Homeಮುಖಪುಟಜಗದೀಶ್ ಶೆಟ್ಟರ್ ಸಹಿತ ಹಲವು ಹಾಲಿ ಶಾಸಕರಿಗಿಲ್ಲ ಬಿಜೆಪಿ ಟಿಕೆಟ್: ಹಲವರ ಕ್ಷೇತ್ರ ಬದಲಾವಣೆ

ಜಗದೀಶ್ ಶೆಟ್ಟರ್ ಸಹಿತ ಹಲವು ಹಾಲಿ ಶಾಸಕರಿಗಿಲ್ಲ ಬಿಜೆಪಿ ಟಿಕೆಟ್: ಹಲವರ ಕ್ಷೇತ್ರ ಬದಲಾವಣೆ

- Advertisement -
- Advertisement -

ಕರ್ನಾಟಕದ ವಿಧಾನಸಭಾ ಚುನಾವಣೆ ಸನ್ನಿಹಿತವಾಗಿದ್ದರೂ ಆಡಳಿತರೂಢ ಬಿಜೆಪಿ ಪಕ್ಷವು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಹಿಂದೇಟು ಹಾಕುತ್ತಿದೆ. ಇದೇ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ, ಶಿವಮೊಗ್ಗ ನಗರ ಶಾಸಕ ಕೆ.ಎಸ್ ಈಶ್ವರಪ್ಪನರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಹಿ ಕನಿಷ್ಟ ಇಪ್ಪತ್ತು ಹಾಲಿ ಶಾಸಕರಿಗೆ ಈ ಬಾರಿ ಬಿಜೆಪಿ ಟಿಕೆಟ್ ಸಿಗುವುದಿಲ್ಲ ಎಂಬ ವರದಿಗಳು ಪ್ರಕಟವಾಗುತ್ತಿವೆ. ಇನ್ನು ಯಡಿಯೂರಪ್ಪನವರನ್ನು ಬಿಟ್ಟು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿರುವುದಕ್ಕೆ ಬೇಸರಗೊಂಡು ಅವರು ದೆಹಲಿಯಿಂದ ವಾಪಸ್ಸಾಗಿದ್ದಾರೆ.

ಯಾರಿಗಿಲ್ಲ ಟಿಕೆಟ್?

ಜಗದೀಶ್ ಶೆಟ್ಟರ್: ಮಾಜಿ ಮುಖ್ಯಮಂತ್ರಿ, ಹಾಲಿ ಸಚಿವ ಜಗದೀಶ್ ಶೆಟ್ಟರ್‌ರವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್‌ನಿಂದ ಬೆಳಿಗ್ಗೆ ಫೋನ್ ಕರೆ ಬಂದಿತ್ತು. ಹೊಸಬರಿಗೆ ಅವಕಾಶ ಮಾಡಿಕೊಡಿ ಎಂದು ಹೇಳುತ್ತಿದ್ದಾರೆ. ನಾನು ಮೂವತ್ತು ವರ್ಷ ಕಟ್ಟಿದ ಪಕ್ಷದವರು ನನಗೆ ಹೀಗೆ ಹೇಳುವುದು ಸರಿಯೇ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನು ನೂರಾರು ಜನರಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದೇನೆ. ಆರು ಸಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇವೆ. ಯಾವುದೇ ಕಪ್ಪು ಚುಕ್ಕೆ ಹೊಂದಿಲ್ಲ. ಪಕ್ಷನಿಷ್ಟನಾಗಿದ್ದೇನೆ. ಹಾಗಿದ್ದರೂ ಟಿಕೆಟ್ ನಿರಾಕರಿಸುತ್ತಿರುವುದಕ್ಕೆ ಎಂದು ಪ್ರಶ್ನಿಸಿದ್ದೇನೆ ಎಂದಿದ್ದಾರೆ.

