Homeಮುಖಪುಟಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

- Advertisement -
- Advertisement -

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಭಾನುವಾರ (ಸೆ.22) ಆಯ್ಕೆಯಾಗಿದ್ದಾರೆ.

ನ್ಯಾ‍‍ಷನಲ್‌ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿಸ್ಸನಾಯಕೆ ಅವರು, 57,40,179 ಅಥವಾ 42.3% ಮತಗಳನ್ನು ಪಡೆದ್ದಾರೆ. ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು 45,30,902 ಅಥವಾ 32.8% ಮತಗಳ ಮೂಲಕ ಎರಡನೇ ಸ್ಥಾನ ಪಡೆದಿದ್ದಾರೆ.

ದೇಶದ ಆರ್ಥಿಕತೆ ಕುಸಿದ ನಂತರ, ಎರಡು ವರ್ಷಗಳ ಹಿಂದೆ ಅಧಿಕಾರ ವಹಿಸಿಕೊಂಡ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಶೇ.20ಕ್ಕಿಂತ ಕಡಿಮೆ ಮತಗಳನ್ನು ಗಳಿಸಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ನೂತನ ಅಧ್ಯಕ್ಷರ ಪ್ರಮಾಣವಚನಕ್ಕೂ ಮುನ್ನ, ಇಂದು (ಸೆ.23) ಪ್ರಧಾನಿ ದಿನೇಶ್ ಗುಣವರ್ಧನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಭಾನುವಾರ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಕೊನೆಗೊಂಡಾಗ ಇಬ್ಬರು ಪ್ರಮುಖ ಅಭ್ಯರ್ಥಿಗಳಲ್ಲಿ ಯಾರೂ ಅಗತ್ಯವಿರುವ ಶೇ.50ರಷ್ಟು ಮತಗಳನ್ನು ಪಡೆದಿರಲಿಲ್ಲ. ಹಾಗಾಗಿ, ಎರಡನೇ ಸುತ್ತಿನ ಮತ ಎಣಿಕೆ ನಡೆಸಿ, ದಿಸ್ಸನಾಯಕೆ ಅವರ ಗೆಲುವನ್ನು ಘೋಷಿಸಲಾಯಿತು ಎಂದು ವರದಿಗಳು ಹೇಳಿವೆ.

ಶ್ರೀಲಂಕಾದ ಚುನಾವಣಾ ವ್ಯವಸ್ಥೆಯ ಅಡಿಯಲ್ಲಿ, ಮತದಾರರು ಮೂರು ಪ್ರಾಶಸ್ತ್ಯದ ಮತಗಳನ್ನು ಹಾಕುತ್ತಾರೆ. ಮೊದಲ ಎಣಿಕೆಯಲ್ಲಿ ಯಾವುದೇ ಅಭ್ಯರ್ಥಿಯು 50% ಮತಗಳನ್ನು ಗಳಿಸದಿದ್ದಲ್ಲಿ, ಅಗ್ರ ಎರಡು ಅಭ್ಯರ್ಥಿಗಳ ನಡುವೆ ಎರಡನೇ ಸುತ್ತಿನ ಎಣಿಕೆಯನ್ನು ನಡೆಸಲಾಗುತ್ತದೆ.

ಶನಿವಾರ (ಸೆ.21) ನಡೆದ ಚುನಾವಣೆಯಲ್ಲಿ ಶೇ.75ರಷ್ಟು ಮತದಾನವಾಗಿತ್ತು.

ತನ್ನ ಅಭೂತಪೂರ್ವ ಗೆಲುವಿನ ಕುರಿತು ಪ್ರತಿಕ್ರಿಯಿಸಿರುವ ದಿಸ್ಸನಾಯಕೆ ಅವರು “ಈ ಸಾಧನೆಯು ಯಾವುದೇ ಒಬ್ಬ ವ್ಯಕ್ತಿಯ ಕೆಲಸದ ಫಲಿತಾಂಶವಲ್ಲ. ಇದು ಲಕ್ಷಾಂತರ ಜನರ ಸಾಮೂಹಿಕ ಪ್ರಯತ್ನ. ನಿಮ್ಮ ಬದ್ಧತೆ ನಮ್ಮನ್ನು ಇಲ್ಲಿಯವರೆಗೆ ತಂದಿದೆ. ಅದಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಗೆಲುವು ನಮ್ಮೆಲ್ಲರದ್ದು” ಎಂದು ಹೇಳಿದ್ದಾರೆ.

