Homeಚಳವಳಿಕರ್ನಾಟಕದ ದಿಟ್ಟ ರೈತ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ

ಕರ್ನಾಟಕದ ದಿಟ್ಟ ರೈತ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ

ಸಿಪಿಐ(ಎಂ) ಪಕ್ಷದ ಸದಸ್ಯರಾಗಿದ್ದುಕೊಂಡು ನೂರಾರು ರೈತ ಹೋರಾಟಗಳನ್ನು ಸಂಘಟಿಸಿದ ಅನುಭವವಿದ್ದ ಮಾನ್ಪಡೆಯವರು ಸೆಪ್ಟಂಬರ್ ತಿಂಗಳಿನಿಲ್ಲಿ ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ಸಂಘಟಿಸಿದ್ದರು.

- Advertisement -
- Advertisement -

ಕರ್ನಾಟಕದ ದಿಟ್ಟ ರೈತ ಹೋರಾಟಗಾರರಾಗಿದ್ದ, ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷರಾದ ಮಾರುತಿ ಮಾನ್ಪಡೆಯವರು (65) ಇಂದು ನಿಧನರಾಗಿದ್ದಾರೆ.

ಇತ್ತೀಚಿನ ಕೇಂದ್ರದ ಕೃಷಿ ಮಸೂದೆಗಳ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಅವರು, ಅಕ್ಟೋಬರ್ 3 ರಂದು ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಕೋವಿಡ್‌ ವಿರುದ್ಧದ 15 ದಿನಗಳ ಸತತ ಹೋರಾಟದ ನಡೆಸಿದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಬಂದ್ ಮಾಡಿಯೇ ತೀರುತ್ತೇವೆ… ಮಾರುತಿ ಮಾನ್ಪಡೆ, ರಾಜ್ಯ ಉಪಾಧ್ಯಕ್ಷರು, ಕರ್ನಾಟಕ ಪ್ರಾಂತ ರೈತ ಸಂಘ.

Posted by Naanu Gauri on Friday, September 25, 2020

ಕೋವಿಡ್ ದೃಢಪಟ್ಟ ನಂತರ ಕಲಬರುಗಿಯ ಜೇಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರನ್ನು ನಂತರ ಸೊಲ್ಲಾಪುರದ ಅಶ್ವಿನಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಅವರನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು ಎನ್ನಲಾಗಿದೆ.

ಸಿಪಿಐ(ಎಂ) ಪಕ್ಷದ ಸದಸ್ಯರಾಗಿದ್ದುಕೊಂಡು ನೂರಾರು ರೈತ ಹೋರಾಟಗಳನ್ನು ಸಂಘಟಿಸಿದ ಅನುಭವವಿದ್ದ ಮಾನ್ಪಡೆಯವರು ಸೆಪ್ಟಂಬರ್ ತಿಂಗಳಿನಲ್ಲಿ ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ಸಂಘಟಿಸಿದ್ದರು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...