Homeಮುಖಪುಟಕುವೈತ್‌ನ ಕಟ್ಟಡವೊಂದರಲ್ಲಿ ಅಗ್ನಿ ದುರಂತ: ಭಾರತೀಯರು ಸೇರಿ 41 ಜನರು ಮೃತ್ಯು

ಕುವೈತ್‌ನ ಕಟ್ಟಡವೊಂದರಲ್ಲಿ ಅಗ್ನಿ ದುರಂತ: ಭಾರತೀಯರು ಸೇರಿ 41 ಜನರು ಮೃತ್ಯು

- Advertisement -
- Advertisement -

ಕುವೈತ್‌ನಲ್ಲಿ ಕಾರ್ಮಿಕರು ವಾಸಿಸುತ್ತಿದ್ದ ಕಟ್ಟಡವೊಂದರಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಭಾರತೀಯರು ಸೇರಿ 41 ಜನರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಇಂದು ಮುಂಜಾನೆ ಕುವೈತ್‌ನ ದಕ್ಷಿಣ ಅಹ್ಮದಿ ಗವರ್ನರೇಟ್‌ನಲ್ಲಿರುವ ಮಂಗಾಫ್ ಪ್ರದೇಶದ ಆರು ಅಂತಸ್ತಿನ ಕಟ್ಟಡದ ಅಡುಗೆಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿ ಸುಮಾರು 160 ಜನರು ವಾಸಿಸುತ್ತಿದ್ದರು ಮತ್ತು ಅದೇ ಕಂಪೆನಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಕಟ್ಟಡದಲ್ಲಿ ತಂಗಿದ್ದ ಹೆಚ್ಚಿನ ಕಾರ್ಮಿಕರು ಭಾರತೀಯರು ಎಂದು ವರದಿಯಾಗಿದೆ.

ಕಾರ್ಮಿಕರೆಲ್ಲ ಕೇರಳ, ತಮಿಳುನಾಡು ಮತ್ತು ಉತ್ತರ ಭಾರತದವರೆಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಕೇರಳದ ಉದ್ಯಮಿ ಕೆ ಜಿ ಅಬ್ರಹಾಂ ಅವರ ಎನ್‌ಬಿಟಿಸಿ ಗ್ರೂಪ್‌ ಒಡೆತನದ ಕಟ್ಟಡ ಇದೆಂದು ಹೇಳಲಾಗಿದ್ದು, ಎನ್‌ಬಿಟಿಸಿ ಸೂಪರ್‌ಮಾರ್ಕೆಟ್‌ ಉದ್ಯೋಗಿಗಳೂ ಇದೇ ಕಟ್ಟಡದಲ್ಲಿ ವಾಸಿಸುತ್ತಿದ್ದರೆನ್ನಲಾಗಿದೆ.

ಅವಘಡದ ಬೆನ್ನಲ್ಲಿ ಭಾರತೀಯ ಕಾರ್ಮಿಕರನ್ನು ಒಳಗೊಂಡ ದುರಂತ ಬೆಂಕಿ-ಅಪಘಾತಕ್ಕೆ ಸಂಬಂಧಿಸಿದಂತೆ ರಾಯಭಾರ ಕಚೇರಿಯು ತುರ್ತು ಸಹಾಯವಾಣಿ ಸಂಖ್ಯೆ +965-65505246ನ್ನು ನೀಡಿದ್ದು, ತುರ್ತು ಅವಶ್ಯಕತೆ ಇದ್ದಲ್ಲಿ  ಸಂಪರ್ಕಿಸಲು ಸೂಚಿಸಿದೆ. ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ರಾಯಭಾರ ಕಚೇರಿಯು ಬದ್ಧವಾಗಿದೆ ಎಂದು ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ.

ಕುವೈತ್ ನಗರದಲ್ಲಿ ಬೆಂಕಿ ಅವಘಡದ ಸುದ್ದಿಯಿಂದ ತೀವ್ರ ಆಘಾತವಾಗಿದೆ. 40 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಮತ್ತು 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಮ್ಮ ರಾಯಭಾರಿ ಸ್ಥಳಕ್ಕೆ ಹೋಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಾವು ಕಾಯುತ್ತಿದ್ದೇವೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಆಳವಾದ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಮತ್ತು ಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲರಿಗೂ ನಮ್ಮ ರಾಯಭಾರ ಕಚೇರಿಯು ಸಂಪೂರ್ಣ ಸಹಾಯವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಕುವೈತ್‌ನ ಆಂತರಿಕ ಸಚಿವ ಶೇಖ್ ಫಹಾದ್ ಅಲ್-ಯೂಸುಫ್ ಅಲ್-ಸಬಾಹ್ ಅವರು ಬುಧವಾರ ಬೆಂಕಿ ಅವಘಢ ಸಂಭವಿಸಿದ ಮಂಗಾಫ್ ಕಟ್ಟಡದ ಮಾಲೀಕರು, ಕಟ್ಟಡದ ಸೆಕ್ಯೂರಿಟಿ ಮತ್ತು ಕಾರ್ಮಿಕರಿಗೆ ಹೊಣೆಗಾರರಾಗಿರುವ ಕಂಪನಿಯ ಮಾಲಕರು ಸೇರಿದಂತೆ ಘಟನೆಗೆ ಕಾರಣರಾದವರ ಬಂಧನಕ್ಕೆ ಸೂಚಿಸಿದ್ದಾರೆ.

ಇಂದು ಸಂಭವಿಸಿರುವುದು ಕಂಪೆನಿ ಮತ್ತು ಕಟ್ಟಡ ಮಾಲೀಕರ ದುರಾಸೆಯ ಪರಿಣಾಮವಾಗಿದೆ. ಕಟ್ಟಡದ ವಿಚಾರಕ್ಕೆ ಸಂಬಂಧಿಸಿ ಸರಿಯಾಗಿ ನಿಯಮವನ್ನು ಪಾಲಿಸಲಾಗಿಲ್ಲ. ಒಂದು ವಸತಿ ಕಟ್ಟಡದಲ್ಲಿ ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ಕೂಡಿಟ್ಟಿರುವ ಬಗ್ಗೆ ಪರಿಶೀಲನೆಯನ್ನು ಕೂಡ ನಡೆಸಲು ಕುವೈತ್ ಪುರಸಭೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸಚಿವರು ನಿರ್ದೇಶನವನ್ನು ನೀಡಿದ್ದಾರೆ.

ಇದನ್ನು ಓದಿ:ದೇವಾಲಯದ ಹೆಸರಿನ ರಾಜಕೀಯ ಹೇಗೆ ಸರಿಪಡಿಸಬಹುದು ಎಂದು ಅಯೋಧ್ಯೆ ಜನ ತೋರಿಸಿಕೊಟ್ಟಿದ್ದಾರೆ: ಶರದ್ ಪವಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...