ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951 ಸ್ಥಳಗಳನ್ನು ಪರಿಶೀಲಿಸಲಾಗಿದ್ದು, ಬೆಂಗಳೂರಿನಲ್ಲೇ 503 ಮಕ್ಕಳು ಪತ್ತೆಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಗ್ಯಾರೇಜ್‌ಗಳು, ಹೋಟೆಲ್‌ಗಳು, ಅಂಗಡಿಗಳು, ಮಾರುಕಟ್ಟೆಗಳು, ಗೋದಾಮುಗಳು, ಬೇಕರಿಗಳು, ನಿರ್ಮಾಣ ಸ್ಥಳಗಳು ಸೇರಿದಂತೆ ಮಕ್ಕಳನ್ನು ಕೆಲಸಕ್ಕೆ ಬಳಸುವ ಸಾಧ್ಯತೆ ಇರುವ ವಿವಿಧ ವಾಣಿಜ್ಯ ಮತ್ತು ಇತರ ಸ್ಥಳಗಳನ್ನು ಪರಿಶೀಲಿಸಲಾಗಿದೆ. ಎರಡು ಗಂಟೆಗಳ ಅವಧಿಯಲ್ಲಿ … Continue reading ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು