Homeಕರ್ನಾಟಕಮನುಸ್ಮೃತಿ ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ಏಳಿಗೆ ಬಗ್ಗೆ ಅಸಹನೆ ಇದೆ: ಆರಗ ಜಾತಿವಾದಿ...

ಮನುಸ್ಮೃತಿ ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ಏಳಿಗೆ ಬಗ್ಗೆ ಅಸಹನೆ ಇದೆ: ಆರಗ ಜಾತಿವಾದಿ ನಿಂದನೆಗೆ ಪ್ರಿಯಾಂಕ್ ಪ್ರತಿಕ್ರಿಯೆ

- Advertisement -
- Advertisement -

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣ ವಿಚಾರವಾಗಿ ನಾಲಿಗೆ ಹರಿಬಿಟ್ಟಿದ್ದರು. ”ಮನುಸ್ಮೃತಿಯನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಅವರ ಮಾತುಗಳಿಂದ ಹೊರಬರುತ್ತವೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಇದೀಗ ಪ್ರೀಯಾಂಕ್ ಖರ್ಗೆ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

”ಆರಗ ಜ್ಞಾನೇಂದ್ರ  ಅವರೇ, ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು” ಎಂದು ಕಿಡಿಕಾರಿದ್ದಾರೆ.

”ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ. ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ” ಎಂದು ತಿರುಗೇಟು ಕೊಟ್ಟಿದ್ದಾರೆ.

”ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ. ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ” ಆಕ್ರೋಶ ಹೊರಹಾಕಿದ್ದಾರೆ.

”ಬಿಜೆಪಿಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲ” ಎಂದು ಪ್ರಿಯಾಂಕ್ ಖರ್ಗೆ ಅವರು ಆರಗ ಜ್ಞಾನೇಂದ್ರ ಅವರಿಗೆ ಛಾಟಿ ಬೀಸಿದ್ದಾರೆ.

ಇದನ್ನೂ ಓದಿ: ಜಾತಿವಾದಿ, ಜನಾಂಗೀಯವಾದಿ ನಿಂದನೆ: ಆರಗ ಜ್ಞಾನೆಂದ್ರ ವಿರುದ್ಧ ಆಕ್ರೋಶ

ಆರಗ ಜ್ಞಾನೇಂದ್ರ ಹೇಳಿದ್ದೇನು?

ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ, ಮಂಗಳವಾರ ತೀರ್ಥಹಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಸರ್ಕಾರದ ನೀತಿ ವಿರೋಧಿಸಿ ಘೋಷಣೆ, ಧಿಕ್ಕಾರ ಕೂಗಲಾಗುತ್ತಿತ್ತು. ಈ ವೇಳೆ ಆರಗ ಜ್ಞಾನೇಂದ್ರ ಅವರ ಮಾತಿನ ಸರದಿ ಬಂದಾಗ ಈಶ್ವರ್ ಖಂಡ್ರೆ ಹಾಗೂ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು.

”ಅರಣ್ಯ ಸಚಿವರಿಗೆ ಪಶ್ಚಿಮಘಟ್ಟದ ಜನರ ಜೀವನಕ್ರಮ, ಗಿಡ- ಮರಗಳ ಕುರಿತು ತಿಳಿವಳಿಕೆ ಇಲ್ಲ. ಪಶ್ಚಿಮ ಘಟ್ಟಗಳ ಬಗ್ಗೆ ವರದಿ ನೀಡಿರುವ, ವಿಜ್ಞಾನಿ ಕಸ್ತೂರಿರಂಗನ್ ಪರಿಸರ ತಜ್ಞ ಅಲ್ಲ” ಎಂದು ಖಂಡ್ರೆ ವಿರುದ್ಧ ಶಾಸಕ ಆರಗ ಜ್ಞಾನೇಂದ್ರ ಹರಿಹಾಯ್ದರು.

”ಅವರಿಗೆ ಮರ-ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ. ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ.  ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ..” ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿಯೇ ಅವರ ಬಣ್ಣದ ಬಗ್ಗೆ ವ್ಯಂಗ್ಯ ಮಾಡುವಂತೆ ಮಾತನ್ನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...