Homeಮುಖಪುಟಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‌ಐಆರ್ ಒಂದನ್ನು ದಾಖಲಿಸಿದ್ದಾರೆ.

ಅಜಿತ್ ಪವಾರ್ ಅವರ ಸೋದರ ಸಂಬಂಧಿಯ ಮಗನಾದ ರೋಹಿತ್ ರಾಜೇಂದ್ರ ಪವಾರ್, ಪ್ರಸ್ತುತ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕರ್ಜತ್-ಜಮಖೇಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇವರು ಎನ್‌ಸಿಪಿ ಶರದ್ ಪವಾರ್ ಬಣದಲ್ಲಿದ್ದಾರೆ.

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ದರ ಹಿಂದೆ ‘ದೊಡ್ಡ ಮಟ್ಟದ ಕ್ರಿಮಿನಲ್ ಪಿತೂರಿ’ಯ ಅನುಮಾನವನ್ನು ವ್ಯಕ್ತಪಡಿಸಿ ಅಥವಾ ಆರೋಪ ಮಾಡಿ ರೋಹಿತ್ ಪವಾರ್ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದನ್ನು ಆಧರಿಸಿ ಪೊಲೀಸರು ಝೀರೋ ಎಫ್‌ಐಆರ್‌ ದಾಖಲಿಸಿದ್ದಾರೆ.

ಝೀರೋ ಎಫ್‌ಐಆರ್ ಎಂದರೆ ಅಪರಾಧ ಎಲ್ಲಿ ಸಂಭವಿಸಿದೆ ಎಂಬುದನ್ನು ಲೆಕ್ಕಿಸದೆ ದೇಶದ ಯಾವುದೇ ಪೊಲೀಸ್ ಠಾಣೆಯಲ್ಲಿ ದಾಖಲಿಸಬಹುದಾದ ದೂರು. ಈ ಎಫ್‌ಐಆರ್ ಅನ್ನು ಆರಂಭದಲ್ಲಿ ಕ್ರಮ ಸಂಖ್ಯೆ 0 ಯೊಂದಿಗೆ ನೋಂದಾಯಿಸಿ, ನಂತರ ತನಿಖೆಗಾಗಿ ಸೂಕ್ತ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುತ್ತದೆ.

ಬೆಂಗಳೂರು ಪೊಲೀಸರು ರೋಹಿತ್ ಪವಾರ್ ದೂರಿನ ಎಫ್‌ಐಆರ್ ಅನ್ನು ಹೆಚ್ಚಿನ ತನಿಖೆಗಾಗಿ ಈಗಾಗಲೇ ಮಹಾರಾಷ್ಟ್ರ ಪೊಲೀಸರಿಗೆ ವರ್ಗಾಯಿಸಿದ್ದಾರೆ ಎಂದು indianexpress.com ಬುಧವಾರ (ಮಾ.25) ವರದಿ ಮಾಡಿದೆ.

ಬೆಂಗಳೂರಿನಲ್ಲಿ ದೂರು ದಾಖಲಿಸಿರುವ ಕುರಿತು ಪ್ರತಿಕ್ರಿಯಿಸಿದ ರೋಹಿತ್ ಪವಾರ್, “ಈ ಹಿಂದೆ ದೂರು ನೀಡಿದ್ದರೂ ಮಹಾರಾಷ್ಟ್ರದಲ್ಲಿ ಪ್ರಕರಣ ದಾಖಲಾಗಿಲ್ಲ. ಆದ್ದರಿಂದ ತಾನು ಬೆಂಗಳೂರು ಪೊಲೀಸರನ್ನು ಸಂಪರ್ಕಿಸಬೇಕಾಯಿತು” ಎಂದು ಹೇಳಿರುವುದಾಗಿ ವರದಿಯಾಗಿದೆ.

