Homeಮುಖಪುಟಮದುವೆ ಆಮಿಷವೊಡ್ಡಿ 10 ವರ್ಷಗಳಲ್ಲಿ 77 ಮಹಿಳೆಯರಿಗೆ ವಂಚಿಸಿದ ದುಷ್ಕರ್ಮಿ!

ಮದುವೆ ಆಮಿಷವೊಡ್ಡಿ 10 ವರ್ಷಗಳಲ್ಲಿ 77 ಮಹಿಳೆಯರಿಗೆ ವಂಚಿಸಿದ ದುಷ್ಕರ್ಮಿ!

- Advertisement -
- Advertisement -

ಮದುವೆ ಆಮಿಷ ನೀಡಿ 77 ಮಹಿಳೆಯರನ್ನು ಬಲೆಗೆ ಬೀಳಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ದೂಚಿ ವಂಚಿಸಿದ್ದ 43 ವರ್ಷದ ದರೋಡೆಕೋರನನ್ನು ಒರಿಸ್ಸಾ ಅಪರಾಧ ವಿಭಾಗದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಯು ಕಳೆದ 10 ವರ್ಷಗಳಲ್ಲಿ ಸುಮಾರು 7 ರಾಜ್ಯಗಳ ಮಹಿಳೆಯರ ವಿರುದ್ಧ ಈ ಕೃತ್ಯ ಎಸಗಿದ್ದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರೋಪಿಯನ್ನು ಅಂಗುಲ್‌ನ ಚೆಂಡಿಪಾಡಾ ಮೂಲದ ಬಿರಂಚಿ ನಾರಾಯಣನಾಥ್ ಎಂದು ಗುರುತಿಸಲಾಗಿದೆ. ಆತನನ್ನು ಬಂಧಿಸಿದ ಸಿಐಡಿ-ಸಿಬಿಯ ಸೈಬರ್ ಕ್ರೈಂ ಘಟಕವು ಆತನಿಂದ ವಶಪಡಿಸಿದ ಮೂರು ಮೊಬೈಲ್ ಫೋನ್‌ಗಳಿಂದ ವಾಟ್ಸಾಪ್ ಚಾಟ್‌ಗಳ ಜೊತೆಗೆ ಮಹಿಳೆಯರ 300 ಕ್ಕೂ ಹೆಚ್ಚು ನಿಕಟ ಫೋಟೋಗಳನ್ನು ಕಂಡುಕೊಂಡಿದೆ.

ಆರೋಪಿಯಿಂದ ವಂಚನೆಗೊಳಗಾದವರ ನಿಖರ ಸಂಖ್ಯೆಯನ್ನು ಸಿಬಿ ಖಚಿತಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. 2013ರಿಂದಲೂ ಈತ ಇಂತಹ ವಂಚನೆ ಮಾಡುತ್ತಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯು ಒರಿಸ್ಸಾ ಮಾತ್ರವಲ್ಲದೆ ರಾಜಸ್ಥಾನ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಮತ್ತು ನವದೆಹಲಿಯಾದ್ಯಂತ ಮಹಿಳೆಯರಿಗೆ ವಂಚನೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಒರಿಸ್ಸಾದಲ್ಲಿ, ಬೈದ್ಯನಾಥಪುರ, ಜರ್ಪದ, ಬಾಲಸೋರ್ ಸದರ್, ಛೇಂಡ್, ಧೆಂಕನಲ್ ಟೌನ್, ನಯಾಪಲ್ಲಿ, ಬಲಿಪಟ್ನಾ ಮತ್ತು ಅಂಗುಲ್ ಟೌನ್ ಪೊಲೀಸ್ ಠಾಣೆಗಳಲ್ಲಿ ಮಹಿಳೆಯರನ್ನು ಮದುವೆಯಾಗಿ ಸುಲಿಗೆ ಮಾಡಿದ್ದಕ್ಕಾಗಿ ಈತನ ವಿರುದ್ಧ ಈ ಹಿಂದೆ ಕನಿಷ್ಠ ಒಂಬತ್ತು ಪ್ರಕರಣಗಳು ದಾಖಲಾಗಿದ್ದವು ವರದಿ ಹೇಳಿವೆ.

ಇದನ್ನೂಓದಿ: “ನಾವೂ ತಲ್ವಾರ್ ಹಿಡಿಯುತ್ತೇವೆ”: ಪ್ರಚೋದನಕಾರಿ ಹೇಳಿಕೆ ಕೊಟ್ಟ ಪ್ರತಾಪ್ ಸಿಂಹ

ಆರೋಪಿಯು ಕನಿಷ್ಠ ಮೂರು ಬಾರಿ ಜೈಲಿಗೆ ಹೋಗಿ ಬಂದರೂ ತನ್ನ ವಂಚನೆಯನ್ನು ಮುಂದುವರೆಸಿದ್ದನು. ಆತನ ತಾನು ರೈಲ್ವೆ, ಆದಾಯ ತೆರಿಗೆ ಇಲಾಖೆ, ಕಸ್ಟಮ್ಸ್ ಮತ್ತು ಕೇಂದ್ರ ಅಬಕಾರಿ ಮತ್ತು ನರಶಸ್ತ್ರಚಿಕಿತ್ಸಕನ ಉದ್ಯೋಗಿ ಎಂದು ಬಿಂಬಿಸಿ ಮಹಿಳೆಯರಿಗೆ ವಂಚಿಸಿದ್ದನು. ಜೊತೆಗೆ ತಾನು ರಾಜ್ಯಶಾಸ್ತ್ರ, ಇಂಗ್ಲಿಷ್ ಹಾಗೂ ಕಾನೂನಿನಲ್ಲಿ ಎಂಎ ಪದವಿ ಪಡೆದಿರುವುದಾಗಿ ಹೇಳಿಕೊಂಡಿದ್ದಾನೆ.

