Homeಮುಖಪುಟವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

ವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

- Advertisement -
- Advertisement -

ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರಕಾರವಿರುವ ಉತ್ತರಪ್ರದೇಶದಲ್ಲಿ ವಿವಾಹಕ್ಕೆ ಸಂಬಂಧಿಸಿದ  ಬಹುದೊಡ್ಡ ಹಗರಣವೊಂದು ಬೆಳಕಿಗೆ ಬಂದಿದ್ದು, ನೂರಾರು ವಧುಗಳು ವರರಿಲ್ಲದೆ ವಿವಾಹವಾಗಿದ್ದಾರೆ. ‘ಸಿಎಂ ಗ್ರೂಪ್‌ ಮ್ಯಾರೇಜ್‌ ಸ್ಕೀಂ’ ಯೋಜನೆಯಡಿ ಕೋಟ್ಯಾಂತರ ರೂ. ಹಗರಣ ನಡೆದಿರುವ ಆರೋಪ ಕೇಳಿ ಬಂದಿದೆ.

ಉತ್ತರಪ್ರದೇಶದ ಬಲಿಯಾ ಪ್ರದೇಶದಲ್ಲಿ ಸುಮಾರು 568 ವಧುಗಳು ಹಣಕ್ಕಾಗಿ ವರರಿಲ್ಲದೆ ವಿವಾಹವಾಗಿದ್ದಾರೆ. ವಿವಾಹ ಸಮಾರಂಭವು ಜನವರಿ 25ರಂದು ನಡೆದಿದೆ ಮತ್ತು ವಧುವಿನಂತೆ ನಟಿಸಿದ ಯುವತಿಯರು ತಮ್ಮ ಭಾವಿ ಪತಿಗಳಿಲ್ಲದೆ ಏಕಾಂಗಿಯಾಗಿ ಮದುವೆಯ ವಿಧಿಗಳನ್ನು ನೆರವೇರಿಸಿದ್ದಾರೆ. ಈ ಕುರಿತ ಅಚ್ಚರಿಯ ವಿಡಿಯೋಗಳು ಕೂಡ ವೈರಲ್‌ ಆಗಿದೆ.

ಮುಖ್ಯಮಂತ್ರಿಗಳ ವಿವಾಹ ಯೋಜನೆಯಡಿ ನೀಡುವ ಹಣವನ್ನು ಕಬಳಿಸಲು ಸ್ಥಳೀಯ ಆಡಳಿತವು ಈ ನಕಲಿ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಿದೆ. ಈ ಯೋಜನೆಯಡಿಯಲ್ಲಿ ಸರಕಾರವು ತನ್ನ ಮದುವೆಯ ಸಮಯದಲ್ಲಿ ಪ್ರತಿಯೊಬ್ಬ ಬಡ ವಧುವಿಗೆ 51,000 ರೂ.ನೀಡುತ್ತಾರೆ. ಆದರೆ ವಿವಾಹ ಕಾರ್ಯಕ್ರಮದ ಸಂಘಟಕರು ಯಾದೃಚ್ಛಿಕವಾಗಿ ಹುಡುಗಿಯರನ್ನು ಒಟ್ಟುಗೂಡಿಸಿ ಹಣಕ್ಕಾಗಿ ವಧುವಿನಂತೆ ಪೋಸ್ ನೀಡುವಂತೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಮೊದಲು ಪತ್ರಕರ್ತ ಸಚಿನ್ ಗುಪ್ತಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜನವರಿ 25ರಂದು ಮುಖ್ಯಮಂತ್ರಿಗಳ ಗುಂಪು ವಿವಾಹ ಯೋಜನೆಯಡಿ 568 ಜೋಡಿಗಳು ವಿವಾಹವಾದರು. ವರನಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ವಧುಗಳಿಗೆ ಮಾಲೆ ಹಾಕಲಾಯಿತು. ಅನೇಕರು ಹಲವು ವರ್ಷಗಳ ಹಿಂದೆಯೇ ಮದುವೆಯಾಗಿದ್ದರು. ವಿವಾಹ ಕಾರ್ಯಕ್ರಮದಲ್ಲಿ ವಧು-ವರರಾಗಿ ಕಾಣಿಸಿಕೊಂಡವರಲ್ಲಿ ಅನೇಕರು ಸಹೋದರ-ಸಹೋದರಿಯರಾಗಿದ್ದರು. ದಂಪತಿಗಳಂತೆ ಪೋಸ್ ಕೊಡಲು ಮತ್ತು ಛಾಯಾಚಿತ್ರಗಳನ್ನು ತೆಗೆದುಕೊಳ್ಳಲು ಮತ್ತು ಸರ್ಕಾರದ ಹಣವನ್ನು ಹಂಚಿಕೊಳ್ಳಲು ಈ ಎಲ್ಲಾ ನಾಟಕವನ್ನು ಮಾಡಲಾಗಿದೆ ಎಂದು ಪೋಸ್ಟ್‌ನಲ್ಲಿ ಆರೋಪಿಸಿದ್ದರು.

ವೀಡಿಯೊದಲ್ಲಿ ವಧುವಿನ ಉಡುಪಿನಲ್ಲಿರುವ ಯುವತಿಯರು ಧ್ವನಿವರ್ಧಕದಲ್ಲಿ ನೀಡಲಾದ ಸಲಹೆಗಳ ಪ್ರಕಾರ, ತಮ್ಮನ್ನು ತಾವು ಹಾರ ಹಾಕಿಕೊಳ್ಳುತ್ತಿರುವುದು ಕಂಡುಬರುತ್ತದೆ. ಕೆಲವು ಪುರುಷರು ಕೂಡ ಹೂಮಾಲೆಗಳನ್ನು ಹಾಕಿಕೊಂಡಿದ್ದರು. ಆದರೆ ಅವರು ನಿಜವಾಗಿಯೂ ಮದುವೆಯಾಗಲಿಲ್ಲ, ಬರೀ ಡ್ರಾಮ ಮಾಡಿದ್ದರು ಎನ್ನುವುದು ಬಯಲಾಗಿದೆ.

ವಂಚನೆ ಆರೋಪದ ಮೇಲೆ ಎಫ್‌ಐಆರ್‌:

ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯಡಿಯಲ್ಲಿ ವಂಚನೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಮಾಜ ಕಲ್ಯಾಣ ಇಲಾಖೆಯ ಸಹಾಯಕ ಅಭಿವೃದ್ಧಿ ಅಧಿಕಾರಿ ಮತ್ತು ಎಂಟು ಫಲಾನುಭವಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಬುಧವಾರ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಜನವರಿ 25 ರಂದು ಮಣಿಯಾರ್ ಇಂಟರ್ ಕಾಲೇಜಿನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಈಗಾಗಲೇ ಮದುವೆಯಾಗಿದ್ದ ಅನೇಕರು ಮತ್ತೆ ಮದುವೆಯಾಗಿದ್ದಾರೆ. ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯು ಸಮಾಜ ಕಲ್ಯಾಣ ಯೋಜನೆಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ಕುಟುಂಬದ ಯುವಕ-ಯುವತಿಯರ ವಿವಾಹಕ್ಕೆ ಅನುಕೂಲ ಕಲ್ಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಯಾದವ್ ಮತ್ತು ಅರ್ಚನಾ, ರಂಜನಾ ಯಾದವ್, ಸುಮನ್ ಚೌಹಾಣ್, ಪ್ರಿಯಾಂಕಾ, ಸೋನಂ, ಪೂಜಾ, ಸಂಜು ಮತ್ತು ರಮಿತಾ ಸೇರಿದಂತೆ ಎಂಟು ಫಲಾನುಭವಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮನಿಯಾರ್ ಎಸ್‌ಎಚ್‌ಒ ಮಂತೋಷ್ ಸಿಂಗ್ ತಿಳಿಸಿದ್ದಾರೆ.

ಈ ಬಗ್ಗೆ ದೂರು ದಾಖಲಿಸಿರುವ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ದೀಪಕ್ ಶ್ರೀವಾಸ್ತವ ಮಾತನಾಡಿ, ಈ ಯೋಜನೆಯಡಿ ಸಾಮೂಹಿಕ ವಿವಾಹ ನಡೆದ ಬಳಿಕ ಈಗಾಗಲೇ ವಿವಾಹವಾಗಿದ್ದ ವಧು-ವರರು ಮತ್ತೆ ವಿವಾಹವಾಗುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಜನವರಿ 29ರಂದು ಮುಖ್ಯ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲಾಗಿತ್ತು. ಅನರ್ಹ ಅರ್ಜಿದಾರರು ನೈಜ ಸಂಗತಿಗಳನ್ನು ಮರೆಮಾಚುವ ಮೂಲಕ ಯೋಜನೆಯಡಿ ಲಾಭ ಪಡೆಯಲು ಅಕ್ರಮವಾಗಿ ಅರ್ಜಿ ಸಲ್ಲಿಸಿರುವುದು ತನಿಖೆಯ ವೇಳೆ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ರವೀಂದ್ರಕುಮಾರ್ ಮಾತನಾಡಿ, ಸಾಮೂಹಿಕ ವಿವಾಹ ಕಾರ್ಯಕ್ರಮದ ಫಲಾನುಭವಿಗಳಿಗೆ ಇನ್ನೂ ಹಣ ವಿತರಣೆಯಾಗಿಲ್ಲ. ಇದುವರೆಗೆ ಸಹಾಯಕ ಅಭಿವೃದ್ಧಿ ಅಧಿಕಾರಿ ಹಾಗೂ ಎಂಟು ಮಂದಿ ಫಲಾನುಭವಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿ ತಪ್ಪಿತಸ್ಥರೆಂದು ತಿಳಿದು ಬಂದಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಆಡಳಿತಾರೂಢ ಬಿಜೆಯ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ಅವರು ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, ಯುವತಿಯರ ಜೀವನದ ಮೇಲೆ ಭಾವನಾತ್ಮಕ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

‘ಸಿಎಂ ಗ್ರೂಪ್‌ ಮ್ಯಾರೇಜ್‌ ಸ್ಕೀಂ’ ಯೋಜನೆಯಡಿಯಲ್ಲಿ 51,000ರೂ.ಗಳನ್ನು ಪಾವತಿಸಲಾಗುತ್ತದೆ. ಇದರಲ್ಲಿ 35,000ರೂ.ವಧುವಿಗೆ, 10,000ರೂ.ವೈವಾಹಿಕ ಸಾಮಗ್ರಿಗಳನ್ನು ಖರೀದಿಸಲು ಮತ್ತು 6,000ರೂ. ಕಾರ್ಯಕ್ರಮಕ್ಕೆ ವೆಚ್ಚವಾಗಿ ಪಾವತಿಸಲಾಗುತ್ತದೆ ಎಂದು ಸರ್ಕಾರದ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಇದನ್ನು ಓದಿ: ಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ ಒಪ್ಪಂದವನ್ನು ತಡೆ ಹಿಡಿದ ಅಮೆರಿಕ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...