Homeಮುಖಪುಟಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಬೆಂಗಳೂರಿನ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಘಟನೆ; ಸ್ಮಾರ್ಟ್‌ಸಿಟಿ ಲಿಮಿಟೆಡ್‌ಗೆ ದೂರು

- Advertisement -
- Advertisement -

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧಿಸಿದ್ದರೂ ಆಡಳಿತಾರೂಢರ ಅವಿವೇಕದಿಂದಾಗಿ ಮತ್ತೆ ಮತ್ತೆ ಪ್ರಕರಣಗಳು ದಾಖಲಾಗುತ್ತಿವೆ. ಬೆಂಗಳೂರಿನಲ್ಲಿ ಸೋಮವಾರ (ಅ. 11) ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ದೂರು ನೀಡಲಾಗಿದೆ.

ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ವಿನಯ್‌ ಶ್ರೀನಿವಾಸ ಅವರು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಜೋಳನ್‌, ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್‌ ಗುಪ್ತಾ ಅವರನ್ನು ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿದ್ದಾರೆ.

“ಇಲ್ಲಿನ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಮ್ಯಾನ್‌ಹೋಲ್‌ ಒಳಗೆ ಕಾರ್ಮಿಕರನ್ನು ಇಳಿಸಲಾಗಿತ್ತು. ಯಾವುದೇ ರಕ್ಷಣಾ ಸಲಕರಣೆಗಳೂ ಇರಲಿಲ್ಲ. ಮಳೆ ನೀರು ಸರಾಗವಾಗಿ ಹರಿಸಲೆಂದು ಶುಚಿಗೊಳಿಸಲಾಗುತ್ತಿದೆ ಎಂದು ಹೇಳುತ್ತಾರೆ. ಆದರೆ ಒಳಚರಂಡಿ ಕಟ್ಟಿಕೊಂಡಿದೆ ಎಂದು ಅಪಾರ್ಟ್‌ಮೆಂಟ್‌ ಹೇಳುತ್ತದೆ” ಎಂದು ಬರೆದು ನಗರ ಪೊಲೀಸ್ ಕಮಿಷನರ್‌ ಕಮಲ್ ಪಂತ್‌ ಅವರನ್ನೂ ಟ್ಯಾಗ್‌ ಮಾಡಿ ಅವರು ಪ್ರಶ್ನಿಸಿದ್ದಾರೆ.

“ಸ್ಮಾರ್ಟ್ ಸಿಟಿ ಗುತ್ತಿಗೆದಾರರು ಈ ಕೆಲಸಕ್ಕೆ ಕಾರ್ಮಿಕರನ್ನು ದೂಡುತ್ತಿದೆ. ನಾನು ಗುತ್ತಿಗೆದಾರರಲ್ಲಿ ಕೇಳಿದಾಗ, ಆ ಜಾತಿ, ಆ ವೃತ್ತಿ ಮಾಡುವವರಿಗೆ ಇದ್ದು, ಅದೇ ಕೆಲಸವನ್ನು ಅವರು ಮಾಡಬೇಕು ಎಂದಿದ್ದಾರೆ” ಎಂದು ವಿನಯ್‌ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಅಮೃತ ಕನ್‌ಸ್ಟ್ರಕ್ಷನ್‌ ಪ್ರೈವೇಟ್‌ ಲಿಮಿಟೆಡ್‌‌ನಿಂದ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ನಡೆಯುತ್ತಿದ್ದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಕುರಿತು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ನೀಡಿರುವ ವಿನಯ್‌ ಶ್ರೀನಿವಾಸ ಹಾಗೂ ಸ್ವಾತಿ ಶಿವಾನಂದ್‌, “ನಾವು ಇಂದು ಬೆಳಿಗ್ಗೆ (ಸೋಮವಾರ, ಅಕ್ಟೋಬರ್‌ 11) ಇನ್ಫಾನ್ಟ್ರಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದೆವು. ಸೆಲೆರಾ ಡಯೋಗ್ನಾಟಿಕ್ಸ್‌ ಎದುರು ವ್ಯಕ್ತಿಯು ಮ್ಯಾನ್‌ಹೋಲ್‌ಗೆ ಇಳಿಯುತ್ತಿದ್ದನ್ನು ಕಂಡೆವು” ಎಂದಿದ್ದಾರೆ.

