Homeಕರ್ನಾಟಕಕೆ.ಆರ್.ಪೇಟೆ ಚಲೋ: ‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

ಕೆ.ಆರ್.ಪೇಟೆ ಚಲೋ: ‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

- Advertisement -
- Advertisement -

“ಜಯಕುಮಾರ್ ಉಸಿರು ನಿಂತಿದೆ, ಮಣ್ಣಲ್ಲಿ ಮಣ್ಣಾಗಿರುವ ದಲಿತ ಆತ್ಮಗಳು ನೀವು ಏನು ಮಾಡುತ್ತಿದ್ದೀರಿ ಎಂದು ನಮ್ಮನ್ನು ಪ್ರಶ್ನೆ ಮಾಡುತ್ತಿವೆ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದರು.

ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ಮೇ 17ರಂದು ನಡೆದಿರುವ ದಲಿತ ಯುವಕ ಜಯಕುಮಾರ್‌ ಅವರ ಆಪಾದಿತ ಕೊಲೆ ಖಂಡಿಸಿ ಮಂಗಳವಾರ ಆಯೋಜಿಸಿದ್ದ ‘ಕೆ.ಆರ್ ಪೇಟೆ ಚಲೋ’ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಕಂಬಾಲಪಲ್ಲಿಯಲ್ಲಿ 7 ಜನ ದಲಿತರು ಸುಟ್ಟು ಕರಕಲಾಗಿದ್ದರು. ಅವರ ಶವಗಳನ್ನು ಬಿಳಿ ಬಟ್ಟೆ ಸುತ್ತಿ ಇಟ್ಟಿದ್ದರು. ಜಯಕುಮಾರ್ ಅವರ ಶವವನ್ನೂ ಕೂಡ ಹೀಗೆ ಸುತ್ತಿ ಇಟ್ಟಿದ್ದರು. ಇದು ಹೊಸತಲ್ಲ, ಇಂತಹ ಹತ್ಯೆಗಳು ಸಹಜ ಎಂಬಂತೆ ನಡೆಯುತ್ತಲೇ ಇವೆ. ದಲಿತ ಚಳವಳಿ ಗಟ್ಟಿಯಾಗಿದ್ದರೆ ಇಂತವರಿಗೆ ಭಯ ಇರುತ್ತದೆ. ನಾವು ಜೀವಂತವಾಗಿ ಇರಬೇಕಾಗಿರುವುದೇ ನಮಗೆ ಶಕ್ತಿಯಾಗುತ್ತದೆ” ಎಂದರು.

ಸರ್ಕಾರಗಳು ಬದಲಾದರೂ ವ್ಯವಸ್ಥೆ ಬದಲಾಗಿಲ್ಲ. ದಲಿತರ ಮೇಲಿನ ಅತ್ಯಾಚಾರ, ಕೊಲೆಗಳು ನಡೆಯುತ್ತಲೇ ಇವೆ. ಅನೇಕ ದಲಿತ ಹತ್ಯಾಕಾಂಡಗಳು ಸಾಕ್ಷಿಗಳು ಇಲ್ಲದೆ ಮುಕ್ತಾಯಗೊಂಡಿದೆ. ಕಂಬಾಲಪಲ್ಲಿ ಪ್ರಕರಣ ಇಂದಿಗೂ ನ್ಯಾಯಾಲಯದಲ್ಲಿ ಬಾಕಿ ಇದೆ. ನ್ಯಾಯಾಂಗಕ್ಕೂ ಇಂದು ಕಣ್ಣು, ಕಿವಿ ಇಲ್ಲದಂತಾಗಿದೆ. ಸಾಕ್ಷಿಯೇ ಇಲ್ಲದ ಮೇಲೆ ಜೀವಂತವಾಗಿ ಸತ್ತವರು ಯಾರು? ಈ ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು. ಆದರೆ, ಅವರಿಗೇ ಈಗ ಸರ್ಕಾರದಿಂದ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿಗಳ ಕ್ಷೇತ್ರದಲ್ಲೇ ದಲಿತ ಯುವಕನ ಕೈ ಕತ್ತರಿಸಲಾಗಿದೆ. ಅಲೆಮಾರಿ ಬಾಲಕಿಯ ಕೊಲೆ ಆಗಿದೆ. ಇಷ್ಟೊಂದು ದಲಿತ ಹತ್ಯಾಕಾಂಡ ಆಗುತ್ತಿದ್ದರೂ, ಮೋದಿ ಸುಮ್ಮನಿದ್ದಾರೆ. ಪೊಲೀಸ್ ಇಲಾಖೆಯಾದರೂ ಗಂಭೀರವಾಗಿ ಚಿಂತಿಸಬೇಕು. ಆದರೆ, ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಕೂಡ ಮನುಷ್ಯತ್ವ ಕಳೆದುಕೊಂಡಿರುವುದು ದುರಾದೃಷ್ಟ. ಜಯಕುಮಾರ್ ಕೊಲೆ ಕೂಡಾ ಈ ದುಷ್ಠ ಕೂಟದ ಷಡ್ಯಂತ್ರಕ್ಕೆ ಬಲಿಯಾಗುವ ಸಾಧ್ಯತೆ ಇದೆ. ಹಾಗಾಗಿ, ನಾವೆಲ್ಲರೂ ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಹೇಳಿದರು.

ಜಯಕುಮಾರ್ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹಾಗೂ ಅವರ ಪತ್ನಿಗೆ ಸರ್ಕಾರಿ ಕೆಲಸ ನೀಡಬೇಕು.
ಸಮಾಜ ಕಲ್ಯಾಣ ಸಚಿವ ಮತ್ತು ಗೃಹ ಸಚಿವರು ಗ್ರಾಮಕ್ಕೆ ಆಗಮಿಸಿ ಮೃತ ಯುವಕನ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಬೇಕು. ಅಷ್ಟೇ ಅಲ್ಲ ಸುಳ್ಳು ದೂರು ಪಡೆದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಬೇಕು. ಅವರಿಂದ ನ್ಯಾಯ ಸಿಗುವುದಕ್ಕೆ ಸಾಧ್ಯವೇ ಇಲ್ಲ. ಸರ್ಕಾರ ಈ ಕೂಡಲೇ ಪ್ರಕರಣವನ್ನು ಎಸ್ಐಟಿಗೆ ವಹಿಸಬೇಕು ಎಂದು ಆಗ್ರಹಿಸಿದರು.

ಶಾಸಕರಾದ ಎಸ್‌.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಉಚ್ಛಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...