Homeಮುಖಪುಟಉದ್ಯೋಗ ನೀಡುವ ನೆಪದಲ್ಲಿ ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ; 'ಪ್ರಬಲ ರಾಜಕಾರಣಿಗಳು ಶಾಮೀಲು' ಎಂದು ಆರ್‌ಜೆಡಿ...

ಉದ್ಯೋಗ ನೀಡುವ ನೆಪದಲ್ಲಿ ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ; ‘ಪ್ರಬಲ ರಾಜಕಾರಣಿಗಳು ಶಾಮೀಲು’ ಎಂದು ಆರ್‌ಜೆಡಿ ಆರೋಪ

- Advertisement -
- Advertisement -

ಬಿಹಾರದ ಮುಜಾಫರ್‌ಪುರದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ‘ಉದ್ಯೋಗ ನೀಡುವ ನೆಪದಲ್ಲಿ ತಮ್ಮನ್ನು ವಂಚಿಸಲಾಗಿದೆ ಮತ್ತು ಲೈಂಗಿಕ ದೌರ್ಜನ್ಯ ಎಸಗಲಾಗಿದೆ’ ಎಂದು ಹೆಚ್ಚಿನ ಸಂಖ್ಯೆಯ ಮಹಿಳೆಯರು ದೂರು ನೀಡಿದ್ದಾರೆ. ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ರಾಜಕೀಯ ವಲಯದ ಪ್ರಬಲ ವ್ಯಕ್ತಿಗಳ ಶಾಮೀಲಾಗಿದೆ ಎಂದು ಆರೋಪಿಸಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

“ಇದು ಯಾವಾಗಲೂ ನಡೆಯುತ್ತಲೇ ಇರುತ್ತದೆ; ನಮ್ಮಲ್ಲಿ ಕೆಲವು ರಾಜಕೀಯ ವ್ಯಕ್ತಿಗಳು (ಹೆಣ್ಣುಮಕ್ಕಳು) ಪೂರೈಕೆಯಲ್ಲಿ ತೊಡಗುತ್ತಾರೆ, ಅವರು ಕೆಲವೊಮ್ಮೆ ಸಂಸದರಾಗುತ್ತಾರೆ, ಕೆಲವೊಮ್ಮೆ ಬಿಹಾರದ ಮಂತ್ರಿಗಳಾಗುತ್ತಾರೆ. ಅವರ ಕೆಲಸವು ಮಹಿಳೆಯರ ಸರಬರಾಜು ಮಾಡುವುದು ಮತ್ತು ಅಂತಹ ಅನುಚಿತ ವರ್ತನೆಯನ್ನು ಮಾಡುವುದು… ಇದೆಲ್ಲವೂ ನಡೆಯುತ್ತದೆ. ಯಾರು ಬಿಹಾರದ ಮಂತ್ರಿಗಳಾಗುತ್ತಾರೆ ಅವರ ಆಜ್ಞೆಯ ಮೇರೆಗೆ ನಕಲಿ ಕಂಪನಿಗಳನ್ನು ಮಾಡುತ್ತಾರೆ, ಅದೇ ಜನರು ರಾಜ್ಯಸಭೆಗೆ ಹೋಗುತ್ತಾರೆ” ಎಂದು ಗಂಭೀರ ಆರೋಪ ಮಾಡಿದೆ.

ಜೆಡಿಯು ಮುಖಂಡ ನೀರಜ್ ಕುಮಾರ್ ಮಾತನಾಡಿ, ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದ್ದು, ಪೊಲೀಸರು ಈ ಬಗ್ಗೆ ಗಮನ ಹರಿಸಿ ತನಿಖೆ ನಡೆಸುತ್ತಿದ್ದಾರೆ. ಮಹಿಳೆಯರನ್ನು ಬಂಧಿಯಾಗಿಟ್ಟುಕೊಂಡು ಲೈಂಗಿಕ ದೌರ್ಜನ್ಯ ಎಸಗಿದ 9 ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು, ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಒಂಬತ್ತು ಜನರ ವಿರುದ್ಧ ಹಲವಾರು ಯುವತಿಯರನ್ನು ತಿಂಗಳುಗಟ್ಟಲೆ ಬಂಧಿಯಾಗಿಟ್ಟುಕೊಂಡು ಅವರಿಗೆ ಉದ್ಯೋಗ ನೀಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ನಕಲಿ ಮಾರುಕಟ್ಟೆ ಸಂಸ್ಥೆಯೊಂದಿಗೆ ಸಂಬಂಧ ಹೊಂದಿದ್ದರು ಎಂದು ಅವರು ಹೇಳಿದ್ದಾರೆ.