ಸುಪ್ರೀಂ ಕೋರ್ಟ್‌ನಲ್ಲಿ ನಿವೃತ್ತ ಸಿಜೆಐ ಬಿ.ಆರ್‌ ಗವಾಯಿ ಅವರ ಮೇಲೆ ನಡೆದ  ಅವರ ಮೇಲೆ ನಡೆದ ಹಲ್ಲೆಯ ಯತ್ನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ‘ಝೀರೋ ಎಫ್‌ಐಆರ್’ ದಾಖಲಾದ ಉದಾಹರಣೆಯನ್ನು  ರೋಹಿತ್ ಪವಾರ್ ಸ್ಮರಿಸಿದ್ದು, ಮಹಾರಾಷ್ಟ್ರ ಪೊಲೀಸರ ನಿಷ್ಕ್ರಿಯತೆಯಿಂದಾಗಿ ಅಜಿತ್ ಪವಾರ್ ಅವರ ಪ್ರಕರಣದಲ್ಲೂ ಇದೇ ಮಾದರಿಯ ಕಾನೂನು ಪ್ರಕ್ರಿಯೆಯನ್ನು ಅನುಸರಿಸಬೇಕಾಯಿತು ಎಂದು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ರೋಹಿತ್ ಪವಾರ್ ಅವರು ಬೆಂಗಳೂರಿನಲ್ಲಿ ದಾಖಲಿಸಿರುವ ‘ಝೀರೋ ಎಫ್‌ಐಆರ್’ನಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಪ್ರಮುಖ ಸೆಕ್ಷನ್‌ಗಳನ್ನು ಉಲ್ಲೇಖಿಸಲಾಗಿದೆ. ಈ ದೂರಿನಲ್ಲಿ ಪ್ರಮುಖವಾಗಿ ಅಜಿತ್ ಪವಾರ್ ಅವರ ಸಾವಿನ ಹಿಂದೆ ವ್ಯವಸ್ಥಿತ ಕ್ರಿಮಿನಲ್ ಪಿತೂರಿ ನಡೆದಿದೆ ಎಂದು ಆರೋಪಿಸಲಾಗಿದೆ.

ದೂರಿನ ಪ್ರಕಾರ, ವಿಎಸ್‌ಆರ್‌ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಖಾಸಗಿ ಸಂಸ್ಥೆ ನಿರ್ವಹಿಸುತ್ತಿದ್ದ ವಿಮಾನವು ಹಾರಾಟಕ್ಕೆ ಯೋಗ್ಯವಾಗಿರಲಿಲ್ಲ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ, ವಿಮಾನದ ನಿರ್ವಹಣಾ ದಾಖಲೆಗಳನ್ನು ತಿದ್ದಲಾಗಿದೆ ಮತ್ತು ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಅಂಶಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೈಲಟ್‌ನ ಹಳೆಯ ದಾಖಲೆಗಳು, ಕೊನೆಯ ಕ್ಷಣದಲ್ಲಿ ವಿಮಾನದ ಸಿಬ್ಬಂದಿಯನ್ನು ಬದಲಾಯಿಸಿದ್ದು ಮತ್ತು ಹವಾಮಾನ ವೈಪರೀತ್ಯದ ನಡುವೆಯೂ ವಿಮಾನವನ್ನು ಇಳಿಸಲು ತೆಗೆದುಕೊಂಡ ಸಂಶಯಾಸ್ಪದ ನಿರ್ಧಾರಗಳ ಬಗ್ಗೆಯೂ ರೋಹಿತ್ ಪವಾರ್ ದೂರಿನಲ್ಲಿ ಅನುಮಾಣ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಎಫ್‌ಐಆರ್ ದಾಖಲಿಸಲು ಮಾಡಿದ ಪ್ರಯತ್ನಗಳು ವಿಫಲವಾದ ಹಿನ್ನೆಲೆಯಲ್ಲಿ ತಾವು ಬೆಂಗಳೂರು ಪೊಲೀಸರನ್ನು ಸಂಪರ್ಕಿಸಬೇಕಾಯಿತು ಎಂದು ರೋಹಿತ್ ಪವಾರ್ ತಿಳಿಸಿದ್ದಾರೆ. ಬೆಂಗಳೂರು ಪೊಲೀಸರು ಈ ದೂರಿನ ಆಧಾರದ ಮೇಲೆ ‘ಝೀರೋ ಎಫ್‌ಐಆರ್’ ದಾಖಲಿಸಿಕೊಂಡು, ನಂತರ ಅದನ್ನು ಮುಂದಿನ ತನಿಖೆಗಾಗಿ ಪುಣೆಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ. 

