Homeಕರ್ನಾಟಕ‘ಮಸ್ಜಿದ್‌‌ ಝೀನತ್‌ ಭಕ್ಷ್‌’: ಕರ್ನಾಟಕದ ಅತ್ಯಂತ ಪುರಾತನ ಮಸೀದಿಯನ್ನು ದೇವಸ್ಥಾನ ಎಂದು ಪ್ರತಿಪಾದಿಸಿ ವಿಡಿಯೊ ವೈರಲ್‌‌...

‘ಮಸ್ಜಿದ್‌‌ ಝೀನತ್‌ ಭಕ್ಷ್‌’: ಕರ್ನಾಟಕದ ಅತ್ಯಂತ ಪುರಾತನ ಮಸೀದಿಯನ್ನು ದೇವಸ್ಥಾನ ಎಂದು ಪ್ರತಿಪಾದಿಸಿ ವಿಡಿಯೊ ವೈರಲ್‌‌ ಮಾಡಿರುವ ದುಷ್ಕರ್ಮಿಗಳು

- Advertisement -
- Advertisement -

ಕರಾವಳಿ ನಗರವಾದ ಮಂಗಳೂರಿನಲ್ಲಿ ಮಸೀದಿಯಾಗಿ ಪರಿವರ್ತನೆಯಾಗಿರುವ ಪುರಾತನ ದೇವಾಲಯದ ದೃಶ್ಯಗಳು ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವಾರು ಬಿಜೆಪಿಯನ್ನು ಬೆಂಬಲಿಸುವ ಬಲಪಂಥೀಯ ವ್ಯಕ್ತಿಗಳು ಈ ವಿಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ.

ಝೀನತ್‌ ಭಕ್ಷ್‌ ಮಸೀದಿಯ ಬಗ್ಗೆಗಿನ ಸುಳ್ಳು ಪೋಸ್ಟ್‌‌

ವಿಡಿಯೊದಲ್ಲಿ, ಮಸೀದಿಯಲ್ಲಿರುವ ಕೆರೆ, ಮಸೀದಿಯ ಸುಂದರವಾದ ಕೆತ್ತನೆಗಳು, ಮಸೀದಿಯ ರಚನೆಗಳನ್ನು ಕಾಣಬಹುದಾಗಿದೆ.


ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದರೆ, ವೀಡಿಯೊದ ಮೇಲಿನ ಎಡ ಭಾಗದಲ್ಲಿ “Thousands  shades of India” ಎಂಬ ಸಾಲಿನ ವಾಟರ್‌ಮಾರ್ಕ್ ಅನ್ನು ನೋಡಬಹುದು. ಈ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊವನ್ನು ಹುಡುಕಿದಾಗ, ಇದೇ ರೀತಿಯ ದೃಶ್ಯಗಳನ್ನು ಹೊಂದಿರುವ ವಿಡಿಯೊವನ್ನು 20 ಡಿಸೆಂಬರ್ 2021 ರಂದು ‘ದಿ ಥೌಸಂಡ್ ಶೇಡ್ಸ್ ಆಫ್ ಇಂಡಿಯಾ’ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿರುವುದು ಕಂಡುಬಂದಿದೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಅವರು ಅದನ್ನು ಮಂಗಳೂರು ಬಂದರು ಪ್ರದೇಶದಲ್ಲಿ ಇರುವ ಪುರಾತನ ಝೀನತ್ ಬಕ್ಷ್ ಮಸೀದಿಯ ವಿಡಿಯೊ ಎಂದು ಉಲ್ಲೇಖಿಸಿದ್ದಾರೆ. ಇದನ್ನು ಕರ್ನಾಟಕದದಲ್ಲಿ ನಿರ್ಮಿಸಲಾದ ಮೂರನೇ ಅತ್ಯಂತ ಹಳೆಯ ಮಸೀದಿ ಎಂದು ಇತಿಹಾಸ ಹೇಳುತ್ತದೆ.

ಜೀನತ್ ಬಕ್ಷ್ ಮಸೀದಿಯ ಇತಿಹಾಸವು ‘ಕರ್ನಾಟಕ ಪ್ರವಾಸೋದ್ಯಮ’ ವೆಬ್‌ಸೈಟ್ ಮತ್ತು ಝೀನತ್ ಬಕ್ಷ್ ಮಸೀದಿ ಫೇಸ್‌ಬುಕ್ ಪೇಜ್‍ನಲ್ಲಿ ಲಭ್ಯವಿದೆ. ‘ಬೆಲಿಯೊ ಪಲ್ಲಿ’ ಅಥವಾ ‘ಝೀನತ್‌‌ ಭಕ್ಷ್‌ ಜಮ್ಮಾ ಮಸೀದಿ’ ಎಂದೂ ಕರೆಯಲ್ಪಡುವ ಮಸೀದಿಯನ್ನು ಅರಬ್ ವ್ಯಾಪಾರಿಗಳು, ಕಿತ್ ಮತ್ತು ಸಹಬಾಸ್ (ಪ್ರವಾದಿ ಮೊಹಮ್ಮದ್ ಅವರ ಸಹಚರರು) ಸ್ಥಾಪಿಸಿದರು ಎಂದು ನಂಬಲಾಗಿದೆ.

