Homeಮುಖಪುಟಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

- Advertisement -
- Advertisement -

ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಪ್ರಜಾಪ್ರಭುತ್ವದ ಸಂಕೇತವಾಗಿ ನಮ್ಮ ಸಂಸತ್ತು ಕಾರ್ಯನಿರ್ವಹಿಸುತ್ತಿದೆ. ಸಂಸತ್ತಿನಲ್ಲಿ ದೇಶದ ಜನರ ಅಭಿವೃದ್ಧಿಗೆ ಪೂರಕ ಶಾಸನಗಳ ರಚನೆ ಮಾಡಲಾಗುತ್ತದೆ. ಆದರೆ ಇತ್ತೀಚೆಗೆ ಸಂಸತ್ತಿನಲ್ಲಿ ದೇಶದ ಆರ್ಥಿಕ, ಸಾಮಾಜಿಕ, ರಾಜಕೀಯ ವ್ಯವಸ್ಥೆಯ ಬಲಪಡಿಸುವ ಶಾಸನಗಳ ರೂಢೀಕರಣದ ಬದಲು, ರಾಜಕೀಯ ಚರ್ಚೆಗಳು ಮತ್ತು ಗದ್ದಲಗಳಿಗೆ ಸಾಕ್ಷಿಯಾಗುತ್ತಿದೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸಂಸತ್ತಿನಲ್ಲಿ ಪ್ರತಿಪಕ್ಷವು ಕಾವಲು ನಾಯಿಯಾಗಿ ಕಾರ್ಯನಿರ್ವಹಿಸುತ್ತದೆ. ಆದರೆ 2023ರ ಡಿಸೆಂಬರ್‌ನಲ್ಲಿ ಪ್ರತಿಪಕ್ಷದ ಸಂಸದರ ಸಾಮೂಹಿಕ ಅಮಾನತು ಸಂಸತ್ತಿನಲ್ಲಿ ಪ್ರತಿಪಕ್ಷಗಳ ಧ್ವನಿಯೇ ಇಲ್ಲದಂತೆ ಮಾಡಿದೆ. ಇದರಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿಯಾಗಿದೆ.

ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಉಭಯ ಸದನಗಳಿಂದ 141 ಪ್ರತಿಪಕ್ಷದ ಸಂಸತ್ ಸದಸ್ಯರ ಸಾಮೂಹಿಕ ಅಮಾನತು ಮಾಡಲಾಗಿದೆ. ಭಾರತದ ಇತಿಹಾಸದಲ್ಲಿ ಇದು ಮೊದಲ ಬಾರಿಗೆ ನಡೆದ ಬೆಳವಣಿಗೆ ಮತ್ತು ಇದು ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿ ಆರೋಗ್ಯಕರ ಬೆಳವಣಿಗೆಯೂ ಅಲ್ಲವಾಗಿದೆ.

ಪ್ರತಿಪಕ್ಷದ ಸಂಸತ್ ಸದಸ್ಯರ ಸಾಮೂಹಿಕ ಅಮಾನತು ಸಂಸತ್ತಿನಲ್ಲಿ ಬಹುಮತವನ್ನು ಹೊಂದಿರುವ ಆಡಳಿತ ಪಕ್ಷದ ಏಕಪಕ್ಷೀಯ ನಿರ್ಧಾರಕ್ಕೆ ಕಾರಣವಾಗುತ್ತದೆ. ಈ ಹಿಂದೆ ಪ್ರಧಾನಿ ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ಸಂಸತ್ತಿನಲ್ಲಿ ಪ್ರಚಂಡ ಬಹುಮತವನ್ನು ಪಡೆದಿದ್ದ ವೇಳೆ ಇಂತಹ ದೊಡ್ಡ ಪ್ರಮಾಣದ ಅಮಾನತುಗಳು ನಡೆದಿದ್ದವು. 1989ರ ಮಾ.15ರಂದು ಸಂಸತ್ತಿನಲ್ಲಿ ಇಂದಿರಾ ಗಾಂಧಿಯವರ ಹತ್ಯೆಗೆ ಸಂಬಂಧಿಸಿದ ಆಯೋಗದ ವರದಿಯನ್ನು ಮಂಡಿಸುವ ಬಗ್ಗೆ ಗದ್ದಲವನ್ನು ಸೃಷ್ಟಿಸಿದ ನಂತರ 63 ವಿರೋಧ ಪಕ್ಷದ ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು.

