Homeಕರ್ನಾಟಕಪ್ರಶಾಂತ್‌ ಭೂಷಣ್‌ ಪರ ಬೆಂಗಳೂರಿನಾದ್ಯಂತ ಹಲವು ಪ್ರತಿಭಟನೆಗಳು

ಪ್ರಶಾಂತ್‌ ಭೂಷಣ್‌ ಪರ ಬೆಂಗಳೂರಿನಾದ್ಯಂತ ಹಲವು ಪ್ರತಿಭಟನೆಗಳು

"ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ" ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ.

- Advertisement -
- Advertisement -

ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಗುರಿಯಾಗಿ ದೋಷಿ ಎಂದು ಪರಿಗಣಿಸ್ಪಟ್ಟಿರುವ ಪ್ರಶಾಂತ್‌ ಭೂಷಣ್‌ ಪರವಾಗಿ ಬೆಂಗಳೂರಿನ ಹಲವಾರು ಕಡೆ ಪ್ರತಿಭಟನೆಗಳು ದಾಖಲಾಗಿವೆ.

ಇಂದು ಭೂಷಣ್ ಅವರ ಶಿಕ್ಷೆಯ ಪ್ರಮಾಣದ ಕುರಿತು ವಿಚಾರಣೆ ನಡೆಯುತ್ತಿರುವುದರಿಂದ ದನಿಯಿಲ್ಲದವರ ದನಿ ಪ್ರಶಾಂತ್ ಭೂಷಣ್ ಜೊತೆ ನಾವಿದ್ದೇವೆ ಎಂದು ಸಾವಿರಾರು ಜನರು ಬೀದಿಗಿಳಿದಿದ್ದಾರೆ.

ಇದನ್ನೂ ಒದಿ: ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಬೆಂಗಳೂರಿನ ಹಲವಾರು ಕಡೆ ಪ್ರತಿಭಟನೆಗಳು ನಡೆದಿದ್ದು, “ಹಮ್ ದೇಖೇಂಗೆ”(ನಾವೂ ನೋಡುತ್ತೇವೆ) ಎಂಬ ಬಿತ್ತಿಪತ್ರಗಳನ್ನು ಹಿಡಿದ ಹಲವಾರು ಸಾಮಾಜಿಕ ಕಾರ್ಯಕರ್ತರು ಪ್ರಶಾಂತ್‌ ಭೂಷಣ್‌ಗೆ ಬೆಂಬಲ ವ್ಯಕ್ತಪಡಿಸಿದರು. ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವರು ಸಾಮಾಜಿಕ ಕಾರ್ಯಕರ್ತರು ಕೊರೊನಾ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಪ್ರಶಾಂತ್‌ ಭೂಷಣ್ ಪರ ನಾವು ಇದ್ದೇವೆ ಎಂದು ಪ್ರತಿಭಟನೆ ನಡೆಸಿದರು.

ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಗ್ರಾಮದಲ್ಲಿ ಪ್ರಶಾಂತ್ ಭೂಷಣ್‌ಗೆ ಬೆಂಬಲ

ಬೆಂಗಳೂರಿನ ಸಂಜಯ್ ನಗರ ವಾರ್ಡ್‌ನ ಭೂಪಸಂದ್ರ ಮುಖ್ಯ ರಸ್ತೆಯಲ್ಲಿ ಹಲವರು ಜನರು ಪ್ರಶಾಂತ್‌ ಭೂಷಣ್ ಪರವಾಗಿ ದನಿಯೆತ್ತಿದರು.

