Homeಕರ್ನಾಟಕಚಿಕ್ಕಬಳ್ಳಾಪುರದಲ್ಲಿ ಭಾರಿ ಸ್ಫೋಟ- 6 ಕಾರ್ಮಿಕರು ಸಾವು; ಮೂವರು ಗಂಭೀರ

ಚಿಕ್ಕಬಳ್ಳಾಪುರದಲ್ಲಿ ಭಾರಿ ಸ್ಫೋಟ- 6 ಕಾರ್ಮಿಕರು ಸಾವು; ಮೂವರು ಗಂಭೀರ

- Advertisement -
- Advertisement -

ಇತ್ತೀಚೆಗೆ ಶಿವಮೊಗ್ಗದ ಹುಣಸೋಡಿನಲ್ಲಿ ಸಂಭವಿಸಿದ ಸ್ಪೋಟದ ಮಾದರಿಯಲ್ಲೇ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ್ದು, ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಜಿಲೆಟಿನ್ ಮಂಗಳವಾರ ಸ್ಪೋಟಗೊಂಡಿದ್ದು, ಆರು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭಾರಿ ಸ್ಪೋಟಕ್ಕೆ ಕಾರ್ಮಿಕರ ದೇಹಗಳು ಛಿದ್ರವಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಮೃತ ಆರು ಜನರಲ್ಲಿ ಓರ್ವ ಹೀರೇನಾಗವೇಲಿ ಗ್ರಾಮದವರಾಗಿದ್ದು, ಮೂವರು ಆಂಧ್ರ ಪ್ರದೇಶದವರು, ಒಬ್ಬ ನೇಪಾಳದವರು ಹಾಗೂ ಮತ್ತೊಬ್ಬರು ಬಾಗೇಪಲ್ಲಿಯ ಕಾರ್ಮಿಕ ಎಂದು ತಿಳಿದು ಬಂದಿದೆ. ನಾಗರಾಜ ರೆಡ್ಡಿ ಎಂಬವರಿಗೆ ಸೇರಿದ್ದ ಬ್ರಮರವಾಸಿನಿ ಕ್ರಷರ್‌‌ನಲ್ಲಿ ಇವರು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕೇರಳ – ಈಗ ಚುನಾವಣೆ ನಡೆದರೂ ಕಮ್ಯುನಿಷ್ಟ್ ಸರ್ಕಾರ ಮತ್ತೆ ಅಧಿಕಾರಕ್ಕೆ!

ಘಟನೆಯು ತೀವ್ರ ಆಘಾತ ತಂದಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, “ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಯತ್ನಾಳ್ ಕಾಂಗ್ರೆಸ್‌ನ ‘ಬಿ’ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ – ಸಚಿವ ಮುರುಗೇಶ ನಿರಾಣಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...