ವಿಡಿಯೋ ಹೇಳಿಕೆಯಲ್ಲಿ ನಿರ್ಗಮಿತ ಅಧ್ಯಕ್ಷ ವಿಕ್ರಮಸಿಂಘೆ ಅವರು ದಿಸ್ಸನಾಯಕೆ ಅವರನ್ನು ಅಭಿನಂದಿಸಿದ್ದು, ದೇಶದ ಆರ್ಥಿಕತೆಯನ್ನು ಅಭಿವೃದ್ದಿಪಡಿಸುವ ಪ್ರಯತ್ನಗಳನ್ನು ಅವರು ಮುಂದುವರಿಸುವ ಭರವಸೆ ವ್ಯಕ್ತಪಡಿಸಿದ್ದಾರೆ.

ದಿಸ್ಸನಾಯಕೆ ಯಾರು? 

ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಅವರ ಪಕ್ಷವು ಶ್ರೀಲಂಕಾ ಸಂಸತ್‌ನಲ್ಲಿ ಮೂರು ಸ್ಥಾನಗಳನ್ನು ಹೊಂದಿದೆ. ದಿಸ್ಸನಾಯಕೆ ಅವರು ನ್ಯಾ‍‍ಷನಲ್‌ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟದ ಅಭ್ಯರ್ಥಿಯಾಗಿ ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪೆರೆಮುನಾ (ಜೆವಿಪಿ) ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದ್ದರು.

ದಿಸ್ಸನಾಯಕೆ ಅವರ ಪಕ್ಷ ಸರ್ಕಾರದ ಜನರ ವಿರೋಧಿ ತೆರಿಗೆ ಮತ್ತು ಆರ್ಥಿಕ ನೀತಿಗಳ ವಿರುದ್ಧ ಹೋರಾಟ ನಡೆಸಿ ಶ್ರೀಲಂಕಾ ಜನತೆಯ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ.

2022ರಲ್ಲಿ ಶ್ರೀಲಂಕಾದಲ್ಲಿ ತೀವ್ರ ಅರ್ಥಿಕ ಬಿಕ್ಕಟ್ಟು ಉಂಟಾಗಿ ಹಣದುಬ್ಬರ ಗಗನಕ್ಕೇರಿತ್ತು. ಜನರಿಗೆ ಅಗತ್ಯ ವಸ್ತುಗಳ ಕೊರತೆ ಉಂಟಾಗಿ ಪರದಾಡುವಂತಾಗಿತ್ತು. ಆಗ ಸರ್ಕಾರದ ವಿರುದ್ದ ಹೋರಾಟ ರೂಪಿಸಿದ್ದರ ಹಿಂದೆ ದಿಸ್ಸನಾಯಕೆ ಅವರ ಪಾತ್ರ ದೊಡ್ಡದಿತ್ತು. ಅವರು ನೇರವಾಗಿ ಹೋರಾಟದ ನೇತೃತ್ವದ ವಹಿಸದಿದ್ದರೂ, ಜನರು ಹೋರಾಟ ಕೈಗೊಂಡಿದ್ದರ ಹಿಂದೆ ಅವರ ಪ್ರೇರೇಪಣೆಯಿತ್ತು ಎಂದು ವರದಿಗಳು ಹೇಳಿವೆ.

ರಾಜಪಕ್ಸೆ ಅವರ ರಾಜೀನಾಮೆಯ ನಂತರ ಉಂಟಾದ ನಾಯಕತ್ವದ ಕೊರತೆಯು ದಿಸ್ಸನಾಯಕೆಗೆ ಮತ್ತು ಅವರ ಪಕ್ಷಕ್ಕೆ ದೊಡ್ಡ ಅವಕಾಶ ಮಾಡಿ ಕೊಟ್ಟಿತು. ಭ್ರಮನಿರಸನಗೊಂಡ ನಾಗರಿಕರ ಜೊತೆ ನಿಂತ ದಿಸ್ಸನಾಯಕೆ,  ಸಾಮಾಜಿಕ ನ್ಯಾಯ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಟ ಕೈಗೊಂಡಿದ್ದರು. ಅವೆಲ್ಲವೂ, ಈ ಚುನಾವಣೆಯಲ್ಲಿ ಮತಗಳಾಗಿ ಪರಿವರ್ತನೆಗೊಂಡಂತಿದೆ.

ಇದನ್ನೂ ಓದಿ : ಜಮ್ಮು ಕಾಶ್ಮೀರ | ಅತಂತ್ರ ವಿಧಾನಸಭೆ ತಪ್ಪಿಸಲು ಕಾಂಗ್ರೆಸ್ ಜೊತೆ ಮೈತ್ರಿ: ಒಮರ್ ಅಬ್ದುಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...