“ಎಲ್ಲ ಒಂಬತ್ತು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ನ್ಯಾಯಾಲಯದ ನಿರ್ದೇಶನದ ನಂತರ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ವಿನಿತಾ ಸಿನ್ಹಾ ತಿಳಿಸಿದ್ದಾರೆ.

ಸಂತ್ರಸ್ಥೆಯರಲ್ಲಿ ಒಬ್ಬರು ಒಂಬತ್ತು ಜನರ ವಿರುದ್ಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು ಎಂದು ಅವರು ಹೇಳಿದರು.

“ನಾವು ದೂರುದಾರರ ಹೇಳಿಕೆಯನ್ನು ಮತ್ತು ಹಲವಾರು ಇತರ ಬಲಿಪಶುಗಳ ಹೇಳಿಕೆಯನ್ನು ದಾಖಲಿಸಿದ್ದೇವೆ. ಆರೋಪಿಯು ಜೂನ್ 2022 ರಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಅವಳನ್ನು ಮೊದಲು ಸಂಪರ್ಕಿಸಿದನು ಮತ್ತು ಉತ್ತಮ ಉದ್ಯೋಗವನ್ನು ಪಡೆಯಲು ಮುಜಾಫರ್‌ಪುರಕ್ಕೆ ಭೇಟಿ ನೀಡುವಂತೆ ಕೇಳಿಕೊಂಡನು ಎಂದು ದೂರಿನಲ್ಲಿ ಬಹಿರಂಗಪಡಿಸಲಾಗಿದೆ” ಎಂದು ಸಿನ್ಹಾ ಹೇಳಿದರು.

“ಆಕೆ ಮುಜಾಫರ್‌ಪುರಕ್ಕೆ ಬಂದಾಗ ಮೊದಲು ಕೋಣೆಯಲ್ಲಿ ಇರಿಸಲಾಗಿತ್ತು. ಇನ್ನೂ ಹಲವಾರು ಯುವತಿಯರು ಅಲ್ಲಿಯೇ ಉಳಿದುಕೊಂಡಿದ್ದರು. ನಂತರ, ಅವರನ್ನು ಅಜ್ಞಾತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು ಮತ್ತು ಎಲ್ಲರೂ ಯುವತಿಯರಿಗೆ ನಕಲಿ ಸಂಸ್ಥೆ ಹೆಸರಲ್ಲಿ ಕರೆಗಳನ್ನು ಮಾಡುವಲ್ಲಿ ತೊಡಗಿದ್ದರು ಮತ್ತು ಅವರಲ್ಲಿ  ಲಾಭದಾಯಕ ಉದ್ಯೋಗದ ಆಮಿಷ ನೀಡುತ್ತಿದ್ದರು. ಅಂತಿಮವಾಗಿ, ಆರೋಪಿಗಳು ಸಂತ್ರಸ್ತರೊಂದಿಗೆ ಇರಲು ಪ್ರಾರಂಭಿಸಿದರು” ಎಂದು ಅವರು ಹೇಳಿದರು.

“ಸಂತ್ರಸ್ತರನ್ನು ಆರೋಪಿಗಳು ಬಂಧಿಸಿದ್ದಾರೆ. ಸಂತ್ರಸ್ತರನ್ನು ಆರೋಪಿಗಳು ಥಳಿಸಿದ್ದಾರೆ ಮತ್ತು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ. ದೂರುದಾರರು ಮತ್ತು ಇತರ ಬಲಿಪಶುಗಳನ್ನು ಮದುವೆಗೆ ಒತ್ತಾಯಿಸಲಾಯಿತು” ಎಂದು ಅವರು ಹೇಳಿದರು.