ಈ ಬಳಿಕ 2015ರಲ್ಲಿ ಬಿಜೆಪಿ ಸರಕಾರದ ವೇಳೆ 25 ಪ್ರತಿಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಆಗಿನ ಸಂಸದೀಯ ವ್ಯವಹಾರಗಳ ಸಚಿವ ಎಂ ವೆಂಕಯ್ಯ ನಾಯ್ಡು ಅವರು ಕಲಾಪಕ್ಕೆ ಅಡ್ಡಿ ಆರೋಪದಲ್ಲಿ 25 ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸುವ ವೇಳೆ ಕಾಂಗ್ರೆಸ್‌ಗೆ 1989ರ ಘಟನೆಯನ್ನು ನೆನೆಪಿಸಿದ್ದರು. 2014 ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಒಂದು ವರ್ಷದ ನಂತರ ಈ ಬೆಳವಣಿಗೆ ನಡೆದಿತ್ತು.

ಡಿ.13ರಂದು ನಡೆದ ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರು ಮಾತನಾಡಬೇಕು ಎಂದು ಪಟ್ಟು ಹಿಡಿದ ಪ್ರತಿಪಕ್ಷದ 141 ಸಂಸದರನ್ನು ಸಾಮೂಹಿಕವಾಗಿ ಅಮಾನತು ಮಾಡಲಾಗಿತ್ತು. ಸರ್ಕಾರದಿಂದ ಪ್ರತಿಕ್ರಿಯೆಯನ್ನು ಕೋರುವ ಪ್ರತಿಪಕ್ಷಗಳ ನಡವಳಿಕೆಯನ್ನು ಪ್ರಶ್ನಿಸಬಹುದು ಆದರೆ ಅದೇ ಸಮಯದಲ್ಲಿ ಗೃಹ ಸಚಿವರು ಹೇಳಿಕೆ ನೀಡುವಂತೆ ಕೇಳಿರುವ ಪ್ರತಿಪಕ್ಷದ ಬೇಡಿಕೆಯನ್ನು ಅಸಂಸದೀಯ ಎಂದು ಪರಿಗಣಿಸುಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಇಬ್ಬರೂ ಸಂಸತ್ತಿನ ಹೊರಗೆ ಈ ಬಗ್ಗೆ ಮಾತನಾಡುತ್ತಾರೆ. ಆದರೆ ಸಂಸತ್ತಿನಲ್ಲಿ ಬಿಜೆಪಿ ಮತ್ತು ಸರಕಾರದ ಪರವಾಗಿ  ಮಾತನಾಡಬೇಕು ಎನ್ನುವುದು ಪ್ರತಿಪಕ್ಷಗಳ ಬೇಡಿಕೆಯಾಗಿತ್ತು. ಇದಲ್ಲದೆ ಸಂಸತ್ತನ್ನು ನಡೆಸುವ ಜವಾಬ್ದಾರಿಯು ಆಡಳಿತ ನಡೆಸುವ ಸರಕಾರಕ್ಕೆ ಇದೆ ಮತ್ತು ಲೋಪ ಕಂಡು ಬಂದಲ್ಲಿ ಆ ಬಗ್ಗೆ ವಿವರಣೆಯನ್ನು ಕೂಡ ನೀಡಬೇಕಿದೆ.

2014ರಿಂದ ಬಿಜೆಪಿ ಸರ್ಕಾರ ಮತ್ತು ಪ್ರತಿಪಕ್ಷಗಳ ನುಡವಿನ ಗುದ್ದಾಟಕ್ಕೆ ಸಂಸತ್ತು ಹಲವು ಬಾರಿ ಸಾಕ್ಷಿಯಾಗಿದೆ. ಬಿಜೆಪಿಯು 2004ರಿಂದ 2014ರವರೆಗೆ ವಿರೋಧ ಪಕ್ಷದಲ್ಲಿದ್ದಾಗ ಹಲವು ಸಂದರ್ಭಗಳಲ್ಲಿ ಸದನದ ಕಲಾಪಗಳನ್ನು ಸ್ಥಗಿತಗೊಳಿಸಲಾಗಿತ್ತು. 2010ರ ಚಳಿಗಾಲದ ಅಧಿವೇಶನದಲ್ಲಿ 2ಜಿ ತರಂಗಾಂತರ ಹಂಚಿಕೆ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸಿ ಬಿಜೆಪಿ ನೇತೃತ್ವದ ವಿರೋಧ ಪಕ್ಷಗಳು ಕಲಾಪವನ್ನು ಸ್ಥಗಿತಗೊಳಿಸಿದ್ದವು. ದಾಖಲೆಗಳು ಸೂಚಿಸುವಂತೆ, ಆ ಸಮಯದಲ್ಲಿ ಯಾವುದೇ ವಿರೋಧ ಪಕ್ಷದ ಸದಸ್ಯರನ್ನು ಸಂಸತ್ತಿನಿಂದ ಅಮಾನತುಗೊಳಿಸಲಾಗಿಲ್ಲ.