ಈ ಕುರಿತು ಈಗಾಗಲೇ ಬಿ.ಎಸ್ ಯಡಿಯೂರಪ್ಪನವರ ಜೊತೆ ಮಾತನಾಡಿದ್ದೇನೆ. ಪಕ್ಷದ ವರಿಷ್ಠರ ನಡೆ ಆಧರಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಈಶ್ವರಪ್ಪನವರ ಪುತ್ರನಿಗಿಲ್ಲ ಟಿಕೆಟ್: ಇನ್ನು ನಿವೃತ್ತಿ ಘೋಷಿಸಿರುವ ಕೆ.ಎಸ್ ಈಶ್ವರಪ್ಪನವರ ಪುತ್ರ ಕೆ.ಇ.ಕಾಂತೇಶ್‌ರವರಿಗೂ ಟಿಕೆಟ್ ನೀಡುವುದಿಲ್ಲ ಎಂದು ಬಿಜೆಪಿ ಹೈಕಮಾಂಡ್ ಸುಳಿವು ನೀಡಿದೆ. ಆಯನೂರು ಮಂಜುನಾಥ್ ಶಿವಮೊಗ್ಗ ನಗರದಿಂದಲೇ ಟಿಕೆಟ್ ಕೇಳುತ್ತಿದ್ದು, ಒಂದು ವೇಳೆ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ ಸೇರುವ ಆಲೋಚನೆಯಲ್ಲಿದ್ದಾರೆ. ಹಾಗಾಗಿ ಈಶ್ವರಪ್ಪನ ಪುತ್ರನಿಗೆ ಟಿಕೆಟ್ ನೀಡಲು ಬಿಜೆಪಿ ಹಿಂದೇಟು ಹಾಕುತ್ತಿದೆ.

ಸಂಸದ ಬಸವರಾಜು ಮಗನಿಗೂ ಟಿಕೆಟ್ ಡೌಟ್: ತುಮಕೂರು ಸಂಸದ ಜಿ.ಎಸ್ ಬಸವರಾಜುರವರ ಪುತ್ರ ಜ್ಯೋತಿಗಣೇಶ್‌ರವರಿಗೂ ಟಿಕೆಟ್ ಸಿಗುವುದು ಅನುಮಾನವಾಗಿದೆ. ಇವರಿಬ್ಬರೂ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು. ತುಮಕೂರು ನಗರ ಟಿಕೆಟ್ ಗಾಗಿ ಮತ್ತೊಬ್ಬ ಆರ್‌ಎಸ್‌ಎಸ್‌ ಕಟ್ಟಾಳು ಮಾಜಿ ಶಾಸಕ ಸೊಗಡು ಶಿವಣ್ಣ ತೀವ್ರ ಪೈಪೋಟಿ ನಡೆಸುತ್ತಿದ್ದು, ಬಹುಶಃ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ.

ಹಲವರ ಕ್ಷೇತ್ರ ಬದಲಾವಣೆ

ಸಚಿವ ಆರ್ ಅಶೋಕ್, ಶಾಸಕ ರವಿ ಸುಬ್ರಮಣ್ಯ, ಮಾಜಿ ಶಾಸಕ ನಂದೀಶ್ ರೆಡ್ಡಿ ಹಲವರ ಕ್ಷೇತ್ರ ಬದಲಾವಣೆ ಮಾಡಲಾಗುತ್ತದೆ ಎಂಬ ಮಾಹಿತಿಗಳು ಸಹ ಹರಿದಾಡುತ್ತಿವೆ. ಪದ್ಮನಾಭನಗರ ಮತ್ತು ಬಸವನಗುಡಿಯಲ್ಲಿ ಬಿಜೆಪಿಯಲ್ಲಿ ಯಾರೂ ನಿಂತರೂ ಗೆಲ್ಲುತ್ತಾರೆ. ಹಾಗಾಗಿ ಪೈಪೋಟಿ ಇರುವ ಬಿಟಿಎಂ ಲೇಔಟ್, ಬ್ಯಾಟರಾಯನಪುರದಂತಹ ಕ್ಷೇತ್ರಗಳಲ್ಲಿ ನಿಲ್ಲಬೇಕು ಎಂದು ತಾಕೀತು ಮಾಡಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಚುನಾವಣೆಗಳಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿಯೂ ಬಿಜೆಪಿ ಇದೇ ತಂತ್ರವನ್ನು ಅನುಸರಿಸಿತ್ತು. ಹಲವು ಹಾಲಿ ಶಾಸಕರನ್ನು ಬಿಟ್ಟು ಹೊಸಬರಿಗೆ ಟಿಕೆಟ್ ನೀಡಿತ್ತು. ಗುಜರಾತ್‌ನಲ್ಲಿ ಅದು ಯಶಸ್ವಿಯಾದರೆ, ಹಿಮಾಚಲ ಪ್ರದೇಶದಲ್ಲಿ ಮುಳುವಾಗಿತ್ತು. ಕರ್ನಾಟಕದಲ್ಲಿ ಯಾವ ಫಲಿತಾಂಶ ಬರುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...