Homeಸಿನಿಮಾಕ್ರೀಡೆಪದ್ಮವಿಭೂಷಣಕ್ಕೆ ಶಿಫಾರಸು ಮಾಡಿದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಮೇರಿ ಕೋಮ್..

ಪದ್ಮವಿಭೂಷಣಕ್ಕೆ ಶಿಫಾರಸು ಮಾಡಿದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಮೇರಿ ಕೋಮ್..

ಪಿ.ವಿ ಸಿಂಧು ಪದ್ಮಭೂಷಣಕ್ಕೆ ನಾಮನಿರ್ದೇಶನಗೊಂಡಿದ್ದಾರೆ. ಪದ್ಮಶ್ರೀ ಪ್ರಶಸ್ತಿಗಳಿಗಾಗಿ ಮಹಿಳೆಯರನ್ನೇ ಕ್ರೀಡಾ ಸಚಿವಾಲಯವು ಶಿಫಾರಸು ಮಾಡಿದೆ.

- Advertisement -
- Advertisement -

ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಪ್ರಶಸ್ತಿಗೆ ಭಾರತೀಯ ಮಹಿಳಾ ಕ್ರೀಡಾಪಟುವನ್ನು ಮೊದಲ ಬಾರಿಗೆ ಶಿಫಾರಸು ಮಾಡಲಾಗಿದೆ. ಕ್ರೀಡಾ ಸಚಿವಾಲಯವು ಆರು ಬಾರಿ ವಿಶ್ವ ಚಾಂಪಿಯನ್ ಆದ ಎಂ.ಸಿ ಮೇರಿ ಕೋಮ್ ಅವರನ್ನು ಈ ಗೌರವಕ್ಕಾಗಿ ಹೆಸರಿಸಿದೆ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಪಿ.ವಿ ಸಿಂಧು ಅವರು ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಭೂಷಣಕ್ಕೆ ನಾಮನಿರ್ದೇಶನಗೊಂಡಿದ್ದಾರೆ.

ಪದ್ಮಶ್ರೀ ಪ್ರಶಸ್ತಿಗಳಿಗಾಗಿ ಕ್ರೀಡಾ ಸಚಿವಾಲಯದ ಮಾಡಿರುವ ಶಿಫಾರಸುಗಳಲ್ಲಿ ಎಲ್ಲರೂ ಮಹಿಳೆಯರೇ ಆಗಿದ್ದಾರೆ. ಅವರಲ್ಲಿ ಕುಸ್ತಿಪಟು ವಿನೇಶ್ ಫೋಗಾಟ್, ಟೇಬಲ್ ಟೆನಿಸ್ ಆಟಗಾರ್ತಿ ಮಾನಿಕಾ ಬಾತ್ರಾ, ಟ್ವೆಂಟಿ -20 ಅಂತಾರಾಷ್ಟ್ರೀಯ ಕ್ರಿಕೆಟ್ ನಾಯಕಿ ಹರ್ಮನ್‌ಪ್ರೀತ್ ಕೌರ್, ಹಾಕಿ ನಾಯಕಿ ರಾಣಿ ರಾಂಪಾಲ್, ಮಾಜಿ ಶೂಟರ್ ಸುಮಾ ಶಿರೂರ್ ಮತ್ತು ಪರ್ವತಾರೋಹಿಗಳಾದ ತಾಶಿ ಮತ್ತು ನುಂಗ್ಶಿ ಮಲಿಕ್ ಸೇರಿದ್ದಾರೆ ಎಂದು ವರದಿ ಹೇಳಿದೆ.

ರಾಜ್ಯಸಭಾ ಸದಸ್ಯೆ ಮೇರಿ ಕೋಮ್‌ಗೆ ಈಗಾಗಲೇ 2013 ರಲ್ಲಿ ಪದ್ಮಭೂಷಣ್ ಮತ್ತು 2006 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಜೊತೆಗೆ ಪದ್ಮವಿಭೂಷಣ ಪಡೆದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೆಸ್ ಶ್ರೇಷ್ಠ ವಿಶ್ವನಾಥನ್ ಆನಂದ್ (2007), ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ (2008) ಮತ್ತು ಪರ್ವತಾರೋಹಿ ಸರ್ ಎಡ್ಮಂಡ್ ಹಿಲರಿ (2008 ರಲ್ಲಿ ಮರಣೋತ್ತರವಾಗಿ) ಈ ಪ್ರಶಸ್ತಿ ಪಡೆದ ಇತರ ಕ್ರೀಡಾಪಟುಗಳಾಗಿದ್ದಾರೆ.

ಮತ್ತೊಂದೆಡೆ, ಸಿಂಧು 2015 ರಲ್ಲಿ ಪದ್ಮಶ್ರೀ ಪಡೆದ ನಂತರ ಈ ಹಿಂದೆ ಪದ್ಮಭೂಷಣಕ್ಕೆ ಶಿಫಾರಸು ಮಾಡಲಾಗಿತ್ತು, ಆದರೆ ಆಯ್ಕೆಯಾಗಿರಲಿಲ್ಲ. ಆದಾಗ್ಯೂ, ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ನಂತರ, ಅವರನ್ನು ಮತ್ತೆ ಶಿಫಾರಸು ಮಾಡಲಾಗಿದೆ.

ಶಿಫಾರಸುಗಳನ್ನು ಪದ್ಮಾ ಪ್ರಶಸ್ತಿ ಸಮಿತಿಗೆ ಕಳುಹಿಸಲಾಗಿದ್ದು, ಮುಂದಿನ ವರ್ಷದ ಆರಂಭದಲ್ಲಿ ಗಣರಾಜ್ಯೋತ್ಸವದ ಮುನ್ನಾದಿನದಂದು ಆಯ್ದ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಪ್ರಕಟಿಸಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...