ನಾಲ್ಕು ಭಾಷೆಗಳಲ್ಲಿ ಸ್ಪಷ್ಟ ಮತ್ತು ನಿರರ್ಗಳವಾಗಿ ಮಾತನಾಡುವ ಆರೋಪಿ, ದೇವಾಲಯಗಳಲ್ಲಿ ಹಲವು ಮಹಿಳೆಯರಿಗೆ ತಾಳಿ ಕಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವೈವಾಹಿಕ ಸೈಟ್‌ಗಳಲ್ಲಿ, ಆರೋಪಿ ನಾರಾಯಣನಾಥ್ ಹೆಚ್ಚಾಗಿ ಮಧ್ಯವಯಸ್ಸಿನ ಮಹಿಳೆಯರು ಪ್ರತ್ಯೇಕಗೊಂಡ ಅಥವಾ ವಿಚ್ಛೇದನ ಮತ್ತು ವಿಧವೆಯರನ್ನು ಗುರಿಯಾಗಿಸಿಕೊಂಡಿದ್ದನು. ತನ್ನ ಮೂಲ ಹೆಸರನ್ನು ಮರೆಮಾಚಿ, ಪ್ರವಾಕರ್ ಶ್ರೀವಾಸ್ತವ್ ಮತ್ತು ಮಾನಸ್ ರಾತ್ ಅವರಂತಹ ನಕಲಿ ಗುರುತುಗಳನ್ನು ಬಳಸುತ್ತಿದ್ದನು.

ಮಹಿಳೆಯರನ್ನು ಮದುವೆಯಾದ ನಂತರ ಅವರ ಮನೆಗಳಲ್ಲಿಯೇ ಇರುತ್ತಿದ್ದ ಆರೋಪಿ, ಅವರಲ್ಲಿ ಯಾರನ್ನೂ ತನ್ನ ಮನೆಗೆ ಕರೆದುಕೊಂಡು ಹೋಗಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂಓದಿ:‘ಶ್ರೀ ವಿಜಯ ಪುರಂ’ | ಅಂಡಮಾನ್ ನಿಕೋಬರ್‌ ರಾಜಧಾನಿ ‘ಪೋರ್ಟ್ ಬ್ಲೇರ್’ ಮರುನಾಮಕರಣ

2022 ರಲ್ಲಿ ರಸ್ತೆ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡು ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ವಾಸಿಸುತ್ತಿದ್ದ ಕಟಕ್‌ನ ಮಹಿಳೆಯನ್ನು ಆರೋಪಿ ಸಂಪರ್ಕಿಸಿದ್ದನು ಎಂದು ಸಿಬಿ ದಾಖಲಿಸಿದ ಪ್ರಕರಣದಲ್ಲಿ ಹೇಳಿದೆ. ಸಂತ್ರಸ್ತೆ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರವಾಕರ್ ಶ್ರೀವಾಸ್ತವ್ ಎಂಬ ನಕಲಿ ಹೆಸರಿನಲ್ಲಿದ್ದ ಆರೋಪಿಯ ಸಂಪರ್ಕಕ್ಕೆ ಬಂದಿದ್ದರು. ಆಗ ಆರೋಪಿ ತಾನು ವಿಶಾಖಪಟ್ಟಣಂನಲ್ಲಿ ರೈಲ್ವೇಯಲ್ಲಿ ಪ್ರಯಾಣ ಟಿಕೆಟ್ ಇನ್ಸ್‌ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದನು.

ವಂಚನೆಯಿಂದ ಮಹಿಳೆಯನ್ನು ಮದುವೆಯಾದ ನಂತರ, ನಾರಾಯಣನಾಥ್ ಸುಮಾರು ಐದು ತಿಂಗಳ ಕಾಲ ಮಹಿಳೆಯ ಮನೆಯಲ್ಲಿದ್ದುಕೊಂಡು ಅವರಿಗೆ ಶೋಷಣೆ ಮಾಡಿದ್ದಾನೆ ಎಂದು ಸಿಬಿ ಮೂಲಗಳು ತಿಳಿಸಿವೆ. ತನ್ನ ದುರ್ವರ್ತನೆ ವೇಳೆ ಆರೋಪಿ ಮಹಿಳೆಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ. ಆಕೆಯಿಂದ 5 ಲಕ್ಷ ರೂಪಾಯಿ ಹಾಗೂ 32 ಗ್ರಾಂ ಚಿನ್ನಾಭರಣಗಳನ್ನು ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಾರಾಯಣನಾಥ್ ತನ್ನ ಖಾಸಗಿ ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಮಹಿಳೆ ದೌರ್ಜನ್ಯವನ್ನು ಸಹಿಸಿಕೊಂಡಿದ್ದರು. ಆದರೆ, ಆರೋಪಿ ಬೇರೆ ಮಹಿಳೆಯರೊಂದಿಗೆ ಸಂಪರ್ಕದಲ್ಲಿ ಇರುವುದು ತಿಳಿದಾಗ ಮಹಿಳೆ ಸಿಬಿಗೆ ದೂರು ನೀಡಿದ್ದರು.

ವಿಡಿಯೊನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...