Homeಮುಖಪುಟರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

ರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

- Advertisement -
- Advertisement -

ಪಂಜಾಬ್-ಹರಿಯಾಣ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಮಾವೋವಾದಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ಸ್ಥಳದ 1,200 ಕಿಲೋ ಮೀಟರ್‌ ದೂರದಲ್ಲಿರುವ ಮಧ್ಯಪ್ರದೇಶದ ಅರಣ್ಯದಲ್ಲಿ ಮಾವೋವಾದಿಗಳ ಕರಪತ್ರ, ಬ್ಯಾನರ್ ಪತ್ತೆಯಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಅವರ ಆಮರಣಾಂತ ಉಪವಾಸ ಸತ್ಯಾಗ್ರಹ ಮತ್ತು ಮಧ್ಯಪ್ರದೇಶದಲ್ಲಿ ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಸಂಘರ್ಷ ಉಲ್ಬಣಗೊಂಡಿರುವ ನಡುವೆ ಈ ಬೆಳವಣಿಗೆ ನಡೆದಿದೆ.

ಪೂರ್ವ ಮಧ್ಯಪ್ರದೇಶದ ಬಲಘಾಟ್ ಜಿಲ್ಲೆಯ (ರಾಜ್ಯದ ಮೂರು ಮಾವೋವಾದಿ ಪೀಡಿತ ಜಿಲ್ಲೆಗಳಲ್ಲಿ ಒಂದು) ದಟ್ಟಾರಣ್ಯದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳು ರೂಪಜಾರ್ ಅರಣ್ಯ ಪ್ರದೇಶದಲ್ಲಿ ಎರಡು ಪುಟಗಳ ಕರಪತ್ರಗಳು ಮತ್ತು ಕೆಂಪು ಬ್ಯಾನರ್ ವಶಪಡಿಸಿಕೊಂಡಿವೆ.

“ಪ್ರಸ್ತುತ ನಡೆಯುತ್ತಿರುವ ರೈತರ ಆಂದೋಲನವು ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರ ಆಂದೋಲನವಲ್ಲ. ಅದು ವಾಸ್ತವವಾಗಿ ಮೋದಿ ಸರ್ಕಾರದ ರೈತ ವಿರೋಧಿ ನೀತಿಗಳಿಂದ ಈಗಾಗಲೇ ನಾಶವಾಗಿರುವ ಅಥವಾ ನಾಶವಾಗುವ ಅಂಚಿನಲ್ಲಿರುವ ದೇಶದ ಪ್ರತಿಯೊಬ್ಬ ರೈತರ ಚಳವಳಿಯಾಗಿದೆ” ಎಂದು ನಿಷೇಧಿತ ಸಿಪಿಐ (ಮಾವೋವಾದಿ) ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಿಶೇಷ ವಲಯ ಸಮಿತಿಯ ಹೆಸರಿನಲ್ಲಿ ಹೊರಡಿಸಲಾದ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ಹೇಳಿವೆ.

“ನಾವು ಮೂರು ರಾಜ್ಯಗಳ (ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ) ಮಿತ್ರ ಸಂಘಟನೆಗಳು, ಪರಿಸರವಾದಿಗಳು ಮತ್ತು ಬುದ್ಧಿಜೀವಿಗಳು ಮಾತ್ರವಲ್ಲದೆ ಜನರು, ರೈತರು ಮತ್ತು ಕಾರ್ಮಿಕರಿಗೆ ಎಲ್ಲಾ ರೀತಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ಬೆಂಬಲಿಸಲು ಮನವಿ ಮಾಡುತ್ತೇವೆ. ನಗರಗಳು ಮತ್ತು ಪಟ್ಟಣಗಳಲ್ಲಿ ಪ್ರತಿಭಟನೆ, ರಸ್ತೆ ತಡೆ, ಉಪವಾಸ ಸತ್ಯಾಗ್ರಹಗಳನ್ನು ನಡೆಸಲು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿ ಪ್ರಚಾರ ಮಾಡಲು ಎಲ್ಲರಿಗೂ ಮನವಿ ಮಾಡುತ್ತೇವೆ. ಸಾಧ್ಯವಾದರೆ, ‘ಶಂಭು ಮತ್ತು ಕನೌರಿ ಗಡಿ ಚಲೋ’ ಎಂಬ ಘೋಷಣೆಯೊಂದಿಗೆ ದೆಹಲಿ ಮತ್ತು ಪಂಜಾಬ್‌ಗೆ ಮೆರವಣಿಗೆ ನಡೆಸಿ” ಎಂಬುವುದಾಗಿ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ವಿವರಿಸಿವೆ.