ರೋಹಿತ್ ಪವಾರ್ ಅವರ ಪ್ರಕಾರ, ಅವರು ಫೆಬ್ರವರಿ 25ರಂದು ಮೆರೈನ್ ಡ್ರೈವ್ ಪೊಲೀಸ್ ಠಾಣೆ ಮತ್ತು ಫೆಬ್ರವರಿ 26ರಂದು ಬಾರಾಮತಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದರು. ಆದರೆ ಅಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿರಲಿಲ್ಲ. ನಂತರ ಪುಣೆ ಸಿಐಡಿಯು ಕೇವಲ ಆಕಸ್ಮಿಕ ಸಾವು ವರದಿ (ಎಡಿಆರ್) ಬಗ್ಗೆ ಮಾತ್ರ ತನಿಖೆ ನಡೆಸಲಾಗುತ್ತಿದೆ ಎಂದು ತಮಗೆ ತಿಳಿಸಿತ್ತು ಎಂದು ಅವರು ಹೇಳಿದ್ದಾರೆ.

ತಮ್ಮ ದೂರಿನಲ್ಲಿ ಪವಾರ್ ಅವರು, ‘ಉಪಮುಖ್ಯಮಂತ್ರಿಯನ್ನು ಮಟ್ಟಹಾಕುವ ಉದ್ದೇಶದಿಂದ ನಡೆದ ದೊಡ್ಡ ಕ್ರಿಮಿನಲ್ ಪಿತೂರಿ’ ಇದಾಗಿದೆ ಎಂದು ಆರೋಪಿಸಿದ್ದಾರೆ. ವಿಮಾನಯಾನ ಸುರಕ್ಷತಾ ನಿಯಮಗಳ ವ್ಯವಸ್ಥಿತ ಉಲ್ಲಂಘನೆ, ದಾಖಲೆಗಳ ತಿದ್ದುಪಡಿ ಮತ್ತು ವಿಎಸ್‌ಆರ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಘೋರ ನಿರ್ಲಕ್ಷ್ಯವನ್ನು ಅವರು ದೂರಿನಲ್ಲಿ ಎತ್ತಿ ತೋರಿಸಿದ್ದಾರೆ.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ನಡೆಸಿದ ಸುರಕ್ಷತಾ ತಪಾಸಣೆಯನ್ನು ಉಲ್ಲೇಖಿಸಿದ ಅವರು, ಬೊಂಬಾರ್ಡಿಯರ್ ಲಿಯರ್‌ಜೆಟ್ 45 ವಿಮಾನವು ‘ನಿರ್ಲಕ್ಷ್ಯಕ್ಕೊಳಗಾಗಿತ್ತು, ಹಾರಾಟಕ್ಕೆ ಯೋಗ್ಯವಾಗಿರಲಿಲ್ಲ’ ಮತ್ತು ಅದನ್ನು ನೆಲಕ್ಕಿಳಿಸಲಾಗಿತ್ತು ಎಂದು ಪ್ರತಿಪಾದಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಜೆಟ್ ವಿಮಾನವನ್ನು ಅದರ ಓವರ್‌ಹಾಲ್ ಮಿತಿಯ ಅಪಾಯಕಾರಿ ಹತ್ತಿರದ ಅವಧಿಯಲ್ಲಿ ಕಾರ್ಯಾಚರಣೆ ಮಾಡಲಾಗಿತ್ತು ಮತ್ತು ವಿಮಾನದ ಹಾರಾಟದ ದತ್ತಾಂಶಗಳನ್ನು ಮರೆಮಾಚಿರುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ವಿಮಾನದ ಸಿಬ್ಬಂದಿ ಬದಲಾವಣೆಯ ಬಗ್ಗೆಯೂ ಪ್ರಶ್ನೆ ಎತ್ತಿರುವ ಪವಾರ್, ಅದಕ್ಕೆ ನೀಡಲಾದ ವಿವರಣೆಯು ‘ಅಪನಂಬಿಕೆಯಿಂದ ಕೂಡಿದೆ’ ಎಂದು ಕರೆದಿದ್ದಾರೆ. ಮುಖ್ಯ ಪೈಲಟ್ ಸುಮಿತ್ ಕಪೂರ್ ಅವರಿಗೆ ಮದ್ಯಪಾನಕ್ಕೆ ಸಂಬಂಧಿಸಿದ ನಿಯಮ ಉಲ್ಲಂಘನೆಯ ಇತಿಹಾಸವಿದೆ ಎಂದು ಅವರು ಆರೋಪಿಸಿದ್ದಾರೆ. ವಿವರಿಸಲಾಗದ ವಿಳಂಬಗಳು, ರನ್‌ವೇಯ ಹಠಾತ್ ಬದಲಾವಣೆ ಮತ್ತು ಅಂತಿಮ ಕ್ಷಣಗಳಲ್ಲಿ ಪೈಲಟ್‌ನ ಮೌನವನ್ನು ಅವರು ಎತ್ತಿ ತೋರಿಸಿದ್ದು, ಇದು ಮದ್ಯಪಾನದಿಂದ ಉಂಟಾದ ಅಶಕ್ತತೆ ಅಥವಾ ಉದ್ದೇಶಪೂರ್ವಕ ನಿರ್ಲಕ್ಷ್ಯ ಇರಬಹುದು ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಬೊಂಬಾರ್ಡಿಯರ್ ಲಿಯರ್‌ಜೆಟ್ 45 ವಿಮಾನದ ಪ್ರಮಾಣೀಕರಣದಲ್ಲಿ ಕಾರ್ಯವಿಧಾನದ ಲೋಪಗಳಿತ್ತು ಎಂದು ಎಫ್‌ಐಆರ್‌ನಲ್ಲಿ ಪ್ರತಿಪಾದಿಸಲಾಗಿದೆ. ಅಲ್ಲದೆ, ಇದು ನಿಯಂತ್ರಕ ಸಂಸ್ಥೆಗಳ ವೈಫಲ್ಯದ ಸಾಧ್ಯತೆಯನ್ನು ಎತ್ತಿ ತೋರಿಸಿದ್ದು, ಪ್ರಸ್ತುತ ನಡೆಯುತ್ತಿರುವ ತಾಂತ್ರಿಕ ತನಿಖೆಯ ಆಚೆಗೆ ಸಮಗ್ರ ಕ್ರಿಮಿನಲ್ ತನಿಖೆಗೆ ಒತ್ತಾಯಿಸಲಾಗಿದೆ.

ಜನವರಿ 28ರಂದು ಮುಂಬೈನಿಂದ ಹೊರಟಿದ್ದ ವಿಎಸ್‌ಆರ್ ವೆಂಚರ್ಸ್ ಪ್ರೈವೆಟ್‌ ಲಿಮಿಟೆಡ್ ಸಂಸ್ಥೆಯ ಬೊಂಬಾರ್ಡಿಯರ್ ಲಿಯರ್‌ಜೆಟ್ 45 ವಿಮಾನವು ಬಾರಾಮತಿ ವಿಮಾನ ನಿಲ್ದಾಣದ ಸಮೀಪ ಪತನಗೊಂಡಿತ್ತು. ಈ ಭೀಕರ ಅಪಘಾತದಲ್ಲಿ ಅಜಿತ್ ಪವಾರ್ ಸೇರಿದಂತೆ ಐವರು ಸಾವನ್ನಪ್ಪಿದ್ದರು.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...