಮತ್ತು ಇಸ್ಲಾಂ ಧರ್ಮಗಳ ಉದಯ’ ಪಾಠದಲ್ಲಿ ಈ ರೀತಿಯ ಅನಗತ್ಯ ಪೀಠಿಕೆಯನ್ನು ನೀಡಿಲ್ಲ. ಈ ಪಾಠಗಳಿಗೆ ಇರದ ಪೀಠಿಕೆ ಹೊಸ ಧರ್ಮಗಳ ಉದಯ ಪಾಠಕ್ಕೆ ಯಾಕೆ? ಹಾಗಾಗಿ ಇದನ್ನು ಬೋಧಿಸಬಾರದು ಎಂದು ಆದೇಶ ನೀಡಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಒಬ್ಬನೇ ಒಬ್ಬ ಪ್ರೇಕ್ಷಕನಿಗೆ ಐವರು ಭಾಷಣಕಾರರು!: ಬಿಜೆಪಿ ಕಾಲೆಳೆದ ಸಂಸದ ಶಶಿ ತರೂರ್

ಶಿಕ್ಷಣ ಇಲಾಖೆಯ ಆದೇಶ:

2020-21 ನೇ ಸಾಲಿನ 6 ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ 7 ನೇ ಪಾಠವನ್ನು (ಹೊಸ ಧರ್ಮಗಳ ಉದಯ) ಬೋಧಿಸದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. “6 ನೇ ತರಗತಿ ಸಮಾಜ ವಿಜ್ಞಾನ- ಭಾಗ 1 ರಲ್ಲಿನ ಪಾಠ-7 ‘ಹೊಸ ಧರ್ಮಗಳ ಉದಯ’ ಈ ಪಾಠದಲ್ಲಿನ ಪುಟ ಸಂಖ್ಯೆ: 82 ಹಾಗು 83ರಲ್ಲಿನ ವಿಷಯಾಂಶಗಳನ್ನು, 2020-21ನೆ ಶೈಕ್ಷಣಿಕ ಸಾಲಿಗೆ ಬೋಧನೆ-ಕಲಿಕೆ/ ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಸಂಬಂಧಿಸಿದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಮುಖ್ಯ ಶಿಕ್ಷಕರಿಗೆ ಸೂಕ್ತ ಸೂಚನೆ ನೀಡಲು ತಿಳಿಸಿದೆ. ಇದರ ಕುರಿತು ಕೈಗೊಂಡ ಕ್ರಮಗಳನ್ನು ಫೆ. 28ರೊಳಗೆ ವರದಿ ಮಾಡಲು ತಿಳಿಸಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪಾಠದಲ್ಲಿ ಏನಿದೆ?

“ಉತ್ತರ ವೇದಗಳ ಕಾಲದಲ್ಲಿ ಆಚರಿಸುತ್ತಿದ್ದ ಯಜ್ಞ, ಯಾಗಗಳಲ್ಲಿ ಆಹಾರ ಧಾನ್ಯ, ಹಾಲು, ತುಪ್ಪವನ್ನು ಹವಿಸ್ಸು ಎಂದು ದಹಿಸುತ್ತಿದ್ದುದರಿಂದ ಆಹಾರದ ಅಭಾವ ಸೃಷ್ಟಿಯಾಯಿತು. ವೈದಿಕೆ ಆಚರಣೆಗಳು ದುಬಾರಿಯಾಗಿದ್ದು, ಸಂಸ್ಕೃತ ಮಂತ್ರದ ಮೂಲಕ ನಡೆಸುತ್ತಿದ್ದುದರಿಂದ ಜನಸಾಮಾನ್ಯರಿಗೆ ಲಭ್ಯವಾಗುತ್ತಿರಲಿಲ್ಲ ಹಾಗೂ ಅರ್ಥ ಆಗುತ್ತಿರಲಿಲ್ಲ. ವರ್ಣ ವ್ಯವಸ್ಥೆಯಿಂದ ಸಾಮಾಜಿಕ ವಿಘಟನೆಯಾಯಿತು. ಈ ಎಲ್ಲಾ ಕಾರಣಗಳು ಹೊಸ ಧರ್ಮಗಳ ಉದಯಕ್ಕೆ ಪುಷ್ಠಿ ನೀಡಿದವು” ಎಂದು ಪಾಠದಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ: ನಾನೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಿಕ್ಷಣ ಸಚಿವರು ಕುವೆಂಪು ಅವರ ಮಕ್ಕಳಿಗೇಕೆ ವೈಚಾರಿಕತೆ ಎಂಬ ಲೇಖನ ಓದಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ. ಚಾರಿತ್ರಿಕ ಸತ್ಯಗಳನ್ನು ಬೋಧಿಸುವುದು ಮಕ್ಕಳಲ್ಲಿ ದ್ವೇಷ ಭಾವನೆ ಬಿತ್ತಿದಂತೆ ಹೇಗಾಗುತ್ತದೆ ಸಚಿವರೇ?

  2. ಮನುವಾದಿಗಳ ಆಡಳಿತದಲ್ಲಿ, ನಮ್ಮ ಮಕ್ಕಳಿಗೆ ಯಾವ ಪಾಠವನ್ನು ಮಾಡಬೇಕು ಎಂಬ ವಿಚಾರವನ್ನು ಬ್ರಾಹ್ಮಣ ದರ್ಮದ ಮಟಾದೀಶರು ನಿರ್ದರಿಸುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...