ಆರಂಭದಲ್ಲಿ ನಮ್ಮ ದೂರನ್ನು ಸ್ವೀಕರಿಸಲು ಪೊಲೀಸರು ನಿರಾಕರಿಸಿದರು ಮತ್ತು ಇದರಿಂದಾಗಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು ಎಂದು ಸಂತ್ರಸ್ತೆಯೊಬ್ಬರು ಹೇಳಿದರು. ಮೊದಲಿಗೆ ಆಕೆಯ ದೂರನ್ನು ಪೊಲೀಸರು ಏಕೆ ದಾಖಲಿಸಲಿಲ್ಲ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಿನ್ಹಾ ಹೇಳಿದ್ದಾರೆ.

ಇದನ್ನೂ ಓದಿ; ಮುಂಬೈ ವಾಯವ್ಯ ಲೋಕಸಭಾ ಫಲಿತಾಂಶ ವಿವಾದ; ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದ ಆದಿತ್ಯ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಕಾರ್ಯಕರ್ತನ ‘ಪಾಕಿಸ್ತಾನ್ ಜಿಂದಾಬಾದ್’ ಪ್ರಕರಣ ರದ್ದು! ಪ್ರತಿಭಟನೆ ವೇಳೆ ‘ಬಾಯಿತಪ್ಪಿ ಬಂದ ಮಾತು’ ಎಂಬ ವಾದ ಪುರಸ್ಕರಿಸಿದ ಕರ್ನಾಟಕ ಹೈಕೋರ್ಟ್!

ಭಾರತೀಯ ಜನತಾ ಪಾರ್ಟಿ (BJP) ಆಯೋಜಿಸಿದ್ದ ಪ್ರತಿಭಟನೆಯಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂಬ ಘೋಷಣೆ ಕೂಗಿದ ಆರೋಪ ಎದುರಿಸುತ್ತಿದ್ದ ಕಾರ್ಯಕರ್ತನೊಬ್ಬನ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾಯಿತಪ್ಪಿ...

“ಒಬ್ಬ ವ್ಯಕ್ತಿ 10 ಜನರ ಕೆಲಸ ಮಾಡಬೇಕು”: ಕಾರ್ಮಿಕ ಹಕ್ಕುಗಳ ಉಲ್ಲಂಘನೆ ಖಂಡಿಸಿ ಜೆಎನ್‌ಯುನಲ್ಲಿ 500ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರ ಮುಷ್ಕರ

ನವದೆಹಲಿ: ಕಾನೂನುಬಾಹಿರ ವೇತನ ಕಡಿತ, ಶಾಸನಬದ್ಧ ಬೋನಸ್ ಪಾವತಿಸದಿರುವುದು, ಕಾರ್ಮಿಕರನ್ನು ಅನಿಯಂತ್ರಿತವಾಗಿ ಅಮಾನತುಗೊಳಿಸುವುದು ಮತ್ತು ಸಿಬ್ಬಂದಿ ಕೊರತೆಯಿಂದ ಹೆಚ್ಚುತ್ತಿರುವ ಕೆಲಸದ ಹೊರೆ ಸೇರಿದಂತೆ ಹಲವು ಕಾರ್ಮಿಕ ಹಕ್ಕುಗಳ ಉಲ್ಲಂಘನೆಗಳನ್ನು ಖಂಡಿಸಿ ದೆಹಲಿಯ ಜವಾಹರಲಾಲ್...

ಅಮೆರಿಕ ಮಧ್ಯಂತರ ಚುನಾವಣೆ | ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತ ಸಾಧಿಸಿದ ಡೆಮಾಕ್ರಟಿಕ್ ಪಕ್ಷ : ಅಧ್ಯಕ್ಷ ಟ್ರಂಪ್‌ಗೆ ತೀವ್ರ ಮುಖಭಂಗ

ಅಮೆರಿಕ ಮಧ್ಯಂತರ ಚುನಾವಣೆಯಲ್ಲಿ (US Midterm Elections 2026) ಡೆಮಾಕ್ರಟಿಕ್ ಪಕ್ಷವು ಐತಿಹಾಸಿಕ 'ಬ್ಲೂ ವೇವ್' (ನೀಲಿ ಅಲೆ) ಸೃಷ್ಟಿಸಿದ್ದು, ಸಂಸತ್ತಿನ ಸದನಗಳಾದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ (ಕೆಳಮನೆ) ಮತ್ತು ಸೆನೆಟ್ (ಮೇಲ್ಮನೆ)...

