Homeಮುಖಪುಟಛತ್ತೀಸ್‌ಗಢದಲ್ಲಿ ಮಾವೋವಾದಿಗಳ ಅಟ್ಟಹಾಸ: ಬಾಂಬ್ ಸ್ಪೋಟಕ್ಕೆ 10 ಪೊಲೀಸರು ಬಲಿ

ಛತ್ತೀಸ್‌ಗಢದಲ್ಲಿ ಮಾವೋವಾದಿಗಳ ಅಟ್ಟಹಾಸ: ಬಾಂಬ್ ಸ್ಪೋಟಕ್ಕೆ 10 ಪೊಲೀಸರು ಬಲಿ

- Advertisement -
- Advertisement -

ಛತ್ತೀಸ್‌ಗಢದಲ್ಲಿ ನಕ್ಸಲರು ಮತ್ತೆ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಅವರ ಈ ದಾಳಿಯಲ್ಲಿ 10 ಪೊಲೀಸರು ಜೀವ ಕಳೆದುಕೊಂಡಿದ್ದಾರೆ. ಸುಧಾರಿತ ಸ್ಪೋಟಕ ಬಳಕೆ ಮಾಡಿಕೊಂಡು ಮಿನಿ ವ್ಯಾನ್‌ನಲ್ಲಿ ಸಂಚಾರ ನಡೆಸುತ್ತಿದ್ದ ಪೊಲೀಸರನ್ನು ಗುರಿಯಾಗಿಸಿಕೊಂಡು ಮಾವೋವಾದಿಗಳು ಈ ದಾಳಿ ನಡೆಸಿದ್ದಾರೆ.

ಛತ್ತೀಸ್‌ಗಢದ ದಾಂತೇವಾಡದಲ್ಲಿ ಬುಧವಾರ ಮಧ್ಯಾಹ್ನ ಮಾವೋವಾದಿಗಳು ಈ ಘಟನೆ ನಡೆದಿದೆ. ಚಾಲಕ ಸೇರಿದಂತೆ ಒಟ್ಟು 10 ಪೊಲೀಸ್ ಸಿಬ್ಬಂದಿ ಈ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರು ವಾಪಸ್ ಆಗುವಾಗ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಛತ್ತೀಸ್​ಗಢದ ರಾಜ್ಯ ಗುಪ್ತಚರ ಇಲಾಖೆ ಮಾಹಿತಿಯನ್ನು ಆಧರಿಸಿ ಪೊಲೀಸರು ಆ್ಯಂಟಿ ಮಾವೋಈಸ್ಟ್​ ಕಾರ್ಯಾಚರಣೆಯನ್ನು ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮೃತ ಪೊಲೀಸ್​ ಅಧಿಕಾರಿಗಳು ಜಿಲ್ಲಾ ಸಶಸ್ತ್ರ ಮೀಸಲು ಪಡೆ(DRG)ಗೆ ಸೇರಿದ್ದವರು ಎಂದು ತಿಳಿದು ಬಂದಿದೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಛತ್ತೀಸ್‌ಗಢದ ಮುಖ್ಯಮಂತ್ರಿಗಳು, ತಕ್ಷಣದ ನಕ್ಸಲರ ವಿರುದ್ಧ ಕಾರ್ಯಾಚರಣೆ ಆರಂಭಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಘಟನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿವರಣೆ ನೀಡಿದ್ದಾರೆ.

”ದಾಂತೇವಾಡದಲ್ಲಿ ಮಾವೋವಾದಿಗಳು ಅಡಗಿದ್ದಾರೆ ಎಂಬ ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಅವರ ವಿರುದ್ಧ ಕಾರ್ಯಾಚರಣೆ ನಡೆಸಲು ಪೊಲೀಸರು ತೆರಳಿದ್ದರು. ಅಲ್ಲಿಂದ ವಾಹನದಲ್ಲಿ ವಾಪಸ್ ಆಗುವಾಗ ಸುಧಾರಿತ ಸ್ಫೋಟಕಗಳನ್ನು ಬಳಸಿ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ” ಎಂದು ತಿಳಿಸಿದ್ದಾರೆ.

”ನಕ್ಸಲರು ಪೊಲೀಸ್ ವಾಹನವನ್ನು ಸ್ಫೋಟಗೊಳಿಸಿದ ಘಟನೆ ಅರನ್‌ಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹುತಾತ್ಮ ಪೊಲೀಸರು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಗೆ ಸೇರಿದವರು. ಈ ಘಟನೆ ರಾಜಧಾನಿ ರಾಯ್‌ಪುರ್‌ನಿಂದ ಸುಮಾರು 450 ಕಿ. ಮೀ. ದೂರದಲ್ಲಿ ನಡೆದಿದೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಈ ಘಟನೆ ಬಗ್ಗೆ ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಅಮಿತ್ ಶಾ, ನಕ್ಸಲರ ವಿರುದ್ಧದ ಕಾರ್ಯಾಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ.