ಬಾಲಘಾಟ್ ಜಿಲ್ಲೆಯ ಮಾವೋವಾದಿಗಳ ಪೀಡಿತ ರೂಪಜಾರ್ ಅರಣ್ಯ ಪ್ರದೇಶದ ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯ ಸೈನ್ ಬೋರ್ಡ್‌ನಲ್ಲಿ ಹಾಕಿರುವ ಕೆಂಪು ಬ್ಯಾನರ್‌ನಲ್ಲಿಯೂ ಕರಪತ್ರದಲ್ಲಿರುವ ವಿಷಯವನ್ನೇ ಬರೆಯಲಾಗಿದೆ.

ಬಾಲಾಘಾಟ್ ಜಿಲ್ಲೆಯ ಲಾಂಜಿ ಕಾಡಿನಲ್ಲಿ 10-12 ಮಾವೋವಾದಿಗಳ ಗುಂಪು ಮತ್ತು ರಾಜ್ಯ ಪೊಲೀಸರ ಮಾವೋವಾದಿ ವಿರೋಧಿ ಕಾರ್ಯಾಚರಣೆ ಪಡೆಗಳ ನಡುವೆ ಮುಖಾಮುಖಿ ಏರ್ಪಟ್ಟ ಕೆಲ ದಿನಗಳ ಬಳಿಕ ಕರಪತ್ರ, ಬ್ಯಾನರ್ ಪತ್ತೆಯಾಗಿದೆ. ಮುಖಾಮುಖಿ ಏರ್ಪಟ್ಟ ಸ್ಥಳದ ಸುಮಾರು 50 ಕಿಮೀ ದೂರದ ಛತ್ತೀಸ್‌ಗಢ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಕರಪತ್ರ, ಬ್ಯಾನರ್ ಕಂಡು ಬಂದಿವೆ.

ಕಾಡಿನಲ್ಲಿ ಕರಪತ್ರಗಳು ಮತ್ತು ಬ್ಯಾನರ್‌ ಪತ್ತೆಯಾಗಿರುವುದನ್ನು ದೃಢಪಡಿಸಿರುವ ಬಾಲಾಘಾಟ್ ವಲಯದ ಪೊಲೀಸ್ ಮಹಾನಿರೀಕ್ಷಕ ಸಂಜಯ್ ಕುಮಾರ್, “ಇಡೀ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಮತ್ತು ವಿವರವಾದ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಪೂರ್ವ ಮಧ್ಯಪ್ರದೇಶದ ಮಾವೋವಾದಿ ಪೀಡಿತ ಅರಣ್ಯ ಪ್ರದೇಶಗಳಲ್ಲಿ ಇಂತಹ ಕರಪತ್ರಗಳು ಪತ್ತೆಯಾಗಿರುವುದು ಇದೇ ಮೊದಲಲ್ಲ. ಏಪ್ರಿಲ್ 2021ರಲ್ಲೂ ರಾಷ್ಟ್ರೀಯ ರೈತರ ಚಳವಳಿಯನ್ನು ಬೆಂಬಲಿಸಿದ ಕರಪತ್ರ ಪತ್ತೆಯಾಗಿತ್ತು. ಡಿಸೆಂಬರ್ 2016ರಲ್ಲಿ, ಮೋದಿ ನೇತೃತ್ವದ ಆಡಳಿತದ ನೋಟು ಅಮಾನ್ಯೀಕರಣ ಕ್ರಮದ ವಿರುದ್ಧ ಕರಪತ್ರಗಳನ್ನು ಬಿಡುಗಡೆ ಮಾಡಿದ್ದರು.

ವರದಿ ಕೃಪೆ : newindianexpress.com

ಚಿಕ್ಕಮಗಳೂರು : ಮುಖ್ಯವಾಹಿನಿಗೆ ಇಂದು ಆರು ನಕ್ಸಲರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...