Homeಮುಖಪುಟಇಚ್ಛೆಗೆ ವಿರುದ್ಧವಾಗಿ ಮದುವೆ; ದಂಪತಿ ಜತೆಗೆ ಮಗುವನ್ನೂ ಹತ್ಯೆಗೈದ ತಂದೆ-ಸಹೋದರ

ಇಚ್ಛೆಗೆ ವಿರುದ್ಧವಾಗಿ ಮದುವೆ; ದಂಪತಿ ಜತೆಗೆ ಮಗುವನ್ನೂ ಹತ್ಯೆಗೈದ ತಂದೆ-ಸಹೋದರ

- Advertisement -
- Advertisement -

23 ವರ್ಷದ ಮಹಿಳೆ, ಆಕೆಯ ಪತಿ, ಅವರ ಪುಟ್ಟ ಮಗಳನ್ನು ಆಕೆಯ ತಂದೆ ಮತ್ತು ಸಹೋದರರೆ ಸಾರ್ವಜನಿಕವಾಗಿ ಕೊಲೆ ಮಾಡಿರುವ ಘಟನೆ ಬಿಹಾರದ ಭಾಗಲ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಕುಟುಂಬದ ವಿರೋಧವನ್ನೂ ಲೆಕ್ಕಿಸದೆ ಅವರು ಮದುವೆಯಾಗಿದ್ದರಿಂದ ಸಿಟ್ಟಿಗೆದ್ದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನೌಗಾಚಿಯಾ ಪ್ರದೇಶದ ನವ್ಟೋಲಿಯಾ ಗ್ರಾಮದಲ್ಲಿ ಮಂಗಳವಾರ ಸಂಜೆ ಮಹಿಳೆ, ಆಕೆಯ 38 ವರ್ಷದ ಪತಿ ಮತ್ತು ಅವರ ಮಗಳನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಆರೋಪಿಗಳಾದ ಮಹಿಳೆಯ ತಂದೆ ಪಪ್ಪು ಸಿಂಗ್ ಮತ್ತು ಸಹೋದರ ಧೀರಜ್ ಕುಮಾರ್ ಸಿಂಗ್ ಸದ್ಯ ಪರಾರಿಯಾಗಿದ್ದು, ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ನೌಗಾಚಿಯಾ ಪೊಲೀಸ್ ಜಿಲ್ಲಾ ಎಸ್‌ಪಿ ಸುಶಾಂತ್ ಕುಮಾರ್ ಸರೋಜ್ ತಿಳಿಸಿದ್ದಾರೆ.

15 ವರ್ಷ ದೊಡ್ಡವನಾದ ಚಂದನ್ ಜೊತೆಗೆ ಚಾಂದಿನಿ ಮದುವೆಯಾಗುವುದನ್ನು ಪಪ್ಪು ಮತ್ತು ಧೀರಜ್ ಕಟುವಾಗಿ ವಿರೋಧಿಸಿದ್ದರು ಎಂದು ಎಸ್‌ಪಿ ಹೇಳಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಆರೋಪಿಗಳು ಕಬ್ಬಿಣದ ರಾಡ್‌ನಿಂದ ಹೊಡೆದಾಗ ಚಂದನ್ ಸಹಾಯಕ್ಕಾಗಿ ಬೇಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಗುಂಡಿನ ದಾಳಿಯಿಂದ ಚಾಂದಿನಿ ಕುಮಾರಿ, ಆಕೆಯ ಪತಿ ಚಂದನ್ ಕುಮಾರ್ ಹಾಗೂ ಆಕೆಯ ಎರಡು ವರ್ಷದ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಳಸಿದ ಕಾಟ್ರಿಡ್ಜ್‌ಗಳು ಮತ್ತು ಕಬ್ಬಿಣದ ರಾಡ್ ಅನ್ನು ಅಪರಾಧ ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ. “ನಾವು ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಶೋಧಕಾರ್ಯ ಪ್ರಾರಂಭಿಸಿದ್ದೇವೆ. ಬಳಸಿದ ಕಾಟ್ರಿಡ್ಜ್‌ಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಿದ್ದಾರೆ’ ಎಂದು ಸರೋಜ್ ಹೇಳಿದರು.

ಶೀಘ್ರವೇ ಆರೋಪಿಗಳನ್ನು ಬಂಧಿಸಿ, ಹತ್ಯೆಗೆ ಬಳಸಿದ್ದ ಬಂದೂಕನ್ನು ವಶಪಡಿಸಿಕೊಳ್ಳುತ್ತೇವೆ. ಆರೋಪಿಗಳು ಎಲ್ಲಿದ್ದಾರೆ ಎಂಬ ಬಗ್ಗೆ ತಿಳಿಯಲು ತನಿಖಾಧಿಕಾರಿಗಳು ಅವರ ಕುಟುಂಬದ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದರು.

ಚಾಂದಿನಿಯ ಕುಟುಂಬಕ್ಕೆ ಆಕೆಯ ಮದುವೆಯ ಕುರಿತು ಅಸಮಾಧಾನವಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ’ ಎಂದು ಎಸ್‌ಪಿ ತಿಳಿಸಿದ್ದಾರೆ.

ಹತ್ಯೆಯ ನಂತರ ಆರೋಪಿಗಳ ಕುಟುಂಬ ಸದಸ್ಯರ ಪೋನ್ ಕರೆ ದಾಖಲೆಗಳನ್ನು ಸಹ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಮಂಗಳವಾರ ಸಂಜೆ 4.25ರ ಸುಮಾರಿಗೆ ಮೂವರು ನವ್ಟೋಲಿಯಾ ಗ್ರಾಮದಲ್ಲಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ; ಶಿಂಧೆಯನ್ನು ಪಕ್ಷದ ನಾಯಕತ್ವದಿಂದ ಕೆಳಗಿಳಿಸುವ ಅಧಿಕಾರ ಉದ್ಧವ್‌ಗೆ ಇರಲಿಲ್ಲ: ಸ್ಪೀಕರ್ ತೀರ್ಪು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...