“ವ್ಯಕ್ತಿಯನ್ನು ಪ್ರಶ್ನಿಸಿದಾಗ ಮಳೆ ನೀರು ಕಟ್ಟಿಕೊಂಡಿದೆ. ಅದನ್ನು ತೆರವು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮತ್ತೊಬ್ಬ ವ್ಯಕ್ತಿಯೂ ಹಾಗೆ ಹೇಳಿದ್ದಾರೆ. ಆದರೆ ಚರಂಡಿಯೊಳಗೆ ಇಳಿದಿದ್ದ ವ್ಯಕ್ತಿಗಳು ಯಾವುದೇ ಗ್ಲೌಸ್‌, ಗಮ್‌ಬೂಟ್ಸ್‌‌ ಸೇರಿದಂತೆ ಯಾವುದೇ ರಕ್ಷಣ ಸಾಮಗ್ರಿಗಳನ್ನು ಧರಿಸಿರಲಿಲ್ಲ ಎಂಬುದನ್ನು ಗುರುತಿಸಿದೆವು. ಕೇಳಿದರೆ, ಅವರು ಯಾವುದೇ ಸಲಕರಣೆಗಳನ್ನು ನೀಡಿಲ್ಲ ಎಂದು ಪಿಟ್‌ನಲ್ಲಿ ಇಳಿದಿದ್ದ ವ್ಯಕ್ತಿಗಳು ಹೇಳಿದ್ದಾರೆ” ಎಂಬುದಾಗಿ ದೂರಿನಲ್ಲಿ ಹೇಳಿದ್ದಾರೆ.

“ಪಕ್ಕದ ಮಳಿಗೆಗೆ ಹೋಗಿ ಹತ್ತು ನಿಮಿಷದ ಬಳಿಕ ನಾವು ವಾಪಸ್‌ ಬರುವಾಗ ಅಲ್ಲಿ ಕೊಳಚೆ ನೀರು ತುಂಬಿದ್ದನ್ನು ಕಂಡೆವು. ಅವರಿಂದ ಗುತ್ತಿಗೆದಾರನ ನಂಬರ್‌ ಪಡೆದು ಕರೆ ಮಾಡಿದಾಗ ಮೂವರು (ಯೋಗೇಂದ್ರ, ರವಿಕಿರಣ್‌, ಹರ್ಷಗೌಡ) ಬಂದರು. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಅಮೃತ ಕನ್‌ಸ್ಟ್ರಕ್ಟರ್‌ ಪ್ರೈವೇಟ್‌ ಲಿಮಿಟೆಡ್‌ನ ಇಂಜಿಯರುಗಳು ಇವರೆಂಬುದು ತಿಳಿಯಿತು. ಚರಂಡಿಯನ್ನು ಶುಚಿಗೊಳಿಸಲು ಕೆಲಸಗಾರರಿಗೆ ಹೇಳಿರುವುದಾಗಿ ಅವರು ಮಾಹಿತಿ ನೀಡಿದರು ಎಂದು ದೂರಿನಲ್ಲಿ ಹೇಳಿದ್ದಾರೆ.

