Homeಕರ್ನಾಟಕಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

- Advertisement -
- Advertisement -

ಮಸ್ಕಿ ಉಪಚುನಾವಣೆ ಎಲ್ಲ ಚುನಾವಣೆಗಳಂತೆ ಜಾತಿ ಲೆಕ್ಕಾಚಾರ, ಆಡಳಿತ ಪಕ್ಷದ ಲಾಭಕರ ಅಂಶ, ಅಭ್ಯರ್ಥಿಗಳ ‘ಜನಪ್ರಿಯತೆ’ ಆಧರಿಸಿಯೇ ನಡೆಯಲಿದೆ. ಆದರೆ ಈ ಸಲ ಇಲ್ಲಿ ಒಂದಿಷ್ಟು ಟ್ವಿಸ್ಟ್‌ಗಳು ಈ ಚುನಾವಣೆಯ ಅಂತಿಮ ಫಲಿತಾಂಶವನ್ನು ನಿರ್ಧರಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಅಂದಂತೆ ಮೀಸಲು ಕ್ಷೇತ್ರವಾದ ಇಲ್ಲಿ ‘ಗೌಡರ’ ಸ್ಪರ್ಧೆ ನಡೆಯುತ್ತಿದೆ, ಇದೇನೂ ಆಶ್ಚರ್ಯಕರವಲ್ಲ ಇಲ್ಲಿನ ಜನರಿಗೆ!

ಇಲ್ಲಿ ಈಗ ಮತದಾರರು ಮೇಲ್ನೋಟಕ್ಕೆ ತಟಸ್ಥರಂತೆ ಕಾಣುತ್ತಿದ್ದಾರೆ. ಆದರೆ ಅಭ್ಯರ್ಥಿಗಳು ಅದಲ್-ಬದಲ್ ಆಗಿರುವುದು ಅವರಿಗೇನೂ ಗೊಂದಲ ಮೂಡಿಸಿದಂತೆ ಕಾಣುತ್ತಿಲ್ಲ. ಕಳೆದ ಸಲ ಕಾಂಗ್ರೆಸ್‌ನಿಂದ ಗೆದ್ದಿದ್ದ ಪ್ರತಾಪಗೌಡ ಪಾಟೀಲರು ಆಪರೇಷಮ್ ಕಮಲಕ್ಕೆ ಒಳಗಾದ ಕಾರಣ ‘ಸಾಂವಿಧಾನಿಕ ಪ್ರಕ್ರಿಯೆ’ ಮೂಲಕ ಬಿಜೆಪಿ ಸೇರಿ ಅನರ್ಹಗೊಂಡವರು. ಈ ಅನರ್ಹತೆ ತೊಳೆದು ಹಾಕಲು-ಸುಪ್ರೀಂಕೋರ್ಟ್ ಅಭಿಮತದಂತೆ- ಅವರೀಗ ಉಪ ಚುನಾವಣೆ ಗೆಲ್ಲಬೇಕಿದೆ. ಈಗ ಅವರು ಬಿಜೆಪಿ ಅಭ್ಯರ್ಥಿ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಅವರ ವಿರುದ್ಧ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ತುರವಿಹಾಳ ಬಸನಗೌಡ ಈಗ ಕಾಂಗ್ರೆಸ್ ಅಭ್ಯರ್ಥಿ… ಈಗ ಇವರಿಬ್ಬರ ಹಿಂಬಾಲಕರು ತಮ್ಮ ನಾಯಕರ ಹಿಂದೆಯೇ ನಿಂತಿದ್ದಾರೆಯೇ ಹೊರತು ಅವರಿಗೆ ಪಕ್ಷ ಮುಖ್ಯವಾಗಿಲ್ಲ.