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಆಡಳಿತ ಪಕ್ಷವು ದುರಹಂಕಾರಿಯಾಗಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳುತ್ತಿದ್ದಾರೆ ಮತ್ತು ಪ್ರತಿಪಕ್ಷಗಳನ್ನು ಹೊರಗಿಟ್ಟು ಸಂಸತ್ತಿನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಪ್ರಮುಖ ಮಸೂದೆಗಳನ್ನು ಪಾಸ್‌ ಮಾಡಲು ಬಿಜೆಪಿ ಬಯಸಿದೆ ಎಂದು ಆರೋಪಿಸಿದ್ದಾರೆ. ಮೋದಿ ಸರ್ಕಾರವು ಅಮಾನತುಗಳನ್ನು ಸಮರ್ಥಿಸಿಕೊಂಡಿದ್ದು, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಂಸದರು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಡಿ.19ರಂದು ದೆಹಲಿಯಲ್ಲಿ ನಡೆದ INDIA ಮೈತ್ರಿ ಕೂಟದ ಸಭೆಯಲ್ಲಿ ಈ ಕ್ರಮವನ್ನು ಖಂಡಿಸಿ ಡಿ.22ರಂದು ರಾಷ್ಟ್ರವ್ಯಾಪಿ ಆಂದೋಲನಗಳನ್ನು ನಡೆಸಲು ಪ್ರತಿಪಕ್ಷಗಳು ನಿರ್ಧರಿಸಿದೆ. ಸಂಸದರ ಅಮಾನತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಹಾಸ್ಯ ಮತ್ತು ಅವಮಾನ ಎಂದು ಹೇಳಿದೆ. ಸಂಸತ್ತಿನಲ್ಲಿ 141 ಸಂಸದರನ್ನು ಅಮಾನತು ಮಾಡಿದ ಬಳಿಕ ಸಂಸದರು ಕೇಳಲು ಇಚ್ಚಿಸಿದ 27 ಪ್ರಶ್ನೆಗಳನ್ನು ಸಂಸತ್ತಿನ ಪ್ರಶ್ನೋತ್ತರಗಳ ಪಟ್ಟಿಯಿಂದ ಡಿಲಿಟ್ ಮಾಡಲಾಗಿದೆ. ಇದಲ್ಲದೆ ಪ್ರಶ್ನೆ ಕೇಳಲು ಇಚ್ಚಿಸಿದ ಅಮಾನತುಗೊಂಡ ಸಂಸದರನ್ನು ಕೂಡ ಪಟ್ಟಿಯಿಂದ ತೆಗೆದು ಹಾಕಗಿದೆ. ಈ ಮೂಲಕ ಸಂಸತ್ತಿನಲ್ಲಿ ಪ್ರತಿಪಕ್ಷಗಳು ಧ್ವನಿ ಮತ್ತು ಪ್ರಶ್ನೆ ಸಂಸತ್ತಿನಲ್ಲಿ ಕುಗ್ಗಿ ಹೋಗುವಂತಾಗಿದೆ. ಯಾವುದೇ ವಿರೋಧವಿಲ್ಲದೆ ಸಂಸತ್ತಿನಲ್ಲಿ ಏಕಪಕ್ಷೀಯವಾಗಿ ಆಡಳಿತ ಪಕ್ಷಕ್ಕೆ ಬಿಲ್‌ಗಳನ್ನು ಪಾಸ್‌ ಮಾಡಲು ಅನುಕೂಲಕರವಾಗಿದೆ. ಆದರೆ ಸಂಸದೀಯ ಪ್ರಜಾಪ್ರಭುತ್ವಕ್ಕೆ ಈ ಬೆಳವಣಿಗೆ ಮಾರಕವಾಗಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಅಮಾನತುಗೊಂಡ ಸಂಸದರು ಕೇಳಿದ್ದ 27 ಪ್ರಶ್ನೆಗಳು ಡಿಲಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...