Homeಕರ್ನಾಟಕಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪಾದಯಾತ್ರೆ; ಸಿದ್ದರಾಮನಹುಂಡಿಯಲ್ಲಿ ಹೋರಾಟಗಾರರ ಬಂಧನ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪಾದಯಾತ್ರೆ; ಸಿದ್ದರಾಮನಹುಂಡಿಯಲ್ಲಿ ಹೋರಾಟಗಾರರ ಬಂಧನ

- Advertisement -
- Advertisement -

ಪರಿಶಿಷ್ಟ ಜಾತಿ (ಎಸ್‌ಸಿ) ಸಮಗ್ರ ಒಳಮೀಸಲಾತಿ ಜಾರಿಗೆ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆಗ್ರಹಿಸಿ, ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ’ಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಗ್ರಾಮವಾದ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಪೊಲೀಸರು ಹತ್ತಿಕ್ಕಿದ್ದಾರೆ. ಇಂದು ಬೆಳಗ್ಗೆ ಆರಂಭವಾದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನು ಬಂಧಿಸಿದ್ದಾರೆ.

ಈ ಕುರಿತು ಮಾತನಾಡಿದ ಒಳಮೀಸಲಾತಿ ಹಿರಿಯ ಹೋರಾಟಗಾರ ಎಸ್‌.ಮಾರೆಪ್ಪ, “ದುರುದ್ದೇಶದಿಂದ ಪೊಲೀಸರು ಪಾದಯಾತ್ರೆಗೆ ಅನುಮತಿ ನಿರಾಕರಿಸಿ ಈಗ ನಮ್ಮನ್ನು ಬಂಧಿಸಿದ್ದಾರೆ. ನಮ್ಮ ಸಮುದಾಯದ ಜನರ ಸಮಸ್ಯೆ ಕುರಿತು ಚರ್ಚಿಸಲು ನಮ್ಮದೇ ಸಮುದಾಯದ ನಾಯಕರ ಬಳಿಗೆ ಹೋಗುತ್ತಿರುವಾಗ ಬಂಧಿಸಿರುವುದು ಮೊದಲು. ಈಗ ನಾವು ಯಾರನ್ನು ಕೇಳಬೇಕು? ಈ ರೀತಿ ನಡೆದಿರುವುದು ಕರ್ನಾಟಕದ ಚರಿತ್ರಿಯಲ್ಲೇ ಮೊದಲು. ಸಿದ್ದರಾಮಯ್ಯ ಅವರ ಸರ್ಕಾರ ಹೀಗೆಲ್ಲಾ ಮಾಡುತ್ತಿರುವುದು ಸರಿಯಲ್ಲ” ಎಂದು ಆಕ್ರೋಶ ಹೊರಹಾಕಿದರು.

“ಒಳಮೀಸಲಾತಿ ಪ್ರಕ್ರಿಯೆ ಜಾರಿಗೆ ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ. ಅವರ ಈ ವಿಳಂಬ ಧೋರಣೆಗೆ ಪೂರಕವಾಗಿ ಪೊಲೀಸರು ಕೂಡ ಕೆಲಸ ಮಾಡುತ್ತಿದ್ದು, ನಮ್ಮನ್ನು ಬಂಧಿಸಿರುವುದನ್ನು ಖಂಡಿಸುತ್ತೇವೆ. ವಿವಿಧ ಜಿಲ್ಲೆಗಳಿಂದ ಬಂದಿರುವ ಒಳಮೀಸಲಾತಿ ಹೋರಾಟಗಾರರು ಸಿದ್ದರಾಮನಹುಂಡಿಗೆ ನೇರವಾಗಿ ತೆರಳಿ ಪಾದಯಾತ್ರೆ ಆರಂಭಿಸಬೇಕು. ರಾಜ್ಯದ ಜನರು, ಸರ್ಕಾರ ಮತ್ತು ಪೊಲೀಸರ ಈ ನಡೆಯನ್ನು ಖಂಡಿಸಬೇಕು” ಎಂದು ಒಳಮೀಸಲಾತಿ ಹೋರಾಟಗಾರ ಶಿವರಾಜ್ ಅಕ್ಕರಕಿ ಹೇಳಿದರು.

“ಮಾನ್ಯ ಮುಖ್ಯಮಂತ್ರಿಗಳೆ.. ಸಚಿವರಾದ ಎಚ್‌.ಸಿ. ಮಹದೇವಪ್ಪ ಅವರೇ.. ನಿಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದವರು ನಾವು; ಕೋಮುವಾದಿಗಳನ್ನು ಸೋಲಿಸಿದ್ದು ನಾವು. ರಾಜ್ಯದಲ್ಲಿ ಶಾಂತಿ-ನೆಮ್ಮದಿ ಇರಬೇಕು ಎಂದು ಬಯಸಿದವರು. ನ್ಯಾಯಯುತವಾಗಿ ನಡೆಯುತ್ತಿರುವ ನಮ್ಮ ಹೋರಾಟವನ್ನು ಹತ್ತಿಕ್ಕಿ, ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ಸಮಾಜ ಕಲ್ಯಾಣ ಇಲಾಖೆಯಲ್ಲಿರುವ ಇಡೀ ಆಡಳಿತ ಯಂತ್ರದಲ್ಲಿ ಮೀಸಲಾತಿ ಉದ್ದೇಶವನ್ನೇ ಬುಡಮೇಲು ಮಾಡುವ ಯತ್ನ ನಡೆಯುತ್ತಿದೆ. ನಮ್ಮ ಹೋರಾಟ ಸರ್ಕಾರ ಅಥವಾ ಸಿದ್ದರಾಮಯ್ಯನವರ ವಿರುದ್ಧ ಅಲ್ಲ. ಏಕೆಂದರೆ, ಕೋಮುವಾದಿಗಳು ಅಧಿಕಾರಕ್ಕೆ ಬರಬಾರದು ಎಂದು ಬಯಸಿದವರು ನಾವು. ನಮ್ಮದು ಶಾಂತಿಯುತ ಪಾದಯಾತ್ರೆ. ಆದರೆ, ನಮ್ಮನ್ನು ಪೊಲೀಸರು ಬಂಧಿಸಿ ಕರೆದೊಯ್ಯತ್ತಿದ್ದಾರೆ. ಬೇಕಿದ್ದರೆ ನಮ್ಮನ್ನು ಬಂಧಿಸಿ ಜೈಲಿನಲ್ಲಿಡಿ ಅದಕ್ಕಾಗಿ ನಾವು ತಯಾರಿದ್ದೇವೆ. ಆದರೆ ಒಳಮೀಸಲಾತಿ ವಿಚಾರದಲ್ಲಿ ನಮ್ಮ ಸಮುದಾಯಕ್ಕೆ ನ್ಯಾಯ ಸಿಗಬೇಕು” ಎಂದು ಹಿರಿಯ ಹೋರಾಟಗಾರ ಕರಿಯಪ್ಪ ಗುಡಿಮನಿ ಬೇಸರ ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...