ಅಂದಂತೆ ಎರಡೂ ಕಡೆ ‘ಗೌಡರು’ ನಿಂತಿದ್ದಾರೆ ಎಂದರೆ ಸಹಜವಾಗಿ ಅದು ಲಿಂಗಾಯತ ರೆಡ್ಡಿ ಗೌಡರೇ, ಒಕ್ಕಲಿಗ ಗೌಡರೆ ಅಂತಾ ನಿಮಗೆ ಅನಿಸಬಹುದು. ಸಾರಿ, ಇದು ಪರಿಶಿಷ್ಟ ಪಂಗಡ ಮೀಸಲು ಕೇತ್ರ. ಎಸ್‌ಟಿ ಪಂಗಡದವರು ಗೌಡ ಪದ ಸೇರಿಸಿಕೊಂಡಿದ್ದಾರೆ. ಹಾಗಾಗಿ ಅವರ ಹೆಸರುಗಳು ಗೌಡ ಎಂಬಲ್ಲಿಗೆ ಅಂತ್ಯವಾಗುತ್ತವೆ.

ಆದರೆ ಮತದಾರ ‘ಪೊಸಿಷನ್’ ಚೇಂಜ್ ಮಾಡಿದ್ದಾನೋ, ಅಥವಾ ಏಟು ಕೊಡಲು ಕಾಯ್ತಾ ಇದ್ದಾನೋ ಎಂಬುದು ಗೊತ್ತಿಲ್ಲ. ಸುತ್ತಮುತ್ತಲ ಕ್ಷೇತ್ರಗಳಲ್ಲಿ ಪ್ರಭಾವ ಇರುವ, ಕೆಲ ಜನಪ್ರತಿನಿಧಿಗಳನ್ನೂ ಹೊಂದಿರುವ ಜೆಡಿಎಸ್ ಇಲ್ಲಿ ಕ್ಯಾಂಡಿಡೇಟ್ ಹಾಕಿಲ್ಲ! ಫೆಬ್ರವರಿ 14 ರಂದು ಮಾಜಿ ಸಿಎಂ ಕುಮಾರಸ್ವಾಮಿಯವರು ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ, ಬಿಜೆಪಿಗೆ ಅನುಕೂಲ ಮಾಡಿಕೊಡುವುದಿಲ್ಲ ಎಂದಿದ್ದರು. ಆದರೆ ಈಗ ಇಲ್ಲಿ ಅಭ್ಯರ್ಥಿ ಹಾಕದೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಯಾರ ಜೊತೆ ಎಂಬುದನ್ನು ವಿವರಿಸಬೇಕಿಲ್ಲ! ಅದು ಯಡಿಯೂರಪ್ಪರ ಜೊತೆ ಎಂದು ಪ್ರಾಸಂಗಿಕವಾಗಿ ಹೇಳಬಹುದಾದರೂ, ಇಲ್ಲಿನ ಎರಡೂ ಪಕ್ಷಗಳ ಕೆಲವು ನಾಯಕರು ಇದು ವಿಜಯೇಂದ್ರ ಮತ್ತು ಎಚ್‌ಡಿಕೆ ನಡುವಿನ ಒಪ್ಪಂದವೆಂದು ಮಾತನಾಡಿಕೊಳ್ಳುತ್ತಿದ್ದಾರೆ.

ರಾಜಕೀಯದ ಈ ಮಜಲಿನಾಚೆಗೆ ಇಲ್ಲಿ ಕೆಲವು ಪ್ರಮುಖ ಅಂಶಗಳು ಈ ಚುನಾವಣೆಯ ಫಲಿತಾಂಶದ ದಿಕ್ಕನ್ನೇ ಬದಲಿಸಬಲ್ಲವು. ಅದರಲ್ಲಿ 100 ದಿನ ದಾಟಿದ NRBC_5A ನೀರಾವರಿ ಹೋರಾಟವೂ ಒಂದು. 58 ಗ್ರಾಮಗಳ ಜನ ನೀರಾವರಿ ವ್ಯವಸ್ಥೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಸೆಟೆದು ನಿಂತಿದ್ದಾರೆ.

ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ: ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...