ಭೂಪೇಶ್ ಬಘೇಲ್ ಘಟನೆ ಕುರಿತು ಟ್ವೀಟ್ ಮಾಡಿದ್ದು, ”ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಪೊಲೀಸರ ವಾಹನವದ ಮೇಲೆ ಸುಧಾರಿತ ಸ್ಫೋಟಕಗಳನ್ನು ಬಳಸಿಕೊಂಡು ದಾಳಿ ನಡೆಸಲಾಗಿದೆ. ಇದು ಅತ್ಯಂತ ದುಃಖಕರ ಸುದ್ದಿಯಾಗಿದ್ದು ಮೃತರ ಕುಟುಂಬಸ್ಥರ ನೋವಿನಲ್ಲಿ ನಾವು ಭಾಗಿಯಾಗುತ್ತೇವೆ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಮುಖ್ಯಮಂತ್ರಿ ಭೂಪೇಶ್​ ಭಘೇಲ್​ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ”ದಾಂತೇವಾಡದಲ್ಲಿ ಛತ್ತೀಸ್‌ಗಢ ಪೊಲೀಸರ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ದಾಳಿಯಲ್ಲಿ ನಾವು ಕಳೆದುಕೊಂಡ ವೀರ ಯೋಧರಿಗೆ ನನ್ನ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರ ತ್ಯಾಗ ಸದಾ ಸ್ಮರಣೀಯ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು” ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದು,  ಘಟನೆ ಕುರಿತು ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್‌ಬಾಗಲ್ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ನಕ್ಸಲಿಸಂ ಕೊನೆಗಾಣಿಸಲು ಕಾಂಗ್ರೆಸ್ ಸರಕಾರಗಳು ಸದಾ ಕ್ರಮಗಳನ್ನು ಕೈಗೊಂಡಿವೆ. ನಮ್ಮ ನಾಯಕರು ನಕ್ಸಲ್‌ರನ್ನು ನಿಗ್ರಹಿಸಲು ಶ್ರಮವಹಿಸಿದ್ದಾರೆ. ನಕ್ಸಲಿಸಂ ವಿರುದ್ಧ ನಾವು ಒಗ್ಗಟ್ಟಾಗಿದ್ದೇವೆ ಮತ್ತು ಅದರ ವಿರುದ್ಧ ಹೋರಾಟ ಮುಂದುವರಿಸುತ್ತೇವೆ” ಎಂದಿದ್ದಾರೆ.

”ಛತ್ತೀಸ್‌ಗಢದ ದಾಂತೇವಾಡದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಹೇಡಿಗಳ ದಾಳಿಯಲ್ಲಿ ನಮ್ಮ 10 ಡಿಆರ್‌ಜಿ ಜವಾನರು ಮತ್ತು ಚಾಲಕ ಹುತಾತ್ಮರಾಗಿರುವುದು ತೀವ್ರ ದುಃಖ ತಂದಿದೆ. ಆ ಧೀರರಿಗೆ ನಮನಗಳು. ನಾವು ದುಃಖತಪ್ತ ಕುಟುಂಬಗಳೊಂದಿಗೆ ಇದ್ದೇವೆ. ಛತ್ತೀಸ್‌ಗಢದಲ್ಲಿ ನಕ್ಸಲಿಸಂ ವಿರುದ್ಧದ ಹೋರಾಟ ಕೊನೆಯ ಹಂತದಲ್ಲಿದೆ, ಅದರಲ್ಲಿ ನಮ್ಮ ಸರ್ಕಾರ ಗೆಲ್ಲಲಿದೆ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

ಈ ಮಾವೋವಾದಿಗಳು ದೇಶದ ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಛತ್ತೀಸ್‌ಗಢದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಈ ಹಿಂದೆ ಹಲವು ಬಾರಿ ಪೊಲೀಸರ ಜೊತೆ ಗುಂಡಿನ ಚಕಮಕಿ ನಡೆಸಿದ್ದಾರೆ. ಈ ಬಾರಿ ಪೊಲೀಸ್​ ವಾಹನದ ಮೇಲೆಯೇ ಮಾವೋವಾದಿಗಳು ಬಾಂಬ್​ ದಾಳಿ ನಡೆಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...