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ಝೀನತ್ ಬಕ್ಷ್ ಮಸೀದಿಯು ಸಂಪೂರ್ಣ ಭಾರತೀಯ ವಾಸ್ತುಶಿಲ್ಪದ ಶೈಲಿಯಿಂದಾಗಿ ಎಲ್ಲಾ ಮಸೀದಿಗಳನ್ನು ಮೀರಿಸುತ್ತದೆ. ಕ್ರಿಸ್ತ ಶಕ 7 ನೇ ಶತಮಾನದ ಅವಧಿಯಲ್ಲಿ, ಅರಬ್ ಮುಸ್ಲಿಂ ವ್ಯಾಪಾರಿಗಳು ಸ್ಥಳೀಯ ಜನಸಂಖ್ಯೆ ಮತ್ತು ಪಶ್ಚಿಮ ಕರಾವಳಿಯ ಆಡಳಿತಗಾರರೊಂದಿಗೆ ಅತ್ಯಂತ ಸೌಹಾರ್ದಯುತ ಸಂಬಂಧವನ್ನು ಉಳಿಸಿಕೊಂಡಿದ್ದರು.

ವಿವರಗಳ ಪ್ರಕಾರ, ಮಲಬಾರ್‌ನ ರಾಜಾ ಚೆರುಮಾನ್ ಪೆರುಮಾಳ್ ಅರಬ್ ವ್ಯಾಪಾರಿಗಳಿಗೆ ಸೂಕ್ತವಾದ ವಸತಿ ಮತ್ತು ವ್ಯಾಪಾರ ಮಾಡುವ ಸ್ಥಳವನ್ನು ನೀಡಿದ್ದರು ಮತ್ತು ಅವರ ಮಸೀದಿಗಳನ್ನು ನಿರ್ಮಿಸಲು ಭೂಮಿಯನ್ನು ಸಹ ಒದಗಿಸಿದ್ದರು.

ನಂತರ, 17 ನೇ ಶತಮಾನದಲ್ಲಿ, ಟಿಪ್ಪು ಸುಲ್ತಾನ್ ಈ ಮಸೀದಿಯನ್ನು ಸುಂದರವಾದ ಮರದ ಕೆತ್ತನೆಗಳೊಂದಿಗೆ ನವೀಕರಿಸಿದ್ದರು. ನಂತರ ತನ್ನ ಮಗಳ ಹೆಸರನ್ನು ಮಸೀದಿಗೆ ಇಟ್ಟು ಝೀನತ್ ಬಕ್ಷ್ ಎಂದು ಹೆಸರಿಸಿದ್ದರು. ಮಸೀದಿ ಜೀನತ್ ಬಕ್ಷ್ ರೋಸ್‌ವುಡ್ ಮತ್ತು ತೇಗದ ಮರದಗಳಿಂದ ವಿನ್ಯಾಸಗೊಳಿಸಲಾಗಿದೆ. ಉತ್ಕೃಷ್ಟ ಬಗೆಯ ಗೋಡೆಗಳು, ಬಾಗಿಲುಗಳು ಮತ್ತು ಮಹಡಿಗಳನ್ನು ಒಳಗೊಂಡಿದೆ. ಬಂದರ್‌ನಲ್ಲಿರುವ ಜೀನತ್ ಬಕ್ಷ್ ಮಸೀದಿಯನ್ನು ಹಿಂದೂ ದೇವಾಲಯವನ್ನು ಕೆಡವಿ ನಿರ್ಮಿಸಲಾಗಿದೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ಒಟ್ಟಾರೆಯಾಗಿ ಹೇಳುವುದಾದರೆ, ರಾಜ್ಯದ ಮಂಗಳೂರಿನ ಜೀನತ್ ಬಕ್ಷ್ ಮಸೀದಿಯು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಲಾಗುತ್ತಿರುವ ಪೋಸ್ಟ್‌‌ನಲ್ಲಿ ಮಾಡಿರುವ ಪ್ರತಿಪಾದನೆ ಸುಳ್ಳಾಗಿದೆ. ಕೃಪೆ:ಫ್ಯಾಕ್ಟ್‌ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...