ಬೆಂಗಳೂರು ನಗರದ ಸಂಜಯ್ ನಗರ ವಾರ್ಡ್‌ನ ಭೂಪಸಂದ್ರದ ಮುಖ್ಯರಸ್ತೆ
ಬೆಂಗಳೂರು ನಗರದ ಸಂಜಯ್ ನಗರ ವಾರ್ಡ್‌ನ ಭೂಪಸಂದ್ರದ ಮುಖ್ಯರಸ್ತೆ

ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕಾಗಿ ಪ್ರಶಾಂತ್ ಭೂಷಣ್ ಪರ ನಾವು ಇದ್ದೇವೆ ಎಂದು ಬೆಂಗಳೂರು ನಗರದ ಯಲಚೇನಹಳ್ಳಿ ವಾರ್ಡ್‌ನಲ್ಲಿ ಸಾಮಾಜಿಕ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು.

ಬೆಂಗಳೂರು ನಗರದ ಯಲಚೇನಹಳ್ಳಿ ವಾರ್ಡ್‌

ಬೆಂಗಳೂರು ನಗರ ಜಿಲ್ಲೆಯ ಸೂಲಿಕೆರೆ ಗ್ರಾಮ ಪಂಚಾಯಿತಿಯ ಸಾಮಾಜಿಕ ಕಾರ್ಯಕರ್ತರು ಸಂವಿಧಾನದ ಆಶಯಗಳ ರಕ್ಷಣೆಗಾಗಿ ಪ್ರಶಾಂತ್ ಭೂಷಣ್ ಪರ ನಾವಿದ್ದೇವೆ ಎಂದು ಘೋಷಿಸಿದರು.

ಬೆಂಗಳೂರು ನಗರ ಜಿಲ್ಲೆಯ ಸೂಲಿಕೆರೆ ಗ್ರಾಮ ಪಂಚಾಯಿತಿ

ಬೆಂಗಳೂರು ನಗರದ ಪಾದರಾಯನಪುರದಲ್ಲಿ ನೂರಾರು ಜನರು ಪ್ರಶಾಂತ್ ಭೂಷಣ್ ಪರ ನಿಂತು ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.

ಬೆಂಗಳೂರಿನ ಪಾದರಾಯಣಪುರ
ಬೆಂಗಳೂರಿನ ಪಾದರಾಯಣಪುರ
ಬೆಂಗಳೂರಿನ ಪಾದರಾಯಣಪುರ

ಪ್ರಸ್ತುತ ನಡೆಯುತ್ತಿವ ವಿಚಾರಣೆಯಲ್ಲಿ ಪ್ರಶಾಂತ್ ಭೂಷಣ್, “ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ” ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ತನ್ನ ಹೇಳಿಕೆ ದಾಖಲಿಸಿದ ಪ್ರಶಾಂತ್ ಭೂಷಣ್, ತಾನು ಕ್ಷಮೆ ಕೇಳುವುದಿಲ್ಲ, ಶಿಕ್ಷೆ ಸ್ವೀಕರಿಸುತ್ತೇನೆ ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಘೋಷಿಸಿದ್ದಾರೆ. ಎರಡು ಮೂರು ದಿನಗಳ ಸಮಯ ನೀಡುತ್ತೇವೆ, ನಿಮ್ಮ ಹೇಳಿಕೆಯನ್ನು ಮರುಪರಿಶೀಲಿಸುತ್ತೀರಾ ಎಂಬ ನ್ಯಾಯಮೂರ್ತಿಗಳ ಮನವಿಗೆ ಯಾವುದೇ ಕಾರಣಕ್ಕೂ ನನ್ನ ಹೇಳಿಕೆಗಳಲ್ಲಿ ಬದಲಾವಣೆ ಇಲ್ಲ ಎಂದು ದಿಟ್ಟತೆ ಮೆರೆದಿದ್ದಾರೆ.


ಓದಿ: ನ್ಯಾಯಾಧೀಶರು ಹಾಗೂ ವಕೀಲರು ಸೇರಿದಂತೆ 3 ಸಾವಿರಕ್ಕೂ ಹೆಚ್ಚು ಜನರಿಂದ ಪ್ರಶಾಂತ್‌ ಭೂಷಣ್ ಪರ ಸಹಿ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...