Homeಕರ್ನಾಟಕಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

"ಹಿಂದೆ ನಾನು ಮೋದಿ ಅಭಿಮಾನಿಯಾಗಿದ್ದೆ. ಆದರೆ ಈಗ ಆ ಭ್ರಮೆ ಕಳಚಿದೆ. ಈಗ ಇಲ್ಲಿ ಬಿಜೆಪಿ ಸೋಲಿಸಲು ನಾವು ತೀರ್ಮಾನಿಸಿದ್ದೇವೆ"

- Advertisement -
- Advertisement -

ಹೊರಗಿಂದ ಬಂದವರು ಮಸ್ಕಿಯಲ್ಲಿ ಬಿಜೆಪಿ ಪರವಾಗಿ ಸಿಕ್ಕಾಪಟ್ಟೆ ಹಣ ಹಂಚುತ್ತಿದ್ದಾರೆ ಎಂಬ ಆರೋಪ ಇಲ್ಲಿ ಕೇಳಿ ಬರುತ್ತಿದೆ. ಬಿಜೆಪಿ ಯುವ ಮುಖಂಡ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಇದರ ನೇತೃತ್ವ ವಹಿಸಿದ್ದಾರೆ ಎಂದು ಕಾಂಗ್ರೆಸ್ ಮತ್ತು NRBC-5-ಎ ಕಾಲುವೆ ನೀರಾವರಿ ಹೋರಾಟದ ಮುಖಂಡರು ಆಪಾದಿಸಿದ್ದಾರೆ.

ಬಿಜೆಪಿ ಬೆಂಬಲಿಗರು ಹಣ ಹಂಚುವ ವಿಡಿಯೋ ಕೂಡ ವೈರಲ್ ಆಗಿತ್ತು. ಮಸ್ಕಿ ಕ್ಷೇತ್ರದ ಕವಿತಾಳ್ ಪಟ್ಟಣದಲ್ಲಿ ಈ ಕುರಿತು ಎಫ್‌ಐಆರ್ ಕೂಡ ದಾಖಲಾಗಿದೆ.

“ದಾವಣಗೆರೆ, ಮೈಸೂರು, ಬೆಂಗಳೂರು, ಹಾಸನ, ಮಂಡ್ಯ ಕಡೆಯ ಆರ್‌ಎಸ್‌ಎಸ್ ಕಾರ್ಯಕರ್ತರು ಹಣ ಹಂಚಲೆಂದೇ ನೂರಾರು ಸಂಖ್ಯೆಯಲ್ಲಿ ಬಂದಿದ್ದಾರೆ. ಅವರು ಮಸ್ಕಿ ವ್ಯಾಪ್ತಿಯ ಹೊರಗಡೆ ವಾಸ್ತವ್ಯ ಹೂಡಿದ್ದು, ದಿನವೂ ಮಸ್ಕಿ ಕ್ಷೇತ್ರದಲ್ಲಿ ಹಣ ಹಂಚುವ ಕೆಲಸದಲ್ಲಿ ನಿರತರಾಗಿದ್ದಾರೆ” ಎಂದು ನೀರಾವರಿ ಹೋರಾಟಗಾರರು ಮತ್ತು ಜನಸಾಮಾನ್ಯರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ಮಸ್ಕಿ ಕ್ಷೇತ್ರಕ್ಕೆ ಹೊಂದಿಕೊಂಡ ಮುದಗಲ್, ಲಿಂಗಸೂಗುರು ಮತ್ತು ಸಿಂಧನೂರಿನಲ್ಲಿ ಇವರೆಲ್ಲ ವಾಸ್ತವ್ಯ ಮಾಡಿದ್ದಾರೆ ಎಂಬುದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ರೈತ ಹೋರಾಟಗಾರರ ಆರೋಪವಾಗಿದೆ.

ಮಸ್ಕಿ ಕ್ಷೇತ್ರದ ವ್ಯಾಪ್ತಿಗೆ ಬರುವ ಸಿಂಧನೂರು ತಾಲೂಕಿನ ಮಾಟೂರಿನ ಯುವರೈತ ಬಸು ಸಂಜಿ ಫೇಸ್‌ಬುಕ್‌ನಲ್ಲಿ ಹಣ ಹಂಚುವಿಕೆ ಕುರಿತಾದ ವಿವರ ಹಾಕಿಕೊಂಡಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಸು ಸಂಜಿ, “ಹಿಂದೆ ನಾನು ಮೋದಿ ಅಭಿಮಾನಿಯಾಗಿದ್ದೆ. ಆದರೆ ಈಗ ಆ ಭ್ರಮೆ ಕಳಚಿದೆ. ಈಗ ಇಲ್ಲಿ ಬಿಜೆಪಿ ಸೋಲಿಸಲು ನಾವು ತೀರ್ಮಾನಿಸಿದ್ದೇವೆ” ಎಂದರು.

ಇದನ್ನೂ ಓದಿ: ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಮತ್ತೆ ಬಿಜೆಪಿಗೆ!

ಮಸ್ಕಿಯಲ್ಲಿ ಬಿಜೆಪಿಯವರು ರಂದು ಆರೋಪಿಸಲಾಗಿರುವ ಹಲವರು ಹಣ ಹಂಚಿ ಬಿಜೆಪಿಗೇ ಮತ ಹಾಕಬೇಕು ಎಂದು ಪ್ರಮಾಣ ಮಾಡಿಸಿಕೊಂಡ ಕನಿಷ್ಠ ಮೂರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನಿನ್ನೆಯಷ್ಟೇ ಬಿಜೆಪಿ ನಾಯಕ ನಂದೀಶರೆಡ್ಡಿ ಹಣ ಹಂಚಿದರು ಎನ್ನಲಾದ ವಿಡಿಯೋ ವೈರಲ್ ಆಗಿದೆ.

ಚುನಾವಣಾ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಮಸ್ಕಿಯಲ್ಲಿ 40-50 ಕೋಟಿ ರೂಪಾಯಿ ಖರ್ಚು ಮಾಡಲು ಹೊರಟಿದೆ ಎಂದು ಆರೋಪಿಸಿದ್ದರು. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ ಎಂದು ಹೇಳಲಾಗಿದೆ.

“ಹಣ ಹಂಚಿಕೆ ಕುರಿತು ನಮ್ಮ ರಾಜ್ಯ ನಾಯಕರು ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ವಿಜಯೇಂದ್ರ ಅವರು ದುಡ್ಡು ಹಂಚಲು ಹಾಸನ, ಶಿರಾ, ಶಿಮೊಗ್ಗದವರನ್ನು ಕರೆ ತಂದಿದ್ದಾರೆ” ಎಂದು ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ತಿಳಿಸಿದ್ದಾರೆ.


ಇದನ್ನೂ ಓದಿ: ಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA ನಾಡಗೌಡ: ಮಧ್ಯದಲ್ಲಿ ಜೆಡಿಎಸ್ ಕ್ಯಾಂಡಿಡೇಟೇ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...