ಒಬ್ಬ ವ್ಯಕ್ತಿ ಮಲದ ಗುಂಡಿಯ ಒಳಗೆ ಹಾಗೂ ಮತ್ತೊಬ್ಬ ಹೊರಗೆ ನಿಂತು ಬಕೆಟ್‌ಗಳನ್ನು ಬಳಸಿ ಕೊಳಚೆಯನ್ನು ತೆಗೆಯುತ್ತಿದ್ದರು. ಇದರ ಬಗ್ಗೆ ಪ್ರಶ್ನಿಸಿದರೆ ಇಂಜಿನಿಯರ್‌‌ ಯೋಗೇಂದ್ರ ಅವರು, -ಯಾವುದೇ ಯಂತ್ರ ಕೊಳಚೆಯನ್ನು ಶುಚಿಗೊಳಿಸಲು ಇಲ್ಲ. ಕಾರ್ಮಿಕರು ಶುಚಿಗೊಳಿಸಲು ಅಗತ್ಯ- ಎಂದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಏಕೆ ಯಾವುದೇ ರಕ್ಷಣಾ ಸಲಕರಣೆಗಳನ್ನು ನೀಡಿಲ್ಲ ಎಂದು ಕೇಳಿದಾಗ ರವಿಕುಮಾರ್‌ ಎಂಬವರು, -ಇವರೆಲ್ಲ ಕುಡುಕರು, ಇವರಿಗೆ ಗಮ್‌ಬೂಟ್ಸ್‌ ಹಾಗೂ ಗ್ಲವ್ಸ್‌ಗಳನ್ನು ನೀಡಿದ್ದೇವೆ. ಆದರೆ ಅವರು ಮಾರಿಕೊಂಡಿದ್ದಾರೆ-ಎಂದು ಹೇಳಿದ್ದಾರೆ. ಹರ್ಷಗೌಡ ಎಂಬವರು,- ಭಾರತದಲ್ಲಿ ಜಾತಿ ವ್ಯವಸ್ಥೆ ಇದೆ. ಕೆಲವು ಕೆಲಸಗಳನ್ನು ಮಾಡಲೆಂದೇ ಕೆಲವು ಜನರಿದ್ದಾರೆ. ಈ ಜನ ಶುಚಿಗೊಳಿಸಲೆಂದೇ ಇದ್ದಾರೆ. ನಾವು ಇಂಜಿನಿಯರುಗಳು. ಅವರು ಶುಚಿಗೊಳಿಸುವುದನ್ನು ತಡೆಯಲು ಸಾಧ್ಯವಿಲ್ಲ- ಎಂದರು. ಸಂಸ್ಥೆಯಿಂದ ಈ ಕೆಲಸವನ್ನು ಮಾಡಿಸಲಾಗುತ್ತಿದೆ ಎಂದು ಎಂಜಿನಿಯರುಗಳು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಒಂದು ವಾರದೊಳಗೆ ತನಿಖೆ ನಡೆಸಿ, ವರದಿಯನ್ನು ನೀಡಬೇಕು. ಕೆಲಸಗಾರರೊಂದಿಗೆ ಘನತೆಯಿಂದ ವರ್ತಿಸುವಂತೆ ಗುತ್ತಿಗೆದಾರರಿಗೆ ಸ್ಮಾರ್ಟ್‌‌ಸಿಟಿ ಅಧಿಕಾರಿಗಳು ಎಚ್ಚರಿಸಬೇಕು. ಕೆಲಸಗಾರರ ರಕ್ಷಣೆಗೆ ಕೈಗೊಂಡಿರುವ ಕ್ರಮಗಳು, ಕೊಳಚೆ ಗುಂಡಿಗಳ ನಿರ್ಮೂಲನೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು” ಎಂದು ದೂರುದಾರರು ಆಗ್ರಹಿಸಿದ್ದಾರೆ.

ಮುಂದುವರಿದು, “ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ತಿಳಿಸಬೇಕು. ಮ್ಯಾನ್ಯುಯಲ್‌ ಸ್ಕ್ಯಾವೇಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಹೇಗೆ ಪಾಲಿಸಲಾಗುತ್ತಿದೆ ಎಂಬುದನ್ನು ಸಾರ್ವಜನಿಕವಾಗಿ ಮನದಟ್ಟು ಮಾಡಬೇಕು” ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಆರೋಪಿ ಆಶಿಶ್ ಮಿಶ್ರಾ 3 ದಿನ ಪೊಲೀಸ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...