ಭಾರತಕ್ಕೆ ಬಿಗ್ ರಿಲೀಫ್ ಕೊಟ್ಟ ಇರಾನ್: ಹೊರ್ಮುಜ್ ಜಲಸಂಧಿ ನಿರ್ಬಂಧದಿಂದ ಭಾರತೀಯ ನೌಕೆಗಳಿಗೆ ವಿನಾಯಿತಿ!

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಇರಾನ್ ನಡುವಿನ ಶೀತಲ ಸಮರ ಹಾಗೂ ಅಮೆರಿಕದ ಮಿಲಿಟರಿ ಹಾಜರಾತಿಯಿಂದಾಗಿ ತೈಲ ಸಾರಿಗೆ ಮಾರ್ಗಗಳಲ್ಲಿ ಭದ್ರತಾ ಆತಂಕ ಸೃಷ್ಟಿಯಾಗಿರುವ ಬೆನ್ನಲ್ಲೇ, ಇರಾನ್ ಸರ್ಕಾರವು ಜಾಗತಿಕ ವಾಣಿಜ್ಯ ಕ್ಷೇತ್ರಕ್ಕೆ ಅತ್ಯಂತ ಮಹತ್ವದ ನಿರ್ಧಾರವೊಂದನ್ನು...

ಗುಜರಾತ್: ‘ತಪ್ಪಿತಸ್ಥನೆಂದು ಸಾಬೀತುಪಡಿಸಲು ಪುರಾವೆಗಳಿಲ್ಲ’: ಗೋಮಾಂಸ ಸಂಗ್ರಹ ಆರೋಪದ ಮುಸ್ಲಿಂ ವ್ಯಕ್ತಿಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ಗೋಮಾಂಸ ಸಂಗ್ರಹಿಸಿ ಮಾರಾಟಕ್ಕೆ ಸಿದ್ಧಪಡಿಸಿಕೊಂಡಿದ್ದಾರೆ ಎಂಬ ಆರೋಪದಡಿ ಸುಮಾರು ಹತ್ತು ತಿಂಗಳಿನಿಂದ ಜೈಲಿನಲ್ಲಿದ್ದ ಗುಜರಾತ್‌ನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಪಿಯ ವಿರುದ್ಧ ಈ ಹಿಂದೆ ದಾಖಲಾಗಿದ್ದ...

ದೆಹಲಿಯ ‘ವೋಟ್ ಚೋರಿ’ ರ‍್ಯಾಲಿಗೆ ಗೈರು: ಮಧ್ಯಪ್ರದೇಶ ಯುವ ಕಾಂಗ್ರೆಸ್‌ನ 60 ಪ್ರಮುಖ ಪದಾಧಿಕಾರಿಗಳು ಅಮಾನತು!

ಅಖಿಲ ಭಾರತ ಯುವ ಕಾಂಗ್ರೆಸ್ ನಾಯಕತ್ವವು ಕಠಿಣ ನಿರ್ಧಾರ ತಳೆದಿದ್ದು, ರಾಷ್ಟ್ರೀಯ ನಾಯಕತ್ವ ನೀಡಿದ್ದ ಕರೆಗೆ ಗೈರುಹಾಜರಾದ ಮಧ್ಯಪ್ರದೇಶ ಯುವ ಕಾಂಗ್ರೆಸ್‌ನ ಬರೋಬ್ಬರಿ 60 ಪ್ರಮುಖ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ...

ಮೂರು ಕೋಟಿ ಒಳನುಸುಳುಕೋರರು ಎಲ್ಲಿಂದ ಬಂದರು?: ‘ವೋಟ್ ಚೋರಿ’ ಬಗ್ಗೆ ಮುಕ್ತ ಚರ್ಚೆಗೆ ಬನ್ನಿ: ಮೋದಿ-ಅಮಿತ್ ಶಾಗೆ ಖರ್ಗೆ ಸವಾಲು

ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ಮತಗಳ್ಳತನದ (ವೋಟ್ ಚೋರಿ) ಆರೋಪಗಳ ಬಗ್ಗೆ ಪ್ರಶ್ನೆಗಳನ್ನು ಎದುರಿಸುವ ಧೈರ್ಯ ತೋರಿಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂದಿಟ್ಟಿರುವ ಮುಕ್ತ ಚರ್ಚೆಯ ಸವಾಲನ್ನು ಸ್ವೀಕರಿಸಿ ಎಂದು ಕಾಂಗ್ರೆಸ್ ರಾಷ್ಟ್ರೀಯ...

ಎರಡಕ್ಕಿಂತ ಹೆಚ್ಚು ಮಕ್ಕಳು ಹೊಂದುವುದನ್ನು ದಂಡನೀಯವಾಗಿಸುವ ಕಾನೂನುಗಳು ಪ್ರಸ್ತುತತೆ ಕಳೆದುಕೊಂಡಿವೆ : ಸುಪ್ರೀಂ ಕೋರ್ಟ್

ಭಾರತದ ಕುಸಿಯುತ್ತಿರುವ ಫಲವತ್ತತೆ ದರವನ್ನು (fertility rate) ಗಮನದಲ್ಲಿಟ್ಟುಕೊಂಡು, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ವ್ಯಕ್ತಿಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸುವ ಕಾನೂನುಗಳು ತಮ್ಮ ಪ್ರಸ್ತುತತೆಯನ್ನು ಕಳೆದುಕೊಂಡಿವೆ ಎಂದು ಸುಪ್ರೀಂ ಕೋರ್ಟ್...

ಅಮೆರಿಕ ಮಧ್ಯಂತರ ಚುನಾವಣೆ : ಜಗತ್ತಿನ ಗಮನ ಸೆಳೆದ ಅಬ್ದುಲ್ ಸಯೀದ್, ಡೆಬ್ ಹಾಲೆಂಡ್ ಮತ್ತು ಇಲ್ಹಾನ್ ಉಮರ್ ಆಯ್ಕೆ!

ಅಮೆರಿಕದ ರಾಜಕೀಯ ಅಖಡಾದಲ್ಲಿ ಭಾರಿ ಕುತೂಹಲ ಮೂಡಿಸಿದ್ದ 2026ರ ಮಧ್ಯಂತರ ಚುನಾವಣೆಯ ಪ್ರಾಥಮಿಕ ಫಲಿತಾಂಶಗಳು ಹೊರಬಿದ್ದಿದ್ದು, ಡೆಮಾಕ್ರಟಿಕ್ ಪಕ್ಷದ ಸುಧಾರಣಾವಾದಿ ನಾಯಕರ ಜಯಯಾನ ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸಕ್ಕೆ ನಾಂದಿ ಹಾಡಿದೆ. ಅಸೋಸಿಯೇಟೆಡ್...

ನ್ಯಾಯಾಲಯದ ಆಕ್ಷೇಪದ ಬಳಿಕವೂ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸಿ ಎಂದ ಚು. ಆಯೋಗ : ಸುಪ್ರೀಂ ಕೋರ್ಟ್ ಗಮನಕ್ಕೆ ತಂದ ಪ್ರಶಾಂತ್ ಭೂಷಣ್

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ಪ್ರಶ್ನಿಸಿರುವ ಅರ್ಜಿದಾರರು, ಡಿಲೀಟ್ ಆದ ಮತದಾರರು ಹೊಸ ಮತದಾರರಾಗಿ ನೋಂದಾಯಿಸಿಕೊಳ್ಳಲು ಫಾರಂ 6 ಸಲ್ಲಿಸಬಹುದು ಎಂದು ಭಾರತೀಯ ಚುನಾವಣಾ ಆಯೋಗ ಇತ್ತೀಚೆಗೆ ನೀಡಿರುವ...