ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ಯಡಿಯೂರಪ್ಪನವರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಕರ್ನಾಟಕದಲ್ಲಿನ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಕನ್ನಡಪರ ಹೋರಾಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ.
“ಕನ್ನಡಿಗರಿಗೆ ಅಗತ್ಯವಿರುವ ಎಲ್ಲವನ್ನು ಮಾಡಲು ಸರ್ಕಾರ ಸಿದ್ಧವಾಗಿದೆ. ಆದರೆ ಸರ್ಕಾರದ ನಿರ್ಧಾರಕ್ಕೆ ವಿರುದ್ಧವಾಗಿ ಬಂದ್‌ಗೆ ಕರೆ ನೀಡಿರುವುದ ಸರಿಯಲ್ಲ. ಸಂಘಟನೆಗಳು ಬಲವಂತವಾಗಿ ಬಂದ್ ಜಾರಿಗೊಳಿಸಲು ಮುಂದಾದರೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವರು ಶಾಂತಿಯುತವಾಗಿ ಪ್ರತಿಭಟಿಸಬಹುದು. ಆದರೆ ಸರ್ಕಾರವು ಬಲವಂತದ ಬಂದ್ ಅನ್ನು ನಾವು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಇದನ್ನೂ ಓದಿ: ತುಮಕೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರುದ್ಧ ಕರವೇ ಕಾರ್ಯಕರ್ತರ ಪ್ರತಿಭಟನೆ
ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಲು ನೀಡಿರುವ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ರಾಜ್ಯದ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5 ರಂದು ಬಂದ್‌ಗೆ ಕರೆ ನೀಡಿವೆ.
ಕಾಂಗ್ರೆಸ್ ಪಕ್ಷವೂ ಕೂಡ ಸರ್ಕಾರದ ಈ ಕ್ರಮವನ್ನು ಖಂಡಿಸಿ, ಗಡಿ ಪ್ರದೇಶಗಳಲ್ಲಿ ಕನ್ನಡಿಗರು ಮತ್ತು ಮರಾಠ ಸಮುದಾಯದವರ ನಡುವೆ ಉದ್ವಿಗ್ನತೆಯನ್ನು ಉಂಟುಮಾಡಿದೆ ಎಂದು ಆರೋಪಿಸಿದೆ.
ಅದಾಗ್ಯೂ, ರಾಜ್ಯದ ಮರಾಠಾ ಸಮುದಾಯದ ಜನರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸಲಾಗಿದೆ ಎಂದು, ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಆದೇಶವನ್ನು ಹಿಂತೆಗೆದುಕೊಳ್ಳುವ ಯಾವುದೇ ಸಾಧ್ಯತೆಯನ್ನು ತಳ್ಳಿಹಾಕಿದೆ.
ಇದನ್ನೂ ಓದಿ: ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!
ಶಾಸಕ ಯತ್ನಾಳ್ ರಾಜ್ಯ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿದ್ದಾರೆ;
ಕರ್ನಾಟಕ ಬಂದ್ ಕುರಿತು ಪ್ರತಿಕ್ರಿಯಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕನ್ನಡ ಪರ ಕಾರ್ಯಕರ್ತರನ್ನು ನಕಲಿ ಎಂದು ಕರೆದಿದ್ದಾರೆ. ಜೊತೆಗೆ ಮುಖ್ಯಮಂತ್ರಿಗಳು ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳಬಾರದು ಎಂದು ಒತ್ತಾಯಿಸಿದ್ದಾರೆ.
“ಛತ್ರಪತಿ ಶಿವಾಜಿ ಮಹಾರಾಜರ ಪ್ರಯತ್ನದಿಂದಾಗಿ ನಮ್ಮ ದೇಶದಲ್ಲಿ ಹಿಂದೂ ಧರ್ಮ ಇನ್ನೂ ಅಸ್ತಿತ್ವದಲ್ಲಿದೆ. ಸರ್ಕಾರವು ಸರಿಯಾದ ನಿರ್ಧಾರವನ್ನು ತೆಗೆದುಕೊಂಡಿದೆ. ಅದು ಈ ಸಮಯದ ಅಗತ್ಯವಾಗಿತ್ತು” ಎಂದು ಅವರು ಹೇಳಿದರು.
ಇದನ್ನೂ ಓದಿ: ‘ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ’- ಯಡಿಯೂರಪ್ಪ ಹೇಳಿಕೆಗೆ ನೆಟ್ಟಿಗರ ಆಕ್ರೋಶ!



ಮನುವಾದಿಗಳು ಮತಗಳಿಸಲು ಕನ್ನಡಿಗರ ಹಿತಾಸಕ್ತಿಯನ್ನೇ ಕಡೆಗಣಿಸುತ್ತಾರೆ.