Homeಕರ್ನಾಟಕಮರಕುಂಬಿ ದಲಿತ ದೌರ್ಜನ್ಯ ಪ್ರಕರಣ | 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ | 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

- Advertisement -
- Advertisement -

ಕೊಪ್ಪಳ ಜಿಲ್ಲೆಯ ಗಂಗಾವತಿಯ ಮರಕುಂಬಿ ಗ್ರಾಮದ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಲಯ ಅಪರಾಧಿಗಳಿಗೆ ಗುರುವಾರ ಶಿಕ್ಷೆ ಘೋಷಿಸಿದೆ. ಪ್ರಕರಣದಲ್ಲಿ 101 ಜನರನ್ನು ಅಪರಾಧಿಗಳು ಎಂದು ನ್ಯಾಯಾಲಯ ಹೇಳಿದ್ದು, ಅದರಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಉಳಿದ ಮೂವರಿಗೆ ಐದು ವರ್ಷ ಜೈಲು ಶಿಕ್ಷೆಯನ್ನು ನ್ಯಾಯಾಲಯ ಘೋಷಿಸಿದೆ. ಮರಕುಂಬಿ ದಲಿತ ದೌರ್ಜನ್ಯ

ಮರಕುಂಬಿ ಗ್ರಾಮದಲ್ಲಿ ಸುಮಾರು 9 ವರ್ಷಗಳ ಹಿಂದೆ ನಡೆದ ಅಸ್ಪೃಶ್ಯತೆ ಆಚರಣೆ ಮತ್ತು ದಲಿತರ ಓಣಿಗೆ ನುಗ್ಗಿ ಗುಡಿಸಲುಗಳಿಗೆ ಬೆಂಕಿ ಹಚ್ಚಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 101 ಮಂದಿಯ ವಿರುದ್ದದ ಆರೋಪ ಸಾಬೀತಾಗಿದೆ ಎಂದು ಸೋಮವಾರ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸುವುದಾಗಿ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ. ಚಂದ್ರಶೇಖರ ಅವರು 101 ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿರುವುದಾಗಿ ಸೋಮವಾರ ತೀರ್ಪು ನೀಡಿದ್ದರು.

ಮರುಕುಂಬಿಯ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದ ಈ ಘಟನೆಯಿಂದ 2014ರಲ್ಲಿ ರಾಜ್ಯವೆ ಬೆಚ್ಚಿಬಿದ್ದಿತ್ತು. ಗ್ರಾಮದ ಹೋಟೆಲ್‌ಗಳು ಮತ್ತು ಕ್ಷೌರಿಕ ಅಂಗಡಿಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಿದ್ದಕ್ಕೆ ಸಂತ್ರಸ್ತರು ಮತ್ತು ಆರೋಪಿಗಳ ನಡುವೆ ಘರ್ಷಣೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಮರುಕುಂಬಿಗೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದರು.  ಮರಕುಂಬಿ ದಲಿತ ದೌರ್ಜನ್ಯ

ಇದೇ ಸಿಟ್ಟಿನಿಂದ ಸರ್ವಣೀಯರು ರಾತ್ರಿ ಸಮಯದಲ್ಲಿ ದಲಿತರ ಕೇರಿಗೆ ನುಗ್ಗಿ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದಲ್ಲದೆ, ದಲಿತರ ಮೇಲೆ ಹಲ್ಲೆ ನಡೆಸಿದ್ದರು. ಈ ವಿಚಾರ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ಘಟನೆಯನ್ನು ವಿರೋಧಿಸಿ ಎಡ ಪಕ್ಷಗಳು ಸೇರಿದಂತೆ ಹಲವು ದಲಿತ ಮುಖಂಡರು ಕೊಪ್ಪಳ ಜಿಲ್ಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದರು. ಆರಂಭದಲ್ಲಿ 117 ಮಂದಿಯ  ವಿರುದ್ಧ ಪ್ರಕರಣದ ದಾಖಲಿಸಲಾಗಿತ್ತು. ಆದರೆ ಅವರಲ್ಲಿ ಕೆಲವರು ಸಾವನ್ನಪ್ಪಿದ್ದರೆ, ಸೋಮವಾರ ನ್ಯಾಯಾಲಯ ತೀರ್ಪು ಪ್ರಕಟಿಸಿದಾಗ 100 ಆರೋಪಿಗಳನ್ನು ಬಂಧಿಸಲಾಗಿದೆ.

ಓರ್ವ ಆರೋಪಿ ಇನ್ನೂ ನಾಪತ್ತೆಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. 101 ಮಂದಿಗೆ ಏಕಕಾಲದಲ್ಲಿ ಶಿಕ್ಷೆ ವಿಧಿಸುತ್ತಿರುವುದು ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲಾಗಿದೆ.

ಈ ಘಟನೆಯ ನಂತರ ಮೂರು ತಿಂಗಳ ಕಾಲ ಮರುಕುಂಬಿ ಗ್ರಾಮದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ದೌರ್ಜನ್ಯವನ್ನು ವಿರೋಧಿಸುವಲ್ಲಿ ನಾಯಕತ್ವ ವಹಿಸಿದ್ದ ದಲಿತ ಮುಖಂಡ ವೀರೇಶ ಮರುಕುಂಬಿ 2014ರಲ್ಲಿ ಕೊಪ್ಪಳ ರೈಲು ನಿಲ್ದಾಣದ ಬಳಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಇದನ್ನೂ ಓದಿ: ದಲಿತ ವಿರುದ್ಧ ನಡೆಯುವ ದೌರ್ಜನ್ಯಗಳಿಗಾಗಿ ನಾನುಗೌರಿ.ಕಾಂ ನ ದಲಿತ್ ಫೈಲ್ಸ್ ವಿಭಾಗದಲ್ಲಿ ಓದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...